ನಾಳೆ (ಸೋಮವಾರ) ಶಾಲೆ ಆರಂಭ, ಸಿಹಿಯೊಂದಿಗೆ ಮಕ್ಕಳಿಗೆ ಅದ್ದೂರಿ ಸ್ವಾಗತ

* ನಾಳೆ (ಸೋಮವಾರ) ಶಾಲೆ ಆರಂಭ
* ಸಿಹಿಯೊಂದಿಗೆ ಮಕ್ಕಳಿಗೆ ಸ್ವಾಗತಿಸಲು ನಿರ್ಧಾರ
* ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಮಾಡಬೇಕೆಂದು ಸೂಚಿಸಿದ ಶಿಕ್ಷಣ ಇಲಾಖೆ

Education Dept Gives Instructions To Schools welcome Students With Sweet rbj

ಬೆಂಗಳೂರು, (ಮೇ.15): ನಾಳೆ (ಮೇ.16) ಶಾಲೆಗಳು ಪ್ರಾರಂಭವಾಗಲಿವೆ. ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ.

ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಅದರಂತೆ ಮೇ 16ರ ಸೋಮವಾರ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಗಲಿದ್ದು ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ.

School Uniform ಬೇಸಿಗೆ ಕಾರಣ ಶಾಲಾ ಸಮವಸ್ತ್ರ ಕಡ್ಡಾಯ ಬೇಡ, ರಾಜ್ಯಗಳಿಗೆ ಕೇಂದ್ರ ಸೂಚನೆ!

ಶಾಲೆಗಳ(Schools) ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಮಾಡಬೇಕು. ಇದಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಮಕ್ಕಳಲ್ಲಿ ಸ್ಥೈರ್ಯ ತುಂಬಲು ನಿರ್ಧರಿಸಲಾಗಿದೆ. ಶಾಲೆಗಳಲ್ಲಿ ತೋರಣ ಕಟ್ಟಿ, ರಂಗೋಲಿ ಬಿಡಿಸಿ ಮಕ್ಕಳನ್ನು(Children) ಸ್ವಾಗತಿಸಬೇಕು. ಹಾಜರಾತಿ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ತರಗತಿ ಮತ್ತು ಶಿಕ್ಷಕರ ವೇಳಾಪಟ್ಟಿತಯಾರು ಮಾಡಿಟ್ಟುಕೊಳ್ಳಬೇಕು. ಇದಕ್ಕಾಗಿ ಶಿಕ್ಷಕರು(Teachers) ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.

ಮಕ್ಕಳು ಶಾಲೆಗೆ ಬರುವುದು ಸಂಭ್ರಮದ ಕ್ಷಣ. ಮೊದಲ ಸಲವಂತು ಶಾಲೆಗೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆ ದೇವಸ್ಥಾನ. ವಿದ್ಯಾಮಂದಿರಕ್ಕೆ ಕಾಲಿಡುವಾಗ ಸುಂದರವಾದ ಪರಿಸರ ನಿರ್ಮಾಣವಾಗಬೇಕು. ಮಕ್ಕಳು ಶಾಲೆಗೆ ಬರುವಾಗ ಸಂತೋಷದಿಂದ ಬರಬೇಕು.

ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಸಿಹಿಯನ್ನು ಹಂಚಬೇಕು ಎಂದು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸಿಹಿಖಾದ್ಯಗಳನ್ನು ಮಾಡಿ ಮಕ್ಕಳಿಗೆ ವಿತರಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಶಾಲೆಯ ಮುಖ್ಯ ಶಿಕ್ಷಕರು ಸ್ಥಳೀಯ ಜನಪ್ರತಿನಿಧಿಗಳು ಶಾಲೆಗೆ ಶ್ರಮದಾನ ಮೂಲಕ ಸರ್ಕಾರಿ ಶಾಲೆಯ ಅಭಿವೃದ್ದಿಯ ಜೊತೆ ಮಕ್ಕಳನ್ನು ಶಾಲೆಗೆ ಖುಷಿಯಂದ ಬರುವಂತೆ ನೋಡಿಕೊಳ್ಳುವ ಸಲುವಾಗಿ ಇಲಾಖೆ ಸಿಹಿ ವಿತರಣೆಯನ್ನು ಮಾಡುತ್ತಿದೆ.

ಶಾಲಾ ಆರಂಭಕ್ಕೂ ಮುನ್ನ ಶಾಲೆಯ ಆವರಣ, ಆಟದ ಮೈದಾನ, ಅಡುಗೆ ಮನೆ, ಶೌಚಾಲಯ, ಕೊಠಡಿಗಳನ್ನು ಮುಂಚಿತವಾಗಿಯೇ ಸ್ವಚ್ಛಗೊಳಿಸಬೇಕು ಎಂದು ಈಗಾಗಲೇ ಸೂಚಿಸಿದ್ದು, ಕೊರೋನಾ ನಾಲ್ಕನೇ ಅಲೆಯ ಆತಂಕ ಸದ್ಯಕ್ಕೆ ಇಲ್ಲದಿರುವುದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರೂ ಉತ್ಸುಕರಾಗಿದ್ದಾರೆ. ಆದ್ದರಿಂದ ಅಕ್ಷರ ದಾಸೋಹ, ಹಾಜರಾತಿ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ‘ಮಿಂಚಿನ ಸಂಚಾರ’ ಯೋಜನೆಯಡಿ ಸಂಬಂಧಪಟ್ಟವರು ಮೇ 30ರವರೆಗೆ ನಿರಂತರವಾಗಿ ಪರಿಶೀಲನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಬಳಿಕ ಆಯುಕ್ತಾಲಯಗಳಿಗೆ ವರದಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

 ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುವುದಲ್ಲದೇ ಇಡೀ ವರ್ಷವನ್ನು ಕಲಿಕಾ ಚೇತರಿಕ ವರ್ಷವನ್ನಾಗಿ ಇಲಾಖೆ ಘೋಷಣೆಯನ್ನು ಮಾಡಿದೆ. ಕಲಿಕಾ ಚೇತರಿಕೆಯ ಕಾರ್ಯಕ್ರಮದಲ್ಲಿ ಏನನ್ನು ಮಾಡಬೇಕು ಎಂಬ ಯೋಜನೆಯನ್ನು ಶಿಕ್ಷಣ ಇಲಾಖೆ ಹಾಕಿಕೊಂಡಿದೆ.

ಜೂನ್‌ನಿಂದ ಪ್ರಾರಂಭಿಸುವಂತೆ ಒತ್ತಾಯ
ಹೌದು....ಶಾಲೆಗಳನ್ನ ಮೇ.16ರ ಬದಲಿಗೆ ಜೂನ್‌ನಿಂದ ಪ್ರಾರಂಭಿಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದ್ರೆ, ಇದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಿರಾಕರಿಸಿದ್ದು, ಈಗಾಗಲೇ ಕೋವಿಡ್‌ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮೇ.16ರಿಂದಲೇ ಶಾಲೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದರು.
 

Latest Videos
Follow Us:
Download App:
  • android
  • ios