ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸುವಂತೆ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು (ಜೂ.07): ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ವಿಚಾರವಾಗಿ ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಚ್ಚರಿಕೆಯ ಹೆಜ್ಜೆಯನ್ನು ಇಡಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸುವಂತೆ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಸಿಎಂ ತಾತ್ಕಾಲಿಕ ಸಮಿತಿಗೆ ಸೂಚನೆ ನೀಡಿದ್ದಾರೆ. 1 ರಿಂದ 10ನೇ ತರಗತಿವರೆಗೆ ಪಠ್ಯ ಪರಿಷ್ಕರಣೆ ಮಾಡಲಾಗಿತ್ತು. ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಪಠ್ಯ ಪರಿಷ್ಕರಣೆ ಸಮಿತಿ ರಚನೆ ಮಾಡುವಂತೆ ಸೂಚಿಸಿದ್ದಾರೆ. ಯಾವ ಯಾವ ಪಾಠಗಳನ್ನು ಕೈಬಿಡಬೇಕು, ಪಾಠಗಳಲ್ಲಿ ಕೆಲ ಪದ ಬಳಕೆ ಸೇರಿಸಲಾಗಿದೆ.
ರಾಜ್ಯದಲ್ಲಿ 5 ಗ್ಯಾರಂಟಿಗಳ ಅನುಷ್ಠಾನದ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ನೀಡಿದ ಸರ್ಕಾರ!
ಅದನ್ನ ಗುರುತಿಸಿ, ಇನ್ನೊಂದು ವಾರದಲ್ಲಿ ಪಠ್ಯ ಪರಿಷ್ಕರಣೆ ಲೋಪದೋಷ ಸಂಬಂಧ ವರದಿ ಕೊಡುವಂತೆ ತಾತ್ಕಾಲಿಕ ಸಮಿತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇನ್ನು ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಪಾಠಗಳ ಸೇರ್ಪಡೆ ಇಲ್ಲ, ಜೊತೆಗೆ ಕಳೆದ ವರ್ಷ ಸೇರಿಸಲಾಗಿದ್ದ ಪಾಠಗಳಿಗೆ ಕತ್ತರಿ ಬೀಳುವ ಸಾಧ್ಯತೆಯಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ್ ಬಲರಾಮ್ ಹೆಡ್ಗೆವಾರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ.
ವಿವಾದಿತ ಪಠ್ಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ: ಆರೆಸ್ಸೆಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳೂ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, ಆಕ್ಷೇಪ ಕೇಳಿಬಂದಿರುವ ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜೋಯಿಡಾದಲ್ಲಿ ಕೊಂಕಣಿ ಕಲಿತ ರಿಷಬ್ ಶೆಟ್ಟಿ: ಕುಣಬಿ ಜನರ ಜತೆ ಭಾಷಾಭ್ಯಾಸ
ಆದರೆ, 2023-24ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳನ್ನು ತಲುಪಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಮುದ್ರಿಸುವ ಪ್ರಕ್ರಿಯೆಗೆ ಕೈಹಾಕುವುದಿಲ್ಲ. ಬದಲಾಗಿ, ವಿತರಿಸಲಾಗಿರುವ ಪಠ್ಯದಲ್ಲಿ ವಿವಾದಿತ ಹಾಗೂ ಆಕ್ಷೇಪಣೆ ಕೇಳಿಬಂದಿರುವ ಪಾಠಗಳನ್ನು ಪಟ್ಟಿಮಾಡಿ, ಅವುಗಳನ್ನು ಮಕ್ಕಳಿಗೆ ಬೋಧನೆ ಮಾಡದಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ತೀರ್ಮಾನಿಸಿದೆ. ಆದರೆ, ಈ ವಿಚಾರವನ್ನು ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿ ಅನಂತರ ಅಧಿಕೃತವಾಗಿ ಪ್ರಕಟಿಸಲಿದೆ.