Asianet Suvarna News

ಜನನಿ ತಾನೆ ಮೊದಲ ಗುರು: ತಾಯಿಗೆ ಸಚಿವ ಸುರೇಶ್ ಕುಮಾರ್ ಶುಭಾಶಯ

ಸಹ ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹಿಂಜರಿಯದೇ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಶಿಕ್ಷಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ. ಮತ್ತೊಂದೆಡೆ ಸಚಿವ ಸುರೇಶ್ ಕುಮಾರ್ ಅವರು ತಮ್ಮ ತಾಯಿಗೆ ವಿಶ್ ಮಾಡಿದ್ದು ಹೀಗೆ.

Education minister suresh kumar teachers-day wishes To His Mother
Author
Bengaluru, First Published Sep 5, 2020, 2:23 PM IST
  • Facebook
  • Twitter
  • Whatsapp

ಬೆಂಗಳೂರು, (ಸೆ.05): ಪ್ರತಿ ವರ್ಷವೂ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೋನಾದಿಂದಾಗಿ ಶಾಲಾ-ಕಾಲೇಜುಗಳು ಮುಚ್ಚಿವೆ. ಹೀಗಾಗಿ ಈ ಬಾರಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಕಡಿಮೆಯಾಗಿದೆ. 

ಆದರೂ, ದೇಶದೆಲ್ಲೆಡೆ ಇಂದು (ಸೆ.05) ಶಿಕ್ಷಕರ ದಿನಾಚರಣೆಯ ಸಂಭ್ರಮ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ-ತಮ್ಮ ಗುರುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ.

ನೆಚ್ಚಿನ ಗುರುವಿಗೆ ಅಚ್ಚುಮೆಚ್ಚಾಗೋವಂಥ ಉಡುಗೊರೆ ನೀಡಿ

ಜನನಿ ತಾನೆ ಮೊದಲ ಗುರು
ಹೌದು...ಮನೆಯೇ ಮೊದಲ‌ ಪಾಠಶಾಲೆ, ಜನನಿ ತಾನೆ ಮೊದಲ ಗುರು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಮ್ಮ ತಾಯಿಗೆ ಕಾಲು ಮುಗಿದು ಶಿಕ್ಷಕರ ದಿನಾಚರಣೆಯ ಶುಭಾಯ ಕೋರಿದ್ದಾರೆ.

ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸುರೇಶ್ ಕುಮಾರ್, ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು, ಜನನಿಯಿಂದ ಪಾಠ ಕಲಿತ ಜನರು ಧನ್ಯರು ಎಂದು ಬರೆದುಕೊಂಡಿದ್ದಾರೆ.

Follow Us:
Download App:
  • android
  • ios