ಇಂಜಿನಿಯರಿಂಗ್, ಡಿಪ್ಲೊಮಾ ಪರೀಕ್ಷೆ ಮುಂದೂಡಿಕೆ
ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ರಾಜ್ಯದ ಹಲವು ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು, (ಏ.27): ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ಕೊರೋನಾ ಕರ್ಫ್ಯೂ ಜಾರಿ ಹಿನ್ನಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಲಾಕ್‌ಡೌನ್: ಹಲವು ಪರೀಕ್ಷೆಗಳು ಮುಂದೂಡಿಕೆ
ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೊರೋನಾ ಕರ್ಫ್ಯೂ ವಿಧಿಸಲಾಗಿದೆ. ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.