ಗುಜರಾತ್ ಮಾದರಿಯಲ್ಲಿ Bhagavad Gita ಪಠ್ಯ ಜಾರಿ ಇಲ್ಲ, ಬಿಸಿ ನಾಗೇಶ್
ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಭಗವದ್ಗೀತೆ ಪಠ್ಯ ಜಾರಿಗೆ ತರಲು ಚರ್ಚೆಗಳು ಆರಂಭವಾಗಿದೆ. ಆದ್ರೆ ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಯತ್ನ ನಡೆದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
ವರದಿ- ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣನ್ಯೂಸ್
ಬೆಂಗಳೂರು(ಮಾ.18): ರಾಜ್ಯದ ಪ್ರಾಥಮಿಕ ಶಾಲಾ ಹಂತದ ಪಠ್ಯ ಪುಸ್ತಕದಲ್ಲಿ (Text Book) ಭಗವದ್ಗೀತೆ (Bhagavad Gita) ಸೇರಿಸುವ ಕುರಿತು ಚರ್ಚೆ ಶುರುವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ( Education Minister BC Nagesh) ಮಾತನಾಡಿ ಮಕ್ಕಳಲ್ಲಿ ನೀತಿಪಾಠ ಹೆಚ್ಚಿಸುವ ಸಲುವಾಗಿ ಪಠ್ಯಕ್ರಮ ಅಳವಡಿಸುವ ಬಗ್ಗೆ ಪ್ರಸ್ತಾಪ ಇದೆ. ಅದರಲ್ಲಿ ಏನಿರಬೇಕು ಅನ್ನೋದನ್ನು ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಒಲವು ವ್ಯಕ್ತಪಡಿಸಿದ್ದರು. ಅಲ್ಲದೆ ಬೈಬಲ್, ಕುರಾನ್, ಎಲ್ಲದರಲ್ಲೂ ನೀತಿ ಪಾಠಗಳಿರಬಹುದು. ಆದ್ರೆ ಅದು ಯಾವುದು ಏನು ಅನ್ನೋದನ್ನು ಶಿಕ್ಷಣ ತಜ್ಞರು ನಿರ್ಧಾರ ಮಾಡ್ತಾರೆ. ಅದನ್ನು ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ ಎಂದಿದ್ದಾರೆ. ಆಲ್ಲದೆ ಮಕ್ಕಳಿಗೆ ಸಂಸ್ಕಾರ ಕೊಡುವಂತಹದ್ದು, ಶಿಕ್ಷಣದ ಭಾಗ ಅಂತ ನಮಗೆ ಅನಿಸಿದೆ. ಅದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.
2022-23 ನೇ ಶೈಕ್ಷಣಿಕ ವರ್ಷದಲ್ಲಿ ಗುಜರಾತ್ ನಲ್ಲಿ (Gujart) 6-8 ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆಯನ್ನು ಸೇರಿಸಲಾಗಿದೆ. ಹೀಗಾಗಿ ಇದೇ ಮಾದರಿಯಲ್ಲಿ ರಾಜ್ಯದ ಪ್ರಾಥಮಿಕ ಶಾಲಾ ಹಂತದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಯಾಗುತ್ತಾ ಅನ್ನೋ ಬಿಸಿ ಬಿಸಿ ಚರ್ಚೆ ಶುರುವಾಗಿದೆ.
SAI Recruitment 2022: ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ, ಕೆಲವೇ ದಿನ ಬಾಕಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರೋಧ
ಪ್ರಾಥಮಿಕ ಶಾಲಾ ಹಂತದ ಪಠ್ಯಕ್ಕೆ ಭಗವದ್ಗೀತೆ ಪಠ್ಯ ಸೇರಿಸುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (d k shivakumar) ವಿರೋಧ ವ್ಯಕ್ತಪಡಿಸಿದ್ದಾರೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (national education policy) ನಾನು ಆರಂಭದಲ್ಲೇ ವಿರೋಧ ಮಾಡಿದ್ದೆ. ಆದ್ರೆ ಎಲ್ಲಾ ತಿಳಿದವರು ಸೇರಿ ಪಠ್ಯ ಕ್ರಮ ರಚನೆ ಮಾಡಿದ್ದಾರೆ. ಹೊಸದಾಗಿ ಏನನ್ನೂ ಸೇರಿಸುವ ಅಗತ್ಯ ಇಲ್ಲ. ಎಲ್ಲಾ ಧರ್ಮದ ಆಚಾರ ವಿಚಾರಗಳನ್ನು ಜನ ತಿಳಿದುಕೊಳ್ಳುವಿದರಲ್ಲಿ ತಪ್ಪಿಲ್ಲ. ಈಗಾಗಲೇ ಭಗವದ್ಗೀತೆ ,ರಾಮಾಯಣ, ಇತರ ಧರ್ಮದ ವಿಚಾರಗಳು ಪಠ್ಯದಲ್ಲಿ ಇದೆ. ಕೆಂಗಲ್ ಹನುಮಂತಯ್ಯ ಮುಖ್ಯಮಂತ್ರಿ ಆಗಿದ್ದಾಗಲೇ ಎರಡು ರುಪಾಯಿಗೆ ಭಗವದ್ಗೀತೆ ಪುಸ್ತಕ ಕೊಟ್ಟಿದ್ರು. ಆದ್ರೆ ಬಿಜೆಪಿಯವರು ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
Karnataka Apex Bank recruitment 2022: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿ
ಶಾಸಕ ಪ್ರಿಯಾಂಕ್ ಖರ್ಗೆ ವಿರೋಧ
ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ಹೋಗಬೇಡಿ ನಮ್ಮ ರಾಜ್ಯ ಪ್ರಗತಿ ಕಾಣುತ್ತಿರುವ ರಾಜ್ಯವಾಗಿದೆ ಅಂತ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಕ್ಕಳು ಈಗಾಗಲೇ ಕೊರೋನಾದಿಂದ ಶಿಕ್ಷಣ ವಂಚಿತರಾಗಿದ್ದಾರೆ. ಶಾಲಾ ಕಟ್ಟಡಗಳ ಮೂಲ ಸೌಕರ್ಯಗಳ ಕಡೆ ಗಮನ ಹರಿಸಿ ಕೊಡಿ, ಹೈಕಮಾಂಡ್ ಮನವೊಲಿಸಲು ಇಂತ ಕ್ರಮಗಳನ್ನು ತರಲು ಹೋಗಬೇಡಿ ಎಂದಿದ್ದಾರೆ.
ಭಗವದ್ಗೀತೆ ಪಠ್ಯದಲ್ಲಿ ಸೇರಿಸಿದರೆ ತಪ್ಪೇನು? : ರೇಣುಕಾಚಾರ್ಯ
ಭಗವದ್ಗೀತೆ ಪಠ್ಯದಲ್ಲಿ ಸೇರಿಸಿದರೆ ತಪ್ಪೇನು? ಕೆಲವರಿಗೆ ಮುಜುಗರ ಆಗಬಹುದು. ಅದನ್ನು ಗಣನೆಗೆ ತೆಗೆದುಕೊಳ್ಳಲ್ಲ. ಶಿಕ್ಷಣ ಸಚಿವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ತಕ್ಷಣ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿಕೊಳ್ಳಲಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
Raichur Anganwadi Recruitment 2022: ರಾಯಚೂರು ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ