ಖಾಸಗಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆ ನಿರ್ಮಾಣ : ಜಗದೀಶ ಶೆಟ್ಟರ
ಖಾಸಗಿ ಶಾಲೆಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಯನ್ನು ನಿರ್ಮಿಸುತ್ತಿದ್ದು ಉನ್ನತ ದರ್ಜೆಗೆ ಏರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಹುಬ್ಬಳ್ಳಿ (ನ.13) : ಖಾಸಗಿ ಶಾಲೆಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಯನ್ನು ನಿರ್ಮಿಸುತ್ತಿದ್ದು ಉನ್ನತ ದರ್ಜೆಗೆ ಏರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು. ಭಾನುವಾರ ಇಲ್ಲಿನ ಆದರ್ಶ ನಗರದ ಕನ್ನಡ ಭವನದಲ್ಲಿ ಶಾಸಕರ ಅನುದಾನದಡಿಯಲ್ಲಿ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಕಂಪ್ಯೂಟರ್, ಪುಸ್ತಕ ಹಾಗೂ ಡೆಸ್‌್ಕ ಮತ್ತು ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೋನಾ ಸಂದರ್ಭದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್, ಧನ ಸಹಾಯ ನೀಡಲಾಗಿದೆ. ಈ ಮೂಲಕ ಕಾರ್ಮಿಕರ ಸಮಸ್ಯೆಗೆ ಸರ್ಕಾರ ಸ್ಪಂದಿಸಿದೆ. ಸರ್ಕಾರದ ಹಲವು ಸೌಲಭ್ಯಗಳು ಕಾರ್ಮಿಕರಿಗೆ ಮುಟ್ಟುತ್ತಿವೆ. ಸರ್ಕಾರಿ ಶಾಲೆಗಳಿಗೆ ಕಟ್ಟಡ, ಆಟದ ಮೈದಾನ, ಹೊಸ ಸಲಕರಣೆ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ದೂರು ಸ್ವೀಕಾರಕ್ಕೆ ತಾಲೂಕಿಗೆ ಆಗಮಿಸುವ ಲೋಕಾಯುಕ್ತ ಅಧಿಕಾರಿಗಳು
ಕಾರ್ಮಿಕ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಜೋಗುರ ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ವಿವಿಧ ಸೌಲಭ್ಯ ವಿತರಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ವೈದ್ಯಕೀಯ ಧನ ಸಹಾಯ ಒದಗಿಸಲಾಗುತ್ತಿದೆ ಎಂದರು.
ನಾಗಶೆಟ್ಟಿಕೊಪ್ಪದ ಪ್ರೌಢಶಾಲೆ ಹಾಗೂ ಉಣಕಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ 7 ಸಾವಿರ ಪುಸ್ತಕಗಳು, 15 ಕಂಪ್ಯೂಟರ್ ಮತ್ತು 100 ಡೆಸ್‌್ಕ ವಿತರಿಸಲಾಯಿತು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಉಪಮೇಯರ್ ಉಮಾ ಮುಕುಂದ, ಸದಸ್ಯರಾದ ರೂಪಾ ಶೆಟ್ಟಿ, ಸಂತೋಷ ಚವ್ಹಾಣ, ವೆಂಕಟೇಶ ಮೇಸ್ತ್ರಿ, ಮಲ್ಲಿಕಾರ್ಜುನ ಗುಂಡೂರ, ಉಮೇಶಗೌಡ ಕೌಜಗೇರಿ, ಎಂ.ಆರ್. ನರಗುಂದ, ಬೀರಪ್ಪ ಖಂಡೇಕರ, ಕಾರ್ಮಿಕ ಇಲಾಖೆ ಅಧಿಕಾರಿಗಳು, ವಿಕಲಚೇತನ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ಕಟ್ಟಡ ಕಾರ್ಮಿಕರು ಇತರರಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ ಪ್ರಾಸ್ತಾವಿಕ ಮಾತನಾಡಿದರು. ಶ್ರೀದೇವಿ ನಾಗಲಿಕರ ಪ್ರಾರ್ಥಿಸಿದರು. ಶಿಕ್ಷಣ ಸಂಯೋಜಕ ಪ್ರಭಾಕರ ಜಿ. ನಿರೂಪಿಸಿದರು. ಲಕ್ಷ್ಮೇಧನ್ನಕ್ಕನವರ ವಂದಿಸಿದರು. ಧಾರವಾಡ: ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ, ಜನಜಾಗೃತಿಗಾಗಿ ಕಾಲ್ನಡಿಗೆ