ರಾಷ್ಟ್ರೀಯ ಶಿಕ್ಷಣ ನೀತಿ ತರಾತುರಿ ಜಾರಿಗೆ ಸಿದ್ದರಾಮಯ್ಯ ವಿರೋಧ

  • ಕೊರೋನಾ ಸಾಂಕ್ರಾಮಿಕ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ಸೇರಿ ಆಡಳಿತ ವ್ಯವಸ್ಥೆಯೇ ಸ್ಥಗಿತ
  • ಇಂತಹ ಸಮಯದಲ್ಲಿ ಸರ್ಕಾರ ತರಾತುರಿಯಲ್ಲಿ 2020ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬಾರದು 
  • ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ
Congress Leader Sidaramaiah opposes National Education Policy  snr

ಬೆಂಗಳೂರು (ಜು.09):  ಕೊರೋನಾ ಸಾಂಕ್ರಾಮಿಕ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ಸೇರಿ ಆಡಳಿತ ವ್ಯವಸ್ಥೆಯೇ ಸ್ಥಗಿತಗೊಂಡಿದೆ. ಇಂತಹ ಸಮಯದಲ್ಲಿ ಸರ್ಕಾರ ತರಾತುರಿಯಲ್ಲಿ 2020ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬಾರದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಿಕ್ಷಣ ತಜ್ಞರು, ಪೋಷಕರು, ಪ್ರಜ್ಞಾವಂತರು, ವಿದ್ಯಾರ್ಥಿ ಹಾಗೂ ಬೋಧಕ ವರ್ಗ ಸೇರಿದಂತೆ ಯಾರ ಬಳಿಯೂ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ಚರ್ಚೆಯಾಗಿಲ್ಲ. 

ಆ.9ರಿಂದ ರಾಜ್ಯದಲ್ಲಿ ಪದವಿ ತರಗತಿ ಆರಂಭಕ್ಕೆ ಸಲಹೆ ...

ಹೀಗಿದ್ದರೂ ಏಕಾಏಕಿ ಜಾರಿ ಮಾಡಲು ಹೊರಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಎನ್‌ಇಪಿ-2020 ಅನ್ನು ಇದುವರೆಗೂ ಸಂಸತ್ತಿನಲ್ಲಿ ಮಂಡಿಸಿಲ್ಲ, ಚರ್ಚೆಯೂ ಆಗಿಲ್ಲ. ಅದೇ ರೀತಿ ರಾಜ್ಯದಲ್ಲೂ ಕರಡು ಅಧಿಸೂಚನೆ ಹೊರಡಿಸಿಲ್ಲ. ವಿಧಾನಸಭೆ / ಪರಿಷತ್‌ನಲ್ಲಿ ಚರ್ಚೆಯಾಗಿಲ್ಲ. ಸಂವಿಧಾನದ ಪರಿಚ್ಛೇದ 7 ರ ಪ್ರಕಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಅಂದರೆ ಶಿಕ್ಷಣದ ವಿಚಾರದಲ್ಲಿ ರಾಜ್ಯಗಳಿಗೂ ಇರುವ ಸಮಾನ ಹಕ್ಕನ್ನು ಕಿತ್ತುಕೊಂಡು ಕೇಂದ್ರ ಬಲವಂತದಿಂದ ರಾಜ್ಯಗಳಲ್ಲಿ ಜಾರಿ ಮಾಡಲು ಹೊರಟಿದೆ. ಇದರಲ್ಲಿ ಹಲವು ಅಪಾಯಕಾರಿ ಶಿಫಾರಸುಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಶಾಲೆ ಆರಂಭಿಸಲು ಶಿಕ್ಷಣ ತಜ್ಞರ ಆಗ್ರಹ ..

ಕನ್ನಡ ವಿರೋಧಿ ನೀತಿ:  1 ರಿಂದ 8 ತರಗತಿಯ ಶಿಕ್ಷಣಕ್ಕೆ ಕೇಂದ್ರೀಕೃತ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಬೇಕೆಂದು ಶಿಫಾರಸು ಮಾಡಲಾಗಿದೆ. ಈ ಕ್ರಮವು ಕನ್ನಡದಂತಹ ಭಾಷಾ ಸಂಸ್ಕೃತಿಗಳ ವಿರುದ್ಧವಾಗಿದೆ. ಈಗಾಗಲೇ ಬಹುತೇಕ ಚರಿತ್ರೆಯ ಪುಸ್ತಕಗಳಲ್ಲಿ ಕನ್ನಡದ, ಕರ್ನಾಟಕದ ಸಂಸ್ಕೃತಿ, ಆಡಳಿತ, ವಾಣಿಜ್ಯ, ಸಾಮಾಜಿಕ ಚಿಂತನೆಗಳೇ ಮಾಯವಾಗಿವೆ. ಹೀಗಾಗಿ ಶಿಕ್ಷಣ ನೀತಿ ಆಯಾ ರಾಜ್ಯ ಪಠ್ಯಕ್ರಮವನ್ನು ಅಳವಡಿಸಿಕೊಂಡು ಈ ನೆಲದ, ಮಣ್ಣಿನ ಸಂಗತಿಗಳನ್ನು ಪಾಠಗಳಲ್ಲಿ ಮಕ್ಕಳು ಕಲಿಯುವಂತಿರಬೇಕು. ನೂತನ ನೀತಿಯಲ್ಲಿ ತ್ರಿ ಭಾಷಾ ಸೂತ್ರದಲ್ಲಿ ಇಂಗ್ಲಿಷ್‌ ಮತ್ತು ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇದು ಭಾಷಾ ಹೇರಿಕೆ ಮಾತ್ರವಲ್ಲದೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ ಎಂದು ಎಚ್ಚರಿಸಿದರು.

ಏಕಪಕ್ಷೀಯ ನಿರ್ಧಾರ:  ರಾಜ್ಯ ಸರ್ಕಾರ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮದ ಸುಧಾರಣೆಗಾಗಿ ಟಾಸ್ಕ್‌ಫೋರ್ಸ್‌ ಉಪ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿರುವ ನಾಲ್ಕು ಜನ ಸದಸ್ಯರು ಮತ್ತು ಅಧ್ಯಕ್ಷರು ಏಕಪಕ್ಷೀಯವಾಗಿ ಕರ್ನಾಟಕದ ಉನ್ನತ ಶಿಕ್ಷಣದ ಭವಿಷ್ಯವನ್ನು ನಿರ್ಧರಿಸುವುದು ಸರಿಯಲ್ಲ. ಈ ಟಾಸ್ಕ್‌ಫೋರ್ಸ್‌ ಸಿಬಿಸಿಎಸ್‌ ಪಠ್ಯಕ್ರಮದ ಸ್ವರೂಪವನ್ನು ರಚಿಸಲು ಯಾರೊಂದಿಗೆ ಸಮಾಲೋಚನೆ ನಡೆಸಿದೆ? ಯಾವ ಮಾದರಿಗಳನ್ನು ಬಳಸಿದೆ ಎನ್ನುವ ವಿವರಗಳಿಲ್ಲ. ಹೀಗಾಗಿ ಕೂಡಲೇ ಇದನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿದರು.

Latest Videos
Follow Us:
Download App:
  • android
  • ios