ದುಬಾರಿ ಶುಲ್ಕದ ಭಯಕ್ಕೆ ಮೊದಲ ನೀಟ್ ಸೀಟು ಕೈಬಿಟ್ಟ ವಿದ್ಯಾರ್ಥಿನಿ, ಎರಡನೇ ಬಾರಿ ಪರೀಕ್ಷೆಯಲ್ಲಿ ಯಶಸ್ವಿ!
ತಂಗಪೆಚ್ಚಿ 2020ರ ನೀಟ್ ಪರೀಕ್ಷೆಯಲ್ಲಿ 155 ಅಂಕ ಗಳಿಸಿ ಪಾಸಾಗಿದ್ದಳು. ಆದರೆ ದುಬಾರಿ ಶುಲ್ಕದ ಭಯದಿಂದ ಸೀಟನ್ನು ತ್ಯಜಿಸಿದ್ದಳು. 2021 ರಲ್ಲಿ ಮತ್ತೆ ಪರೀಕ್ಷೆ ಬರೆದು ಸೀಟು ಗಿಟ್ಟಿಸಿಕೊಂಡಿದ್ದಾಳೆ.
ತಮಿಳುನಾಡು(ಜ.31): 18 ವರ್ಷದ ತಂಗಪೆಚ್ಚಿ ಎನ್ನುವ ವಿದ್ಯಾರ್ಥಿನಿ ಪಾನಮೂಪನ್ ಪತ್ತಿ ಕುಗ್ರಾಮದ ನಿವಾಸಿ. 2020ರಲ್ಲಿ ಆಕೆ ನೀಟ್ ಪರೀಕ್ಷೆ ಬರೆದಿದ್ದಳು. ಹಿಂದುಳಿದ ವರ್ಗದಿಂದ ಹಿನ್ನೆಲೆಯ ಆಕೆಗೆ ಡಾಕ್ಟರ್ ಆಗಬೇಕು ಎನ್ನುವ ಕನಸು. ಅದಕ್ಕಾಗಿ ಎಂಬಿಬಿಎಸ್ ಓದಲು ಅವಳಿಗಾಸೆ.
ತಂಗಪೆಚ್ಚಿ ನೀಟ್ ಪರೀಕ್ಷೆಯಲ್ಲಿ 155 ಅಂಕ ಗಳಿಸಿ ಪಾಸಾಗಿದ್ದಳು. ಆದರೆ ದುಬಾರಿ ಶುಲ್ಕದ ಭಯದಿಂದ ಸೀಟನ್ನು ತ್ಯಜಿಸಿದ್ದಳು. ನಂತರ ಸರ್ಕಾರ ಹಿಂದುಳಿದ ವರ್ಗಕ್ಕೆ ಶೇ. 7.5 ಮೀಸಲಾತಿ ಘೋಷಿಸಿತ್ತು. ಆದರೆ ಅಷ್ಟರಲ್ಲಿ ತಂಗಪೆಚ್ಚಿ ಸೀಟು ತ್ಯಜಿಸಿಯಾಗಿತ್ತು.
2021ರಲ್ಲಿ ತಂಗಪೆಚ್ಚಿ ಮತ್ತೊಮ್ಮೆ ನೀಟ್ ಪರೀಕ್ಷೆ ಬರೆದಳು. ಈ ಬಾರಿ ಆಕೆ 256 ಅಂಕ ಗಳಿಸಿದಳು. ಕಳೆದ ಬಾರಿಗಿಂತ 100 ಅಂಕ ಹೆಚ್ಚು. ಕನ್ಯಾಕುಮಾರಿಯ ಶ್ರೀ ಮೂಕಾಂಬಿಕಾ ಮೆಡಿಕಲ್ ಕಾಲೇಜಿನಲ್ಲಿ ಆಕೆಗೆ ಮೆಡಿಕಲ್ ಸೀಟು ಸಿಕ್ಕಿದೆ.
ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ತಂಗಪೆಚ್ಚಿ ತಮಿಳು ಮಾಧ್ಯಮ ಹಿನ್ನೆಲೆಯಿಂದ ಬಂದ ಕಾರಣ ಇಂಗ್ಲಿಷ್ ಪದಗಳ ಬಳಕೆ ಸವಾಲಿನದ್ದಾಗಿತ್ತು. ಆದರೆ ಶಿಕ್ಷಕರ ನೆರವಿನಿಂದ ಆ ಸವಾಲನ್ನು ಮೀರುವಂತಾಯಿರು ಎಂದಿದ್ದಾರೆ.
BARC Recruitment 2022: ಬಿಇ, ಬಿ.ಟೆಕ್, ಬಿಎಸ್ಸಿ ಪದವೀಧರರಿಗೆ ಉದ್ಯೋಗವಕಾಶ
ಮಧುರೈ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು: ಮಧುರೈನ 14 ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಎಂಬಿಬಿಎಸ್ ಸೀಟುಗಳು ಮತ್ತು 7.5% ಕೋಟಾದಡಿ 3 ಮಂದಿ ಬಿಡಿಎಸ್ ಸೀಟುಗಳನ್ನು ಪಡೆದಿದ್ದಾರೆ. 17ರಲ್ಲಿ ಸೀಟು ಪಡೆದ ಐವರು ವಿದ್ಯಾರ್ಥಿಗಳು ಕಾರ್ಪೊರೇಷನ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯವರು. ಇವರಲ್ಲಿ ಬಹುಪಾಲು ಹುಡುಗಿಯರಾಗಿದ್ದಾರೆ.
ಉನ್ನತ ಅಂಕ ಪಡೆದ ನಾಲ್ವರು ಮಧುರೈ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದರೆ, ಒಂಬತ್ತು ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆದಿದ್ದಾರೆ. "ಕೆಲವು ವಿದ್ಯಾರ್ಥಿಗಳು ಕಾಯುವಿಕೆ ಪಟ್ಟಿಯಲ್ಲಿದ್ದರೂ, ಅವರು ಸೀಟುಗಳನ್ನು ಪಡೆಯದಿರಬಹುದು. ಸಾಂಕ್ರಾಮಿಕ ರೋಗದ ನಡುವಿನ ಹೋರಾಟಗಳನ್ನು ಪರಿಗಣಿಸಿ, ಇದು ವಿದ್ಯಾರ್ಥಿಗಳ ಸಾಧನೆಯಾಗಿದೆ ಮತ್ತು ಬೆಂಬಲ ಮತ್ತು ಮಾರ್ಗದರ್ಶನ ನೀಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ ಎಂದು ಮಧುರೈ ಜಿಲ್ಲೆಯ ಸರ್ಕಾರಿ NEET ಇ-ಬಾಕ್ಸ್ ಕೋಚಿಂಗ್‌ನ ಸಂಯೋಜಕಿ ಎಸ್ ವೆನ್ನಿಲಾ ದೇವಿ ಹೇಳಿದ್ದಾರೆ.
ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ಬಗ್ಗೆ ಸರಕಾರದಿಂದ ವಿಶೇಷ ತರಬೇತಿ
ವೈದ್ಯಕೀಯ ಕೋರ್ಸ್ ಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ, ಕೌನ್ಸಿಲಿಂಗ್ ವೇಳಾಪಟ್ಟಿ ಪ್ರಕಟ: 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ `ನೀಟ್' (NEET) ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ' ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, `ಫೆ.4ರಂದು ಈ ಮೂರೂ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಗ್ಗೆ 10 ಗಂಟೆಯ ವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಗ್ಗೆ 10 ಗಂಟೆಯ ವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ' ಎಂದು ಹೇಳಿದೆ.
ಫೆ.4 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕಟವಾಗಲಿದೆ. ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯ ವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆ ವಿವರಿಸಿದೆ.