ದೇಶದ ಒಟ್ಟು 180 ನಗರಗಳಲ್ಲಿ 264 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ಈ ಬಾರಿಯ ಪರೀಕ್ಷೆಗೆ ಒಟ್ಟು 90,607 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಾಮೆಡ್‌-ಕೆ ಯುಜಿಇಟಿ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಾಗಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. 

ಬೆಂಗಳೂರು(ಮೇ.27): ರಾಜ್ಯದ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ಕಾಮೆಡ್‌-ಕೆಯ ಪ್ಯಾನ್‌ ಇಂಡಿಯಾ ಸದಸ್ಯ ವಿಶ್ವವಿದ್ಯಾಲಯಗಳಲ್ಲಿನ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರ ಭಾನುವಾರ ದೇಶಾದ್ಯಂತ ‘ಕಾಮೆಡ್‌ಕೆ ಯುಜಿಇಟಿ 2023’ ನಡೆಯಲಿದೆ.

ದೇಶದ ಒಟ್ಟು 180 ನಗರಗಳಲ್ಲಿ 264 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ಈ ಬಾರಿಯ ಪರೀಕ್ಷೆಗೆ ಒಟ್ಟು 90,607 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಾಮೆಡ್‌-ಕೆ ಯುಜಿಇಟಿ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಾಗಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ಮೊದಲ ಹಂತದ ಪರೀಕ್ಷೆಗಳು, ಮಧ್ಯಾಹ್ನ 2ರಿಂದ 5 ಗಂಟೆವರೆಗೆ ಎರಡನೇ ಹಂತದ ಪರೀಕ್ಷೆಗಳು ನಡೆಯಲಿವೆ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ನಿಗದಿತ ಸಮಯಕ್ಕೆ ಮೊದಲೇ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುವಂತೆ ಕಾಮೆಡ್‌-ಕೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ 27 ಸಾವಿರ ಅತಿಥಿ ಶಿಕ್ಷಕರ ನೇಮಕ: ಜಿಲ್ಲಾವಾರು ಹುದ್ದೆಗಳ ವಿವರ ಇಲ್ಲಿದೆ..

ತಪ್ಪದೆ ಪರೀಕ್ಷಾ ಪ್ರವೇಶ ಪತ್ರ, ಮಾನ್ಯತೆ ಇರುವ ಯಾವುದಾದರೊಂದು ಗುರುತಿನ ಚೀಟಿ, ಎರಡು ಪಾಸ್‌ಪೋರ್ಚ್‌ ಅಳತೆಯ ಫೋಟೋ ತರಬೇಕು. ಇದು ಅಖಿಲ ಭಾರತ ಮಟ್ಟದ ಪರೀಕ್ಷೆಯಾಗಿರುವುದರಿಂದ ಸರ್ಕಾರದ ಮಾರ್ಗದರ್ಶನದಂತೆ ಪೂರ್ಣ ತೋಳಿನ ಉಡುಪು, ಫುಲ್‌ ಶರ್ಚ್‌, ಶೂ, ಬೆಲ್ಟ್‌, ಕಿವಿಯೋಲೆ ಸೇರಿದಂತೆ ಯಾವುದೇ ರೀತಿಯ ಆಭರಣಗಳು, ಕೈಗಡಿಯಾರ, ಕ್ಯಾಲ್ಕುಲೇಟರ್‌ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ನಿಷೇಧಿಸಲಾಗಿದೆ. ಒಂದು ಪೆನ್ಸಿಲ್‌, ವಾಟರ್‌ ಬಾಟಲ್‌ ತರಲು ಮಾತ್ರ ಅವಕಾಶವಿದೆ ಎಂದು ತಿಳಿಸಲಾಗಿದೆ.