ಶೇ. 67.08 ಅಂಕ ಗಳಿಸಿದ ದಿವ್ಯಾ| ಡಿಎಂ-ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯಾ ಅರವಿಂದ ಹಿರೊಳ್ಳಿ ರಾಷ್ಟ್ರಮಟ್ಟದಲ್ಲಿ ಮೊದಲ ರಾರಯಂಕ್|
ವಿಜಯಪುರ(ಡಿ.07): ನವದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಡಿಎಂ-ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯಾ ಅರವಿಂದ ಹಿರೊಳ್ಳಿ ಅವರು ರಾಷ್ಟ್ರಮಟ್ಟದಲ್ಲಿ ಮೊದಲ ರಾರಯಂಕ್ ಗಳಿಸಿದ್ದಾರೆ.
ದಿವ್ಯಾ ಅವರು ಶೇ. 67.08 ಅಂಕ ಗಳಿಸಿದ್ದಾರೆ. ದಿವ್ಯಾ ಅವರು ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್ ಹಿರಿಯ ವಕೀಲ ಅರವಿಂದ ಹಿರೊಳ್ಳಿ ಅವರ ಪುತ್ರಿ. ಬಿಎಲ್‌ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಎಂಡಿ, ಪಾಂಡಿಚೇರಿಯ ಜಿಪ್ ಮೇರ್‌ನಲ್ಲಿ ಫೆಲೋಷಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ನ್ಯೂರೋ ಕ್ರಿಟಿಕಲ್ ಕೇರ್ ವಿಭಾಗದಲ್ಲಿ ಫೆಲೋಶಿಪ್ ಪಡೆದಿದ್ದಾರೆ.
ಈ ಪ್ರವೇಶ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಬರುವ ನಿರೀಕ್ಷೆ ಇತ್ತು. ನನ್ನ ನಿರೀಕ್ಷೆ ನಿಜವಾಗಿದ್ದು ತುಂಬಾ ಖುಷಿ ನೀಡಿದೆ. ಭವಿಷ್ಯದಲ್ಲಿ ಕ್ರಿಟಿಕಲ್‌ಕೇರ್ ವಿಭಾಗದಲ್ಲಿ ಹೆಚ್ಚಿನ ಸಾಧನೆ ಮಾಡುವ ಉದ್ದೇಶ ನನಗಿದೆ ಎಂದು ದಿವ್ಯಾ ಅರವಿಂದ ಹಿರೊಳ್ಳಿ ಅವರು ತಿಳಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 7, 2020, 3:04 PM IST