ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ
ರಾಜ್ಯಾದ್ಯಂತ ಇನ್ನುಮುಂದೆ ಸರ್ಕಾರಿ ಸ್ವಾಮ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು.
ಬೆಂಗಳೂರು (ಜೂ.20): ರಾಜ್ಯಾದ್ಯಂತ ಇನ್ನುಮುಂದೆ ಸರ್ಕಾರಿ ಸ್ವಾಮ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಎಲ್ಲ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜು ಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ನಿರ್ಧಾರ ಮಾಡಲಾಗಿದೆ.29.15 ಕೋಟಿ ರೂ.ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.
Shivamogga: ಜಾತಿ ಪ್ರಮಾಣಪತ್ರಕ್ಕಾಗಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತ ಶಾಸಕ ಅರಗ ಜ್ಞಾನೇಂದ್ರ
ಸಚಿವ ಸಂಪುಟದಲ್ಲಿ ಒಟ್ಟು 20 ವಿಷಯಗಳ ಮೇಲೆ ಚರ್ಚೆಯಾಗಿ ನಿರ್ಣಯ ಮಾಡಲಾಗಿದೆ. ವಾಣಿಜ್ಯ ಕೈಗಾರಿಕೆ ಇಲಾಖೆ ಗೆ ಸಂಬಂಧಿಸಿ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ಕೊಡಲಾಗುವುದು. ನಿಷ್ಕ್ರಿಯವಾಗಿದ್ದ ೧೩೦೪ ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಚಟುವಟಿಕೆ ಮುಂದುವರಿಸುವ ಪ್ರಸ್ತಾವನೆಗೆ ಅನುಮತಿ ನಿಡಲಾಗುವುದು. ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಹಮತಿ. ಗಣಿ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ ನೀಡಲು ಸಂಪುಟ ಗ್ರೀನ್ ಸಿಗ್ನಲ್. ಟೇನಿಂಗ್ ಡಂಪ್ಸ್ ಬಳಸಿಕೊಂಡು ಗಣಿ ಚಟುವಟಿಕೆ ಮುಂದುವರಿಸಲು ಅವಕಾಶ ನೀಡಲಾಗುವುದು. 2230 ಎಕರೆ ಭೂಮಿಯನ್ನು ಸರ್ಕಾರಕ್ಕೆ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ಕೆಜಿಎಫ್ ನಿಂದ ಸರ್ಕಾರಕ್ಕೆ ನೀಡಬೇಕು. 75.24 ಕೋಟಿ ರೂ. ಸರ್ಕಾರಕ್ಕೆ ಪಾವತಿ ಮಾಡುವುದು ಬಾಕಿ ಇದೆ. ಅದನ್ನೂ ಭರಿಸುವಂತೆ ಭಾರತ್ ಮೈನಿಂಗ್ಸ್ ಗೆ ಸೂಚನೆ ನೀಡಲಾಗುವುದು ಎಂದರು.
ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ 8 ಹೊಸ ಸೆಕ್ಷನ್ ಸೇರ್ಪಡೆ ಮಾಡಿದ ಪೊಲೀಸರು; ಜೈಲೂಟ ಫಿಕ್ಸ್!
ರಾಜ್ಯದಲ್ಲಿ ಸಂವಿಧಾನ ದಿನಾಚರಣೆ, ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಗಾಂಧಿ ಜಯಂತಿ ಯಂದು ಕೇವಲ ಗಾಂಧಿ ಭಾವಚಿತ್ರ ಮಾತ್ರ ಇರುತ್ತಿತ್ತು. ಇನ್ಮುಂದೆ ಈ ಎಲ್ಲಾ ಸಂದರ್ಭದಲ್ಲಿ ಅಂಬೇಡ್ಕರ್ ಭಾವ ಚಿತ್ರ ಇಡುವುದು ಕೂಡ ಕಡ್ಡಾಯ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ. ವಿಶ್ವ ವಿದ್ಯಾಲಯಗಳ ಅಭಿವೃದ್ದಿಗೆ 297.77 ಕೋಟಿ ಬಿಡುಗಡೆಗೆ ಕ್ಯಾಬಿನೆಟ್ ಅನುಮೋದನೆ ನೀಡಲಾಗುವುದು. ಜೊತೆಗೆ, ರಾಜ್ಯದ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟು, ರೋಟರಿ ಸಂಸ್ಥೆಗೆ ಇದರ ಜವಾಬ್ದಾರಿ ವಹಿಸಲಾಗುವುದು ಎಂದು ತಿಳಿಸಿದರು..