ದಸರಾ ರಜೆ ಬದಲಾವಣೆ ಮಾಡಲು ಸರ್ಕಾರ ಒಪ್ಪಿಗೆ, ಜಿಲ್ಲಾಧಿಕಾರಿಗಳಿಗೆ ಬಿ ಸಿ ನಾಗೇಶ್ ಸೂಚನೆ
ಸೆ.26ರಿಂದ ನವರಾತ್ರಿ ಹಬ್ಬ ಆರಂಭವಾಗುತ್ತಿದ್ದು. ಹಬ್ಬಕ್ಕೆ ಪೂರಕವಾಗುವಂತೆ ದಸರಾ ರಜೆ ಬದಲಾವಣೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.
ಬೆಂಗಳೂರು (ಸೆ.13): ಸೆ.26ರಿಂದ ನವರಾತ್ರಿ ಹಬ್ಬ ಆರಂಭವಾಗುತ್ತಿದ್ದು., ಹಬ್ಬಕ್ಕೆ ಪೂರಕವಾಗುವಂತೆ ದಸರಾ ರಜೆ ಬದಲಾವಣೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬದಲಾವಣೆಯನ್ನು ಮಾಡಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರೆ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗವಂತೆ ಸೆ.26ರಿಂದ ಅ.10ರವರೆಗೆ ನೀಡುವಂತೆ ಕೋರಿಕೆ ಬಂದಿತ್ತು. ಹೀಗಾಗಿ ಪರಿಶೀಲನೆ ಮಾಡಿ ಶೈಕ್ಷಣಿಕ ಚಟುವಟಿಕೆಯನ್ನು ಸರಿದೂಗಿಸುವ ಹಾಗೂ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯನ್ನು ಆಚರಿಸುವ ಷರತ್ತಿನ ಮೇರೆಗೆ ರಜೆಯನ್ನು ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
ಇನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ನೀಡಿದ ಮನವಿಯಂತೆ ದ.ಕ. ಜಿಲ್ಲೆಯಲ್ಲಿ ಸೆ.26ರಿಂದ ಅ.10ರವರೆಗೆ ದಸರಾ ರಜೆ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಸೆ.26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಸಚಿವರಿಗೆ ಮನವಿ ಮಾಡಿದ್ದೆ. ಮಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸೇರಿದಂತೆ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರಾ ಹಬ್ಬ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಅ.2ರಂದು ಗಾಂಧಿ ಜಯಂತಿ ಆಚರಿಸುವ ಷರತ್ತಿನೊಂದಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ದಸರಾ ಆರಂಭಕ್ಕೂ ಮುನ್ನ ರಸ್ತೆ ಗುಂಡಿಗಳನ್ನು ಮುಚ್ಚಿ: ದಸರಾ ಆರಂಭಕ್ಕೂ ಮುನ್ನವೇ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ನಗರ ಪಾಲಿಕೆ ಅಧಿಕಾರಿಗಳಿಗೆ ಮೇಯರ್ ಶಿವಕುಮಾರ್ ಸೂಚಿಸಿದರು. ನಗರ ಪಾಲಿಕೆಯ ಹಳೆಯ ಕೌನ್ಸಿಲ್ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿ ಮಾತನಾಡಿದ ಅವರು, ನಗರದ ಬಹುತೇಕ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಕೆಲವು ಕಡೆ ಶಾಸಕರ ಅನುದಾನಿಂದ ಕಾಮಗಾರಿ ಆರಂಭವಾಗಿವೆ. ಈ ತಿಂಗಳ ಕೊನೆ ವಾರದಲ್ಲಿ ದಸರಾ ಆರಂಭಗೊಳ್ಳಲಿದೆ. ಹಾಳಾಗಿರುವ ರಸ್ತೆಯನ್ನು ಅಭಿವೃದ್ಧಿಪಡಿಸುವ ಸವಾಲಿದೆ. ತಕ್ಷಣಕ್ಕೆ ದಸರಾ ಆರಂಭಕ್ಕೂ ಮುನ್ನವೇ ಗುಂಡಿ ಮುಚ್ಚಲು ಕ್ರಮ ವಹಿಸಬೇಕು ಎಂದು ಹೇಳಿದರು.
3- 4 ದಿನಗಳು ಮಳೆ ಬರುವುದಿಲ್ಲ ಎಂಬ ಮಾಹಿತಿ ಇದೆ. ಅಷ್ಟರಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಿದ್ದೇವೆ ಎಂದು ಅಧಿಕಾರಿಗಲು ಮಾಹಿತಿ ನೀಡಿದರು. ನಗರದ ಪ್ರದೇಶ ವ್ಯಾಪ್ತಿಯಲ್ಲಿರುವ ಟ್ರೇಡರ್ಸ್ಗಳ ಬಗ್ಗೆ ನಿಖರವಾದ ಮಾಹಿತಿ ಇಲ್ಲ. 2008 ರಿಂದ ಈ ವಿಚಾರ ಪ್ರಸ್ತಾಪವಾಗುತ್ತಿದೆ. ಸಮರ್ಪಕ ಮಾಹಿತಿಯೇ ಇಲ್ಲದಿದ್ದರೆ ಕೆಲಸ ಮಾಡುವುದು ಹೇಗೆ? ವಾರದೊಳಗೆ ವಾರ್ಡ್‌ವಾರು, ವಲಯವಾರು ಮಾಹಿತಿ ಕೊಡುವಂತೆ ಮೇಯರ್ ಸೂಚಿಸಿದರು.
ದಸರಾಗೆ Lingambudhi Botanical Garden ಲೋಕಾರ್ಪಣೆ
ಸ್ವಚ್ಛತಾ ಅಭಿಯಾನದಲ್ಲಿ ಮೈಸೂರು ಮೂರ್ನಾಲ್ಕು ವರ್ಷಗಳಿಂದ ಸ್ಥಾನ ಪಡೆದಿಲ್ಲ. ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಭರವಸೆ ಕೊಟ್ಟಿದ್ದೇನೆ. ನಮ್ಮ ಭರವಸೆ ಈಡೇರಬೇಕಾದರೆ ಅಧಿಕಾರಿಗಳು ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು. ಪರಿಸರ ಎಂಜಿನಿಯರ್‌ಗಳು ಸ್ಥಳ ಪರಿಶೀಲಿಸಬೇಕು. ಶೀಘ್ರದಲ್ಲಿ ವಲಯವಾರು ಭೇಟಿ ನೀಡುವುದಾಗಿ ಅವರು ತಿಳಿಸಿದರು.
Mysuru Dasara 2022 : ಗಜಪಡೆಗಳಿಗೆ ಸಿಡಿಮದ್ದು ತಾಲೀಮಿನ ಹೈಲೈಟ್ಸ್
ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತ ದಾಸೇಗೌಡ ಮಾತನಾಡಿ, ಪ್ರಸ್ತಕ ಸಾಲಿನ ಆರ್ಥಿಕ ವರ್ಷದ ಐದು ತಿಂಗಳಲ್ಲಿ . 120 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ವರ್ಷಾಂತ್ಯಕ್ಕೆ . 165 ಕೋಟಿ ಸಂಗ್ರಹಿಸುವ ಗುರಿ ಇದೆ.