ಧಾರವಾಡ: ಶಿಥಿಲ, ಹಾನಿಗೊಳಗಾದ ಶಾಲಾ ಕಟ್ಟಡದಲ್ಲಿ ಮಕ್ಕಳನ್ನು ಕೂಡಿಸದಂತೆ ಡಿಸಿ ಎಚ್ಚರಿಕೆ

 ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

Dont teaching in a dilapidated classroom DC gurudatt warn at dharwad rav

 ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ 

ಧಾರವಾಡ (ಜು.20):  ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಹಾಗೂ ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜ್ಞಾಪನಾಪತ್ರ ನೀಡಿ, ಆದೇಶಿಸಿರುವ ಜಿಲ್ಲಾಧಿಕಾರಿಗಳು ಮಳೆಗಾಲ ಪ್ರಾರಂಭವಾಗಿರುವುದರಿಂದ ತಮ್ಮ ತಾಲೂಕುಗಳಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಿಂದ, ಬ್ಲಾಕ್ ಮಟ್ಟದ ಸಂಪನ್ಮೂಲ ಅಧಿಕಾರಿಗಳಾದ
(ಸಿ.ಆರ್.ಪಿ, ಬಿ.ಆರ್.ಪಿ) ನೋಡಲ್ ಅಧಿಕಾರಿಗಳಿಂದ ವರದಿ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.

 

ರಸಗೊಬ್ಬರ ಮಾರಾಟಕ್ಕೆ ಸರ್ಕಾರಿ ದರ ನಿಗಧಿ, ಹೆಚ್ಚುವರಿ ದರ ವಸೂಲಿಗೆ ಲೈಸನ್ಸ್ ರದ್ದತಿಗೆ ಜಿಲ್ಲಾಧಿಕಾರಿ ಕ್ರಮ

ಶಿಥಿಲಗೊಂಡಿರುವ ಹಾಗೂ ಹಾನಿಗೊಳಗಾದ ಕಟ್ಟಡಗಳಿದ್ದಲ್ಲಿ ಅಂತಹ ಕಟ್ಟಡಗಳಲ್ಲಿ ಯಾವುದೇ ವರ್ಗಗಳನ್ನು ನಡೆಸದಂತೆ ಸಂಬಂದಿಸಿದ ಮುಖ್ಯ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರಿಗೆ ಸೂಚಿಸಿ, ಅದು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಶಿಥಿಲವಾದ ಹಾಗೂ ಹಾನಿಗೊಳಗಾದ ಕಟ್ಟಡಗಳು ಮರುನಿರ್ಮಾಣ ಮತ್ತು ರಿಪೇರಿ ಆಗುವವರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಾಠ-ಪ್ರವಚನಕ್ಕೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

ನಿನ್ನೆ‌ ಧಾರವಾಡ ತಾಲೂಕಿನ ಬೋಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿದು ಮೂವರು ಮಕ್ಕಳಿಗೆ ಗಾಯವಾಗಿರುವ ಹಿನ್ನಲೆ‌ ಜಿಲ್ಲಾಧಿಕಾರಿಗಳು ಎಚ್ಚೆತ್ತುಕ್ಕೊಂಡು ಜಿಲ್ಲೆಯ ಎಲ್ಲ‌ ಶಾಲಾ ಶಿಕ್ಷಕರಿಗೂ ಮುಖ್ಯೋಪಾಧ್ಯಾಯ ರಿಗೂ ಸೇರಿದಂತೆ ಬಿಇಓ ಡಿಡಿಪಿಐ ಗಳಗೆ ಖಡಕ್ ಎಚ್ಚರಿಕೆಯನ್ನ‌ ರವಾನೆ ಮಾಡಿದ್ದಾರೆ..ಇನ್ನು ಈ ರೀತಿ ಘಟನೆ ಆಗುವುದರಿಂದ ಶಾಲಾ ಮಕ್ಕಳನ್ನ ಶಾಲೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ..ಇನ್ನು ಜಿಲ್ಲಾಧಿಕಾರಿಗಳು ಮಾಡಿದ ಆದೇಶವನ್ನ ಶಿಕ್ಷಣ ಇಲಾಖೆ ಎಷ್ಟು ಪಾಲನೆ ಮಾಡುತ್ತೆ ಎಂಬುದನ್ನ ಕಾದು ನೋಡೋಣ.

ಬಾಲ ಮತ್ತು ಕಿಶೋರ ಕಾರ್ಮಿಕರ ಪ್ರಕರಣ ಗಂಭೀರವಾಗಿ ಪರಿಗಣಿಸಿ: ಧಾರವಾಡ ಡಿಸಿ

Latest Videos
Follow Us:
Download App:
  • android
  • ios