ಕರ್ನಾಟಕದಲ್ಲಿ ಇನ್ನೂ 500 ಪಬ್ಲಿಕ್ ಶಾಲೆ: ಸಿಎಂ ಸಿದ್ದು ಉಸ್ತುವಾರಿ

ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್), ಸಾಮಾಜಿಕ ಸಂಸ್ಥೆಗಳ ಸಹಕಾರದೊಂದಿಗೆ 500 ಕೆಪಿಎಸ್‌ಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ. 

CM Siddaramaiah in charge of 500 More Public Schools in Karnataka grg

ಬೆಂಗಳೂರು(ಜ.26): ರಾಜ್ಯದಲ್ಲಿ ಇನ್ನೂ 2000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಯೋಜಿಸಿರುವ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್), ಸಾಮಾಜಿಕ ಸಂಸ್ಥೆಗಳ ಸಹಕಾರದೊಂದಿಗೆ 500 ಕೆಪಿಎಸ್‌ಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ. 

ಈ ಸಮಿತಿಗೆ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವರುಗಳ ಜೊತೆಗೆ ಜೊತೆಗೆ ಕಂದಾಯ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ಸಚಿವರು ಹಾಗೂ ವಿವಿಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರು ಹಾಗೂ ಈ ಇಲಾಖೆಗಳ ಉನ್ನತ ಅಧಿಕಾರಿಗಳು ಸೇರಿ ಒಟ್ಟು 18 ಮಂದಿ ಸದಸ್ಯರಾಗಿರುತ್ತಾರೆ.

3 ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ: ಸಚಿವ ಮಧು ಬಂಗಾರಪ್ಪ

ಮೇಲುಸ್ತುವಾರಿ ಸಮಿತಿ ಜೊತೆಗೆ ಕೆಪಿಎಸ್ ಕಾರ್ಯಕಾರಿ ಸಮಿತಿಯನ್ನೂ ಸರ್ಕಾರ ರಚಿಸಿದೆ.

Latest Videos
Follow Us:
Download App:
  • android
  • ios