Asianet Suvarna News Asianet Suvarna News

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಅಂತಿಮಗೊಳಿಸಿದೆ. ಈ ಬಗ್ಗೆ ಸಚಿವ ಮಧುಬಂಗಾರಪ್ಪ ಅಪ್ಡೇಟ್‌ ನೀಡಿದ್ದಾರೆ.

Education minister  Madhu Bangarappa  update about Karnataka  SSLC and PUC exam gow
Author
First Published Feb 20, 2024, 12:04 PM IST

ಬೆಂಗಳೂರು (ಫೆ.20): ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಅಂತಿಮಗೊಳಿಸಿದೆ. ಈ ಬಗ್ಗೆ ಸಚಿವ ಮಧುಬಂಗಾರಪ್ಪ ಹೇಳಿಕೆ ನೀಡಿದ್ದು, ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಯಲಿದೆ. SSLC ಪರೀಕ್ಷೆಯು ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

 ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು  2747 ಪರೀಕ್ಷಾ ಕೇಂದ್ರಗಳು ಇರಲಿದೆ.

ಎಲ್ಲ ಪರೀಕ್ಷೇಗೆ ನೋಂದಣಿ  ಮಾಡಿಕೊಳ್ಳಲೇ ಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಒಂದು ಪರೀಕ್ಷೆಗೆ ಹಾಜರಾಗಬೇಕು. ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. 

SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ, 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು ಒಟ್ಟು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿಲಾಕರ್ ನಿಂದ ಪಡೆಯ ಬಹುದಾಗಿದೆ ಎಂದು ಹೇಳಿದ್ದಾರೆ.

ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್‌ ವಿಚಾರವಾಗಿ ಮಾತನಾಡಿದ ಅವರು ಕೋರ್ಟ್ ಡೈರೆಕ್ಷನ್ ಮೇಲೆ ಡ್ರೆಸ್ ಕೋಡ್ ಹೇಳುತ್ತೇವೆ. ಅಡ್ವೋಕೆಟ್ ಜನರಲ್ ಜೊತೆ ಮಾತನಾಡಿ ಈ ಬಗ್ಗೆ ತಿಳಿಸುತ್ತೇವೆ ಎಂದಿದ್ದಾರೆ.

ಕಾಡಾನೆ ದಾಳಿಗೆ ಕೇರಳ ವ್ಯಕ್ತಿ ಬಲಿ , ಕರ್ನಾಟಕದಿಂದ 15 ಲಕ್ಷ ಪರಿಹಾರ! ದಾಳಿ ಮಾಡಿದ ಆನೆ ನಿಜವಾಗ್ಲೂ ನಮ್ಮ ರಾಜ್ಯದ್ದಾ?

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ (ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ)

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಸೋಮವಾರ ಗಣಿತ ಪರೀಕ್ಷೆ

05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲಿಷ್ ಪರೀಕ್ಷೆ

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ (ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ)

25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ,  ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ ಪರೀಕ್ಷೆ

02-04-2024 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ

03-04-2024 ಅರ್ಥಶಾಸ್ತ್ರ ಪರೀಕ್ಷೆ

4-04-2024 ತೃತೀಯ ಭಾಷೆ : ಹಿಂದಿ, ಇಂಗ್ಲೀಷ್ , ಅರೇಬಿಕ್, ಉರ್ದು , ಸಂಸ್ಕೃತ, ಕೊಂಕಣಿ,ತುಳು,ಕನ್ನಡ

6-04-2024 ರಂದು ದ್ವಿತೀಯ ಭಾಷೆ ಇಂಗ್ಲಿಷ್,  ಕನ್ನಡ

Follow Us:
Download App:
  • android
  • ios