ಕಾಲೇಜ್ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್...!

ಕಳೆದ 8 ತಿಂಗಳು ನಂತರ ಹಂತ-ಹಂತವಾಗಿ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಗುಡ್‌ ನ್ಯೂಸ್ ನಿಡಿದೆ.
 

College Students Bu Pass Date extended By KSRTC rbj

ಬೆಂಗಳೂರು, ನ.18): ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. 2019 -20 ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯ, ಪದವಿ, ವೈದ್ಯಕೀಯ, ತಾಂತ್ರಿಕ, ಡಿಪ್ಲೊಮಾ, ಅನುದಾನ, ಅನುದಾನ ರಹಿತಿ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಚಟುವಟಿಕೆಗಳನ್ನು ದಿನಾಂಕ 17-11-2020ರಿಂದ ಪ್ರಾರಂಭಿಸಲು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿದೆ.

ಕಾಲೇಜ್ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್...!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ದಿನಾಂಕ 10-12-2020ರವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿದೆ.

 ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಪ್ರಸಕ್ತ ವರ್ಷದ ಶುಲ್ಕ ಪಾವತಿ ರಸೀದಿಯೊಂದಿಗೆ, 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಸಂಬಂಧ ಪಟ್ಟ ಮಾರ್ಗದಲ್ಲಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಸಂಸ್ಥೆ ಮನವಿ ಮಾಡಿದೆ.

Latest Videos
Follow Us:
Download App:
  • android
  • ios