1ರಿಂದ 8ನೇ ತರಗತಿ ಪರೀಕ್ಷೆ: ಮಹತ್ವದ ನಿರ್ಧಾರ ಕೈಗೊಂಡ ಮಹಾ ಸರ್ಕಾರ

ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ಪರೀಕ್ಷೆ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

Coronavirus Maharashtra Schools Promote Students of Class 1 to Class 8 Without Exams rbj

ಮುಂಬೈ, (ಏ.03): ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಈ ಕುರಿತು ಮಹಾರಾಷ್ಟ್ರದ ಪ್ರಾಥಮಿಕ ಶಿಕ್ಷಣ ಸಚಿವೆ ವರ್ಷಾ ಗಾಯ್ಕ್ ವಾಡ್ ಟ್ವೀಟರ್ ನಲ್ಲಿ ಈ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1ರಿಂದ 8ನೇ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ತರಗತಿ ವಿದ್ಯಾರ್ಥಿಗಳಿಗೆಲ್ಲಾ ಪರೀಕ್ಷೆ ಇಲ್ಲ

ಏತನ್ಮಧ್ಯೆ 9ನೇ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ನಿರ್ಧಾರ ಪರಿಶೀಲನೆಯಲ್ಲಿದೆ. ಈ ಬಗ್ಗೆ ಕೂಡಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ದಿನಾಂಕದಂದು ನಡೆಯಲಿದೆ.

Latest Videos
Follow Us:
Download App:
  • android
  • ios