ಶಾಲಾ ಛಾವಣಿ ಬಿದ್ದು ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಶಾಲಾ ಕಟ್ಟದ ಚಾವಣಿ ತಲೆಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟತಾಲೂಕಿನ ಶಂಕರಬಂಡೆ ಗ್ರಾಮದ ವಿದ್ಯಾರ್ಥಿನಿ ಹಾಜರಾಬಿ (14) ಕುಟುಂಬಕ್ಕೆ .25 ಲಕ್ಷ ಪರಿಹಾರ ನೀಡಬೇಕು ಹಾಗೂ ಜಿಲ್ಲೆಯ ಶಿಥಿಲಗೊಂಡ ಎಲ್ಲ ಸರ್ಕಾರಿ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವಿ.ಬಿ.ಮಲ್ಲಪ್ಪ ಒತ್ತಾಯಿಸಿದ್ದಾರೆ.

Forced to pay 25 lakh compensation to the family of the deceased student ballari  rav

ಬಳ್ಳಾರಿ (ಸೆ.3) : ಶಾಲಾ ಕಟ್ಟದ ಚಾವಣಿ ತಲೆಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟತಾಲೂಕಿನ ಶಂಕರಬಂಡೆ ಗ್ರಾಮದ ವಿದ್ಯಾರ್ಥಿನಿ ಹಾಜರಾಬಿ (14) ಕುಟುಂಬಕ್ಕೆ .25 ಲಕ್ಷ ಪರಿಹಾರ ನೀಡಬೇಕು ಹಾಗೂ ಜಿಲ್ಲೆಯ ಶಿಥಿಲಗೊಂಡ ಎಲ್ಲ ಸರ್ಕಾರಿ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವಿ.ಬಿ.ಮಲ್ಲಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಸಾವಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ನೇರ ಹೊಣೆಯಾಗಿದ್ದಾರೆ. ಜಿಲ್ಲೆಯ ನೂರಾರು ಶಾಲೆಗಳು ಶಿಥಿಲಗೊಂಡು ಅಪಾಯದ ಸ್ಥಿತಿಯಲ್ಲಿವೆ. ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದೆ ಹೋದರೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಎಂದರು. 

Hassan: ಕಾಲೇಜಿಗೆ ಹೋಗುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

ಶಂಕರಬಂಡೆ ಗ್ರಾಮದ ಶಾಲೆಗೆ ಪಕ್ಷದ ನಿಯೋಗ ಭೇಟಿ ನೀಡಿತ್ತು. ಶಾಲೆಯ ಸ್ಥಿತಿ ತುಂಬಾ ಗಂಭೀರವಾಗಿದೆ. ಶಿಕ್ಷಕರು ಆತಂಕದಲ್ಲಿಯೇ ಕೆಲಸ ನಿರ್ವಹಿಸುವಂತಾಗಿದೆ. ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿಲ್ಲ. ಹತ್ತಾರು ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ಜಿಲ್ಲೆಯನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಜಿಲ್ಲೆಯ ಜನಪ್ರತಿನಿಧಿಗಳು, ಮೊದಲು ಸರ್ಕಾರಿ ಶಾಲೆಯ ಸ್ಥಿತಿಗತಿಗಳನ್ನು ನೋಡಲಿ.

ಅಭಿವೃದ್ಧಿ ಎಂದರೆ ಕೋಟ್ಯಂತರ ವ್ಯಯಿಸಿ ಟವರ್‌ ಕ್ಲಾಕ್‌ಗಳನ್ನು ನಿರ್ಮಿಸುವುದಲ್ಲ. ನಗರ ಹಾಗೂ ಗ್ರಾಮೀಣ ಭಾಗದ ಶೈಕ್ಷಣಿಕ ಪ್ರಗತಿಯ ಕಡೆ ಗಮನ ನೀಡಬೇಕು. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಆದರೆ, ಈ ಜಿಲ್ಲೆಯ ಜನಪ್ರತಿನಿಧಿಗಳಿಗೆ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಗಳನ್ನು ನೋಡಲು ಸಮಯವಿಲ್ಲವಾಗಿದೆ. ಹೀಗಾಗಿಯೇ ಸರ್ಕಾರಿ ಶಾಲೆಗಳು ಸುಸಜ್ಜಿತ ಕಟ್ಟಡ ಹಾಗೂ ಮೂಲ ಸೌಕರ್ಯವಿಲ್ಲದೆ ಬಳಲುವಂತಾಗಿದೆ ಎಂದು ದೂರಿದರು.

SSLC ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು

ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಗೆ ತೆರಳಿ ಅಲ್ಲಿನ ಸರ್ಕಾರಿ ಶಾಲೆಗಳ ವ್ಯವಸ್ಥೆಯನ್ನು ನೋಡಿ ಬರಲಿ. ದೆಹಲಿಯ ಆಮ್‌ಆದ್ಮಿ ಪಕ್ಷ ಶಿಕ್ಷಣ ಹಾಗೂ ಆರೋಗ್ಯಕ್ಕೆ ಒತ್ತು ನೀಡಿ ಕಾರ್ಯನಿರ್ವಹಿಸುತ್ತಿದೆ. ಬಡ ಹಾಗೂ ಮಧ್ಯಮ ವರ್ಗದ ಜನರ ಹಿತಾಸಕ್ತಿಗಳನ್ನು ಕಾಯುವ ದಿಸೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ದೆಹಲಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿರುವಾಗ ನಮ್ಮ ರಾಜ್ಯದಲ್ಲಿ ಏಕೆ ಸಾದ್ಯವಾಗುವುದಿಲ್ಲ. ಈ ಜಿಲ್ಲೆಯ ಜನಪ್ರತಿನಿಧಿಗಳಿಗೆ ಏಕೆ ಸಾಧ್ಯವಾಗುವುದಿಲ್ಲ ಎಂದು ಪ್ರಶ್ನಿಸಿದರಲ್ಲದೆ, ಶಂಕರಬಂಡೆ ಗ್ರಾಮದ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಜಿಲ್ಲಾಡಳಿತ ಕೂಡಲೇ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು. ಪಕ್ಷದ ಜಿಲ್ಲಾ ಪ್ರಮುಖರಾದ ಟಿ.ಕಿರಣ್‌ಕುಮಾರ್‌, ಖಲಂದರ್‌, ಸೈಯದ್‌ ಅಮೀರ್‌ ಖಾದ್ರಿ, ಶೇಕ್ಷಾವಲಿ ಸುದ್ದಿಗೋಷ್ಠಿಯಲ್ಲಿದ್ದರು.

Latest Videos
Follow Us:
Download App:
  • android
  • ios