ಬೆಂಗಳೂರು (ಆ.06):  ರಾಜ್ಯದಲ್ಲಿ ಸೆ.7ರಿಂದ 19ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. 

ಪರೀಕ್ಷೆ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಮನೆಯಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದೆ. 

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬಸ್​ನಲ್ಲಿ ಉಚಿತ ಪ್ರಯಾಣ, ಕಂಡಿಷನ್ ಅಪ್ಲೈ

ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೆ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಹಲವು ರೀತಿಯ ಅನುಕೂಲತೆಯನ್ನು ಒದಗಿಸಿಕೊಟ್ಟಿದ್ದು, ಇದೀಗ ಪರಿಕ್ಷಾರ್ಥಿಗಳಿಗಾಗಿ ಉಚಿತ ಬಸ್ ಸೇವೆ ಒದಗಿಸಲು ಸಿದ್ಧವಾಗಿದೆ.