Asianet Suvarna News Asianet Suvarna News

ಕೌಶಲ್ಯ ರಹಿತ ಶಿಕ್ಷಣ ಲಾಭದಾಯಕವಲ್ಲ: ಸಚಿವ ಅಶ್ವತ್ಥ ನಾರಾಯಣ್‌

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಉದ್ಯೋಗ ಪಡೆಯಬೇಕಾದರೆ ಕೌಶಲ್ಯಗಳ ಅಗತ್ಯ ಇದ್ದೇ ಇದೆ. ಕೌಶಲ್ಯರಹಿತ ಶಿಕ್ಷಣ ಲಾಭದಾಯಕವಲ್ಲ ಎಂದು ರಾಜ್ಯ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌ ಅಭಿಪ್ರಾಯಪಟ್ಟರು. 

Education without skills is not profitable Says Dr CN Ashwath Narayan At Chikkaballapur Utsav gvd
Author
First Published Jan 13, 2023, 8:45 PM IST

ಚಿಕ್ಕಬಳ್ಳಾಪುರ (ಜ.13): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಉದ್ಯೋಗ ಪಡೆಯಬೇಕಾದರೆ ಕೌಶಲ್ಯಗಳ ಅಗತ್ಯ ಇದ್ದೇ ಇದೆ. ಕೌಶಲ್ಯರಹಿತ ಶಿಕ್ಷಣ ಲಾಭದಾಯಕವಲ್ಲ ಎಂದು ರಾಜ್ಯ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌ ಅಭಿಪ್ರಾಯಪಟ್ಟರು. ನಗರದ ಹೊರವಲಯದ ಎಸ್‌ ಜೆಸಿಐಟಿ ಕಾಲೇಜಿನಲ್ಲಿ ಚಿಕ್ಕಬಳ್ಳಾಪುರ ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೃಹತ್‌ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಮೇಳದಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು.

ದೇಶದ ಪ್ರತಿಷ್ಠಿತ ಟಾಟಾ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ರಾಜ್ಯದಲ್ಲಿರುವ 270 ಸರ್ಕಾರಿ ಕೈಗಾರಿಕಾ ಸಂಸ್ಥೆಗಳ ಪೈಕಿ 150 ಸರ್ಕಾರಿ ಕೈಗಾರಿಕಾ ಸಂಸ್ಥೆಗಳಿಗೆ 5 ಸಾವಿರ ಕೋಟಿ ರು, ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಆಧುನಿಕ ಸ್ಪರ್ಶ ನೀಡಿ ಉನ್ನತೀಕರಣಕ್ಕೆ ಕ್ರಮಕೈಗೊಳ್ಳಲಾಗಿದೆ. ರಾಜ್ಯದಲ್ಲಿ 1200 ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.

Chikkaballapur Utsav: ಸುಧಾಕರ್‌ ದೇಶದ ಆಸ್ತಿ ಆಗಬೇಕು: ಸಚಿವ ಶಿವರಾಮ್‌ ಹೆಬ್ಬಾರ್‌

ಶಿಕ್ಷಣದಲ್ಲಿ ಕೌಶಲ್ಯಗಳ ಅಗತ್ಯವಿದ್ದು, ಕೇಂದ್ರ ಸರ್ಕಾರದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಸಾಮಾನ್ಯ ಪದವಿ ವಿದ್ಯಾರ್ಥಿಗಳೂ ಯಾವುದಾದರೂ ಒಂದು ಕ್ಷೇತ್ರದ ಕೌಶಲ್ಯದ ಜ್ಞಾನದೊಂದಿಗೆ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ವಿದ್ಯಾರ್ಥಿ ಯುವಜನರು ಸರ್ಕಾರದ ವಿವಿಧ ಕೌಶಲ್ಯಾಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಸಲಹೆ ಮಾಡಿದರು. ಸ್ವಾಮಿ ವಿವೇಕಾನಂದರ ದೇಶ ಮತ್ತು ಸಮಾಜದ ಪರಿಣಾಮಕಾರಿ ಬದಲಾವಣೆಗಾಗಿ ಯುವಜನರ ಮೇಲೆ ಹೆಚ್ಚು ಭರವಸೆ ಇಟ್ಟಿದ್ದರು. ವಿದ್ಯಾರ್ಥಿ ಯುವಜನರು ಸ್ವಾಮಿ ವಿವೇಕಾನಂದರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಆಶಯ ಮತ್ತು ಭರವಸೆಗಳನ್ನು ಈಡೇರಿಸಬೇಕು ಎಂದು ಸಲಹೆ ಮಾಡಿದರು.

ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ, ಬಿಎಂಟಿಸಿ ಉಪಾಧ್ಯಕ್ಷ ಕೆ.ವಿ. ನವೀನ್‌ ಕಿರಣ್‌, ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೃಷ್ಣಮೂರ್ತಿ, ಆಯುಷ್‌ ಇಲಾಖೆ ಆಯುಕ್ತ ಜೆ. ಮಂಜುನಾಥ್‌, ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌, ಸಿಇಪಿ ಪಿ.ಶಿವಶಂಕರ್‌ ಸೇರಿದಂತೆ ಹಾಜರಿದ್ದರು.

ಚಿಕ್ಕಬಳ್ಳಾಪುರ ಉತ್ಸವ ಪ್ರತಿ ವರ್ಷ ಅದ್ಧೂರಿಯಾಗಿ ನಡೆಯಲಿ: ಸಚಿವ ಆರ್‌.ಅಶೋಕ್‌

ಉದ್ಯೋಗ ಮೇಳದಲ್ಲಿ 4000 ಮಂದಿಗೆ ಉದ್ಯೋಗ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ಚಿಕ್ಕಬಳ್ಳಾಪುರ ಉತ್ಸವದ ಪ್ರಯುಕ್ತ ಬೃಹತ್‌ ಉದ್ಯೋಗ ಮೇಳವನ್ನು ಜಿಲ್ಲಾಡಳಿತದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಮೇಳಕ್ಕೆ ಆನ್‌ಲೈನ್‌ ಮೂಲಕ 27,500 ಉದ್ಯೋಗಾಕಾಂಕ್ಷಿಗಳು ನೊಂದಣಿ ಮಾಡಿಕೊಂಡಿದ್ದಾರೆ, 135 ಪ್ರತಿಷ್ಠಿತ ಉದ್ಯೋಗದಾತ ಕಂಪನಿಗಳು ಪಾಲ್ಗೊಂಡಿದ್ದು ಈ ಪೈಕಿ 4 ಸಾವಿರದ 125 ಉದ್ಯೋಕಾಂಕ್ಷಿಗಳು ಉದ್ಯೋಗ ಪಡೆಯಲು ಅರ್ಹತೆ ಪಡೆದಿದ್ದಾರೆ. 12 ಸಾವಿರಕ್ಕೂ ಹೆಚ್ಚು ಯುವಜನರು ಮೇಳಕ್ಕೆ ಹಾಜರಾಗಿದ್ದಾರೆ ಎಂದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೈಗಾರಿಕಾ ವಲಯಕ್ಕಾಗಿ 4 ಸಾವಿರ ಎಕರೆ ಭೂಮಿಯನ್ನು ಗುರುತಿಸಲಾಗಿದೆ ಎಂದರು.

Follow Us:
Download App:
  • android
  • ios