Coronavirus ಶಾಲಾ-ಕಾಲೇಜು ಬಂದ್ ಬಗ್ಗೆ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

*ಕರ್ನಾಟಕದಲ್ಲಿ ಕೊರೋನಾ ಕೇಸ್ ದುಪ್ಪಟ್ಟು
* ಅದರಲ್ಲೂ ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ ಕೊರೋನಾ
* ಶಾಲಾ-ಕಾಲೇಜುಗಳನ್ನ ಬಂದ್ ಮಾಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

Education Dept announces School and Colleges Close In Bengaluru Over covid pandemic rbj

ಬೆಂಗಳೂರು, (ಜ.05): ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೋನಾ ವೈರಸ್ (Coronavirus) ಎಗ್ಗಿಲ್ಲದೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ (Bengaluru) ದಿನದಿಂದ ದಿನಕ್ಕೆ ದುಪ್ಪಟ್ಟು ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಶಾಲೆ (Schools) ಬಂದ್ ಮಾಡಲು ಆದೇಶಿಸಿದೆ. ಅದರಂತೆ 1 ರಿಂದ 9ನೇ ತರಗತಿವರೆಗೆ ಎಲ್ಲಾ ಮಾದರಿಯ ಶಾಲೆಗಳನ್ನು ಬಂದ್ ಮಾಡಲು ಶಿಕ್ಷಣ ಇಲಾಖೆ  ಸುತ್ತೋಲೆ ಹೊರಡಿಸಿದೆ.

Coronavirus ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಆಸ್ಪತ್ರೆಗಳಿಗೆ ಖಡಕ್ ಸೂಚನೆ ಕೊಟ್ಟ ಸರ್ಕಾರ

ಕೊರೋನಾ  ಹಾಗೂ ಓಮಿಕ್ರಾನ್ ( Omicron) ನಿಯಂತ್ರಣಕ್ಕಾಗಿ ಬೆಂಗಳೂರು ನಗರದಲ್ಲಿ 10, 11 ಮತ್ತು 12ನೇ ತರಗತಿ ಹೊತುಪಡಿಸಿ, 1 ರಿಂದ 9ನೇ ತರಗತಿವರೆಗೆ ಎಲ್ಲಾ ಮಾದರಿಯ ಶಾಲೆಗಳನ್ನು ಬಂದ್  ಮಾಡಲಾಗಿದೆ.

ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಯಥಾಸ್ಥಿತಿಯಲ್ಲಿ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಬೆಂಗಳೂರು ಉತ್ತರ, ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ, ಎಲ್ ಕೆಜಿ, ಯುಕೆಜಿ ಹಾಗೂ 1 ರಿಂದ 9ನೇ  ತರಗತಿಗಳನ್ನು ದಿನಾಂಕ 06-01-2022 ರಿಂದ ದಿನಾಂಕ 19-01-2022ರವರೆಗೆ ಅಥವಾ ಮುಂದಿನ ಆದೇಶದವೆರೆಗ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಆನ್ ಲೈನ್, ಇತರೆ ಮಾರ್ಗಗಳ ಮೂಲಕ ಕಲಿಕಾ, ಬೋಧನಾ ಚಟುವಟಿಕೆಗಳನ್ನು, ಮುಂದುವರೆಸಲು ಸೂಚಿಸಿದ್ದು, ಕೊರೋನಾ ಮುಂಜಾಗ್ರತೆಯ ಕಟ್ಟು ನಿಟ್ಟಿನ ಕ್ರಮದೊಂದಿಗೆ 10, 11 ಮತ್ತು 12ನೇ ತರಗತಿಗಳನ್ನು ಎಂದಿನಂತೆ ಆಫ್‌ಲೈನ್ ಕ್ಲಾಸ್ ನಡೆಸಲು ಹೇಳಿದೆ.

10 ರಿಂದ ದ್ವಿತೀಯ ಪಿಯುಸಿ ತರಗತಿಗಳು ಎಂದಿನಂತೆ ಸೋಮವಾರದಿಂದ ಶುಕ್ರವಾರದವರೆಗೆ ನಡೆಯಲಿವೆ. ಇದರೊಂದಿಗೆ ಮೆಡಿಕಲ್, ಪ್ಯಾರಾ ಮೆಡಿಕಲ್, ನರ್ಸಿಂಗ್ ವಿದ್ಯಾರ್ಥಿಗಳಿಗೂ ಯಾವುದೇ ನಿರ್ಬಂಧ ಹೇರಿಲ್ಲ.ಉಳಿದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿಗಳು ನಡೆಯಲಿವೆ. ವಿಕೆಂಡ್ ಕರ್ಫ್ಯೂ ಹೊರತುಪಡಿಸಿ, ಉಳಿದಂತೆ ಎಲ್ಲ ದಿನಗಳಲ್ಲೂ ಕೋವಿಡ್ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸಿ ತರಗತಿಯನ್ನು ನಡೆಸಬಹುದಾಗಿದೆ.‌

ರೂಪ್ಸಾ ಸಂಘದ ಅಧ್ಯಕ್ಷರ ಅಭಿಪ್ರಾಯ
ಸಾಂಕ್ರಾಮಿಕ ರೋಗದಿಂದ ಜನರನ್ನು ರಕ್ಷಿಸುವುದರ ಜೊತೆಗೆ ಮಕ್ಕಳ ಶಿಕ್ಷಣ ಕುಂಠಿತ ಆಗದಂತೆ ಎಚ್ಚರ ವಹಿಸಲು ಖಾಸಗಿ ಶಾಲೆಗಳ ಸಂಘಟನೆಗಳು ಆಗ್ರಹಿಸಿವೆ. ಮಂಗಳವಾರ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಬೆಂಗಳೂರು ನಗರಕ್ಕೆ ಸೀಮಿತವಾಗಿ ಮುಂದಿನ 15 ದಿನಗಳಿಗೆ 1-9 ನೇ ತರಗತಿ ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿ ಬಂದ್ ಮಾಡಬೇಕು ಎಂದು ನಿರ್ಣಯ ತೆಗೆದುಕೊಂಡಿದೆ. ಹಾಗೇ ಗ್ರಾಮೀಣ ಭಾಗಗಳಿಗೆ ಶಾಲೆ ನಡೆಸಿ ಎಂದಿರುವುದನ್ನು ಸ್ವಾಗತಿಸುತ್ತೇವೆ ಅಂತ ರೂಪ್ಸಾ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.

ಆದರೆ ಬೆಂಗಳೂರು ವಿದ್ಯಾರ್ಥಿಗಳ ಸಂಬಂಧ ಆತಂಕ ಇದ್ದು, ಕಳೆದ ಎರಡು ವರ್ಷಗಳಲ್ಲಿ 6ನೇ ತರಗತಿ ನಂತರದ ವಿದ್ಯಾರ್ಥಿಗಳಿಗೆ ಕೇವಲ 7 ತಿಂಗಳು ಮಾತ್ರ ಭೌತಿಕ ತರಗತಿಗಳು ನಡೆದಿವೆ. ಉಳಿದ 17 ತಿಂಗಳು ಶಾಲಾ ಶಿಕ್ಷಣ ದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಲ್ಲಿ ಕಲಿಕೆ ಮರೀಚಿಕೆ ಆಗಿ ಅವರ ಮುಂದಿನ ಭವಿಷ್ಯ ಶೂನ್ಯ ಆಗುವ ಎಲ್ಲಾ ಮುನ್ಸೂಚನೆಗಳು ಗೋಚರಿಸುತ್ತಿವೆ ಅಂತ ಲೋಕೇಶ್ ತಾಳಿಕಟ್ಟೆ ಆತಂಕ ವ್ಯಕ್ತಪಡಿಸಿದ್ದಾರೆ.
 

Latest Videos
Follow Us:
Download App:
  • android
  • ios