Asianet Suvarna News Asianet Suvarna News

ಸಿದ್ದರಾಮಯ್ಯ ಸಿಎಂ ಆಗ್ತಿದ್ದಂತೆ ಬಿಜೆಪಿ ಸರಕಾರದ ಪಠ್ಯಕ್ರಮ ತೆಗೆದು ಹಾಕುವಂತೆ ಶಿಕ್ಷಣ ತಜ್ಞರ ಮನವಿ!

ಎನ್‌ಇಪಿ ತೆಗೆದು, ರಾಜ್ಯ ಶಿಕ್ಷಣ ನೀತಿ ರೂಪಿಸಬೇಕು. ರೋಹಿತ್‌ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಹಳೇ ಪಠ್ಯಪುಸ್ತಕ ಮುಂದುವರಿಸುವಂತೆ ಶಿಕ್ಷಣ ತಜ್ಞರು ಸಿಎಂ ಸಿದ್ದರಾಮಯ್ಯ ಗೆ ಒತ್ತಾಯಿಸಿದ್ದಾರೆ.

Education experts appeal to CM siddaramaiah to Cancel NEP in karnataka gow
Author
First Published May 20, 2023, 10:30 PM IST

ಬೆಂಗಳೂರು (ಮೇ.20): ರಾಜ್ಯದಲ್ಲಿ ಕೇಂದ್ರದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ಯನ್ನು (ಎನ್‌ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು, ಶಾಲಾ ಪಠ್ಯ ಪರಿಷ್ಕರಣೆ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ‘ರಾಜ್ಯ ಶಿಕ್ಷಣ ನೀತಿ’ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ವೇದಿಕೆಯ ಸಂಸ್ಥಾಪಕ ಪೋಷಕ, ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ, ಹಿಂದಿನ ಬಿಜೆಪಿ ಸರ್ಕಾರ ರಾಜಕೀಯಕ್ಕಾಗಿ ಶಿಕ್ಷಣ ಕ್ಷೇತ್ರವನ್ನು ಬಳಸಿಕೊಂಡಿದೆ. ಹಾಗಾಗಿ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸುವವರೆಗೆ ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಪಠ್ಯಪರಿಷ್ಕರಣೆ ಕೈಬಿಟ್ಟು 2017-18ರಲ್ಲಿ ಜಾರಿಯಲ್ಲಿದ್ದ ಪಠ್ಯಕ್ರಮ, ಪಠ್ಯವಸ್ತು ಮತ್ತು ಪಠ್ಯಪುಸ್ತಕಗಳನ್ನೇ ಮುಂದುವರೆಸಬೇಕು. ಹಿಂದಿನ ಪಠ್ಯಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಮತ್ತು ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷನ ನೀತಿಯು ಅಸಂವಿಧಾನಿಕ ಹಾಗೂ ಅಪ್ರಜಾಸತ್ತಾತ್ಮಕವಾಗಿದೆ. ಇದನ್ನು ವಿಧಾನಸಭೆಯ ಮೊದಲ ಅಧಿವೇಶನದಲ್ಲೇ ತಿರಸ್ಕರಿಸಿ ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ತರಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂದು ಕೋರಿದ್ದಾರೆ.

Karnataka 2nd PUC Result 2023: ಕಲಾ ವಿಭಾಗದಲ್ಲಿ ಮತ್ತೆ ವಿಜಯನಗರದ ವಿದ್ಯಾರ್ಥಿ ಟಾ

ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಆಗ್ರಹ:
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಮತ್ತು ಸೂಕ್ತ ಆದೇಶವೇ ಇಲ್ಲದೆ ಪಠ್ಯಪರಿಷ್ಕರಣೆಯ ಹೆಸರಲ್ಲಿ ರಾಜ್ಯ ಖಜಾನೆಗೆ ಕೋಟ್ಯಂತರ ರು. ನಷ್ಟವನ್ನುಂಟು ಮಾಡಿರುವ ಲಕ್ಷಾಂತರ ಸಂಖ್ಯೆಯಲ್ಲಿ ಮುದ್ರಣಗೊಂಡ ಕನ್ನಡ ಮತ್ತು ಇತಿಹಾಸ ಪುಸ್ತಕಗಳ ಸರಬರಾಜು ಸ್ಥಗಿತಗೊಳಿಸಿ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದವರಿಂದ ಆ ಹಣವನ್ನು ವಸೂಲಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಳಪೆ ಸಾಧನೆ ಮಾಡಿದ ಉಪನ್ಯಾಸಕ, ಶಿಕ್ಷಕರಿಗೆ ಬಿಬಿಎಂಪಿ ಗೇಟ್ ಪಾಸ್!

ಸಿಎಂ ಮುಂದಿಟ್ಟಿರುವ ಇತರೆ ಬೇಡಿಕೆಗಳು

  • 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಬೇಗ ಪೂರ್ಣಗೊಳಿಸಿ
  • ಜೂನ್ 15 ರ ಮೊದಲು ಅತಿಥಿ ಶಿಕ್ಷಕರನ್ನು ನೇಮಿಸಿ
  • ಸಮವಸ್ತ್ರ, ಪಠ್ಯಪುಸ್ತಕಗಳು, ಶೂ-ಸಾಕ್ಸ್ ಮತ್ತು ಬಸ್‌ ಪಾಸ್‌ ಸಮಯಕ್ಕೆ ಸರಿಯಾಗಿ ತಲುಪಿಸಿ
  • ಶಿಕ್ಷಣಕ್ಕೆ ರಾಜ್ಯ ಬಜೆಟ್‌ನಲ್ಲಿ ಶೇ.20 ಮೀಸಲಿಡಿ
  • ಖಾಸಗಿ ವಿಶ್ವವಿದ್ಯಾನಿಲಯಗಳು ನಾಯಿಕೊಡೆಗಳಂತೆ ಹುಟ್ಟಿಕೊಳ್ಳುವುದನ್ನು ನಿಲ್ಲಿಸಿ
Follow Us:
Download App:
  • android
  • ios