ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌: ಹೊಸ ಪಾಸ್‌ ಇಲ್ಲದಿದ್ದರೂ ಜೂ.30ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ

ರಾಜ್ಯದ ವಿದ್ಯಾರ್ಥಿಗಳು ಜೂ.30ರವರೆಗೆ ಹೊಸ ಬಸ್‌ಪಾಸ್‌ ಮಾಡಿಕೊಳ್ಳದೇ ಉಚುತವಾಗಿ ಸಾರಿಗೆ ಬಸ್‌ನಲ್ಲಿ ಸಂಚಾರ ಮಾಡಲು ಸರ್ಕಾರದಿಂದ ಅನುಮತಿ ನೀಡಲಾಗಿದೆ.

Good news for Karnataka students without KSRTC bus pass free travel allowed till June 30 sat

ಬೆಂಗಳೂರು (ಜೂ.14):  ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್‌ ವಿತರಣೆ ಮಾಡುವವರೆಗೂ ಅಂದರೆ ಜೂನ್‌ 30ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್‌ಗಳಲ್ಲಿ ಜೂನ್‌ 30ರ ತನಕ ವಿದ್ಯಾರ್ಥಿಗಳು ಉಚಿತವಾಗಿ ಅಥವಾ ರಿಯಾಯಿತಿ ದರ ಪಾವತಿಸಿ ಪ್ರಯಾಣಿಸಬಹುದು ‍(Free ride for Students) ಎಂದು ಕೆಎಸ್‌ಆರ್‌ಟಿಸಿ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸು (Student Bus Pass) ಗಳನ್ನು ಇಡಿಸಿಎಸ್ ಇಲಾಖೆಯ (EDCS Department) ಸೇವಾ ಸಿಂಧು ತಂತ್ರಾಂಶದ (Sevasindhu Portal)ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮ ತೆಗೆದುಕೊಂಡಿದೆ. ಇದಕ್ಕಾಗಿ ಇಡಿಸಿಎಸ್‌ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಸ್ಟೂಡೆಂಟ್‌ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಕೆ ಆರಂಭ: ಪಾಸ್‌ನ ಹೊಸ ದರ ಹೀಗಿದೆ

15 ದಿನಗಳ ಉಚಿತ ಪ್ರಯಾಣದ ಅವಧಿ ವಿಸ್ತರಣೆ: ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಪಠ್ಯ ಚಟುವಟಿಕೆಗಳು ಆರಂಭಗೊಂಡ ಹಿನ್ನೆಲೆಯಲ್ಲಿ ಪಾಸ್ ವಿತರಣೆ ಆಗುವವರೆಗೂ ಜೂ.15ರವರೆಗೆ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಆದರೆ, ಈಗ ಹೊಸ ಶೈಕ್ಷಣಿಕ  ವರ್ಷಕ್ಕೆ ಅನ್ವಯವಾಗುವಂತೆ ವಿದ್ಯಾರ್ಥಿಗಳಿಗೆ ಜೂ.12ರಿಂದ ಬಸ್‌ ಪಾಸ್‌ ಪಡೆಯಲು ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆನ್‌ಲೈನ್‌ ಮೂಲಕ ವಿದ್ಯಾರ್ಥಿ ಪಾಸ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮತ್ತು ಪಾಸ್‌ ಪಡೆಯಲು ಕಾಲಾವಕಾಶಬೇಕು. ಈಗಾಗಲೇ ಶೈಕ್ಷಣಿಕ ತರಗತಿ ಶುರುವಾಗಿರುವ ಕಾರಣ, ಕೇವಲ 3 ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪಾಸ್‌ ಪಡೆಯಲು ಸಾಧ್ಯವಿಲ್ಲವೆಂದು ಪರಿಗಣಿಸಿ ಉಚಿತ ಪ್ರಯಾಣವನ್ನು ಜೂ.30ರವರೆಗೆ ಅವಕಾಶ ನೀಡಲಾಗಿದೆ. 

ಶುಲ್ಕ ಪಾವತಿ ರಶೀದಿ ತೋರಿಸಿ ಪ್ರಯಾಣ ಮಾಡಿ:  ಕೆಎಸ್‌ಆರ್‌ಟಿಸಿಯ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಜೂನ್‌ 30ರ ತನಕ ನಗರ ಮತ್ತು ಹೊರವಲಯಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇನ್ನು ಜೂ.30ರೊಳಗೆ ವಿದ್ಯಾರ್ಥಿಗಳು ಸರ್ಕಾರದಿಂದ ನೀಡುವ ಪ್ರಸಕ್ತ ಸಾಲಿನ (2023-24) ವಿದ್ಯಾರ್ಥಿ ಬಸ್‌ ಪಾಸ್‌ ಪಡೆಯಬೇಕು. ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬೇಕಾದರೆ ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವುದನ್ನು ದೃಢೀಕರಿಸುವ ಶುಲ್ಕ ಪಾವತಿ ರಸೀದಿ ಅಥವಾ ಕಳೆದ ವರ್ಷದ (2022-23ನೇ ಸಾಲಿನ) ವಿದ್ಯಾರ್ಥಿ ಬಸ್‌ ಪಾಸ್ ಅನ್ನು ನಿರ್ವಾಹಕರಿಗೆ ತೋರಿಸಬೇಕಾದ್ದು ಅವಶ್ಯ ಎಂದು ನಿಗಮದ ಸುತ್ತೋಲೆ ವಿವರಿಸಿದೆ.

 

Latest Videos
Follow Us:
Download App:
  • android
  • ios