ಅನುಮತಿ ಇಲ್ಲದೆ ನಕಲಿ ಶಾಲೆ, ಆರ್ಕಿಡ್ ದಿ ಇಂಟರ್ ನ್ಯಾಷನಲ್ ವಿರುದ್ಧ ಕೇಸ್
ಅನುಮತಿ ಇಲ್ಲದೆ ಶಾಲೆ ನಡೆಸುತ್ತಿದ್ದ ಆರ್ಕಿಡ್ ದಿ ಇಂಟರ್ ನ್ಯಾಷನಲ್ ಸ್ಕೂಲ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಮಾಗಡಿ ರಸ್ತೆ ಹೊಸಹಳ್ಳಿ ಗೊಲ್ಲರಪಾಳ್ಯದ ಆರ್ಕಿಡ್ ದಿ ಇಂಟರ್ ನ್ಯಾಷನಲ್ ಸ್ಕೂಲ್ ಮೇಲೆ ಎಫ್ ಐ ಆರ್ ದಾಖಲಾಗಿದೆ.
ವರದಿ ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್
ಬೆಂಗಳೂರು (ಜು.14): ಅನುಮತಿ ಇಲ್ಲದೆ ಶಾಲೆ ನಡೆಸುತ್ತಿದ್ದ ಆರ್ಕಿಡ್ ದಿ ಇಂಟರ್ ನ್ಯಾಷನಲ್ ಸ್ಕೂಲ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಮಾಗಡಿ ರಸ್ತೆ ಹೊಸಹಳ್ಳಿ ಗೊಲ್ಲರಪಾಳ್ಯದ ಆರ್ಕಿಡ್ ದಿ ಇಂಟರ್ ನ್ಯಾಷನಲ್ ಸ್ಕೂಲ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಶಾಲೆ ಮೇಲೆ ಎಫ್ ಐ ಆರ್ ದಾಖಲಿಸಿ ತಾತ್ಕಾಲಿಕವಾಗಿ ಬಿಇಓ ರಮೇಶ್ ಕ್ಲೋಸ್ ಮಾಡಿದ್ದಾರೆ. ಬೆಂಗಳೂರು ಉತ್ತರ ವಲಯ 1 ರಲ್ಲಿ ಬರುವ ಆರ್ಕಿಡ್ ದಿ ಇಂಟರ್ ನ್ಯಾಷನಲ್ ಸ್ಕೂಲ್ 1 ರಿಂದ 7 ನೇ ತರಗತಿವರೆಗೆ ಶಾಲೆ ನಡೆಸಲಾಗುತ್ತಿದೆ.
ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೇ ಶಾಲೆ ಪ್ರಾರಂಭ ಮಾಡಿರೋ ಆರೋಪ ಕೇಳಿಬಂದಿದ್ದು ಆರ್ಕಿಡ್ ಇಂಟರ್ ನ್ಯಾಷನಲ್ ಶಾಲೆಯ ಸೆಕ್ರೆಟರಿ ಹಾಗೂ ಶಾಲಾ ಪ್ರಾಂಶುಪಾಲರ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಾಲೆಯಲ್ಲಿ ಎಲೆಕ್ಟ್ರೀಕ್ ಕೆಲಸ ನಡೀತಾ ಇದೆ ಅಂತ ಸಬೂಬು ಹೇಳಿ ಶಾಲೆಯಿಂದ ಪೋಷಕರಿಗೆ ತಪ್ಪು ಮಾಹಿತಿ ನೀಡಿ ಶಾಲೆ ಕ್ಲೋಸ್ ಮಾಡಿದ್ದಾರೆ. ಆನ್ ಲೈನ್ ಕ್ಲಾಸ್ ಮಾಡುವುದಾಗಿ ಮೆಸೆಜ್ ಕಳುಹಿಸಿರುವ ಶಾಲಾ ಆಡಳಿತ ಮಂಡಳಿ ಮಾತನ್ನ ಪೋಷಕರು ನಂಬಿದ್ದಾರೆ. ಇನ್ನೂ ಶಾಲೆ ಬಳಿ ಬಂದಾಗಲೇ ಪೋಷಕರಿಗೆ ಅಸಲಿ ಸತ್ಯ ಗೋತ್ತಾಗಿದ್ದು, ಲಕ್ಷ ಲಕ್ಷ ಹಣ ಪಡೆದು ಪೋಷಕರಿಗೆ ವಂಚನೆ ಮಾಡಿದ ಶಾಲಾ ಆಡಳಿತ ಮಂಡಳಿ ಅನ್ನೋ ಅನುಮಾನ ಮೂಡಿದೆ.
2022-23 ನೇ ಶೈಕ್ಷಣಿಕ ವರ್ಷದಿಂದ ಶಾಲೆ ಪ್ರಾರಂಭಿಸಿರುವ ಆರ್ಕಿಡ್ ದಿ ಇಂಟರ್ ನ್ಯಾಷನಲ್ ಸ್ಕೂಲ್ .ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೇ ಶಾಲೆ ಪ್ರಾರಂಭಿಸಿದ್ದಾರೆ. ಹೀಗಾಗಿ ಶಾಲೆಯನ್ನ ಕ್ಲೋಸ್ ಮಾಡಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಉತ್ತರ ವಲಯ-1 ಕ್ಷೇತ್ರ ಶಿಕ್ಷಣಾಧಿಕಾರಿ ವಿ.ರಮೇಶ್ ಅವರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
‘ನಾವು ಶಾಲಾ ಮಾನ್ಯತೆ, ಮಕ್ಕಳ ದಾಖಲಾತಿಗೆ ಅನುಮತಿ ಸೇರಿ ಶಾಲೆ ಆರಂಭಿಸಲು ಎಲ್ಲಾ ಕಾನೂನಾತ್ಮಕ ಕ್ರಮಗಳಿಗೆ ಅರ್ಜಿ ಸಲ್ಲಿಸಲಾಗಿದ್ದು, ಅನುಮೋದನೆಯ ನಿರೀಕ್ಷೆಯಲ್ಲಿದ್ದೇವೆ’ ಎಂದು ಶಾಲೆಯ ಆಡಳಿತ ಮಂಡಳಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.