ಸರ್ಕಾರಿ ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳಿಗೆ ಎನ್‌ಬಿಎ ಮಾನ್ಯತೆ ಇಲ್ಲ: ಅಶ್ವತ್ಥನಾರಾಯಣ

ರಾಜ್ಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳು ಈವರೆಗೆ ಎನ್‌ಬಿಎ (ರಾಷ್ಟ್ರೀಯ ಮಾನ್ಯತೆ ಮಂಡಳಿ) ಮಾನ್ಯತೆ ಪಡೆಯಲು ಮುಂದಾಗಿಲ್ಲ. ಹೀಗಾಗಿ ಮಾನ್ಯತೆಗಾಗಿ ಈಗ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ  ತಿಳಿಸಿದ್ದಾರೆ. 

Government engineering and polytechnic colleges do not have NBA accreditation says minister cn ashwath narayan gvd

ವಿಧಾನ ಪರಿಷತ್‌ (ಮಾ.29): ರಾಜ್ಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳು ಈವರೆಗೆ ಎನ್‌ಬಿಎ (ರಾಷ್ಟ್ರೀಯ ಮಾನ್ಯತೆ ಮಂಡಳಿ) ಮಾನ್ಯತೆ ಪಡೆಯಲು ಮುಂದಾಗಿಲ್ಲ. ಹೀಗಾಗಿ ಮಾನ್ಯತೆಗಾಗಿ ಈಗ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ  (Dr CN Ashwath Narayan) ತಿಳಿಸಿದ್ದಾರೆ. ಕಾಂಗ್ರೆಸ್‌ನ ಸಲೀಂ ಅಹಮದ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸರ್ಕಾರಿ ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳು ಸಾಕಷ್ಟುಇದ್ದರೂ ಈವರೆಗೆ ಎನ್‌ಬಿಎ ಮಾನ್ಯತೆ ಪಡೆಯದೆ ನಡೆಸಿಕೊಂಡು ಬರಲಾಗುತ್ತಿದೆ. 

ಹಾಗಾಗಿ ಈಗ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಎನ್‌ಬಿಎ ಕಾಲೇಜಿಗೆ ಮಾನ್ಯತೆ ನೀಡದೆ ವಿಭಾಗವಾರು ಮಾನ್ಯತೆ ನೀಡಲಿದೆ ಎಂದರು. ಶತಮಾನದ ಇತಿಹಾಸ ಇರುವ ಬೆಂಗಳೂರಿನ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ (ಯುವಿಸಿಎ) ಕಾಲೇಜನ್ನು ಐಐಟಿ, ಐಐಎಂ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲು ಉದ್ದೇಶಿಸಲಾಗಿದೆ. ಈಗಾಗಲೇ ವಿವಿ ಎಂದು ಘೋಷಿಸಲಾಗಿದೆ ಎಂದರು. 

ಕಾಲೇಜಿನ ಆಡಳಿತ, ಆರ್ಥಿಕ ಸುಧಾರಣೆ ಮಾಡಲು, ನೇಮಕಾತಿ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 85 ಕೋಟಿ ರು.ಗಳ ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ, ಟೆಂಡರ್‌ ಸಹ ಕರೆಯಲಾಗಿದೆ. ಜೊತೆಗೆ ಅಗತ್ಯ ಕಾಯ್ದೆ ತರಲಾಗುವುದು, ಕಾಲೇಜಿನ ಗತ ವೈಭವ ಮರುಕಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಸದ್ಯ ಯುವಿಸಿಎಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಪಡೆದು ನೇಮಕಾತಿ ಮಾಡಲಾಗುವುದು ಎಂದು ಸಚಿವರು ವಿವರಿಸಿದರು.

ಖಾಸಗಿ ಶಾಲೆಗಳು ಸರಕಾರಿ ಶಾಲೆಗಳ ಮಕ್ಕಳ ಬಗ್ಗೆ ಚಿಂತಿಸಬೇಕು: ಅಶ್ವತ್ಥನಾರಾಯಣ

ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಡಿಜಿಟಲ್ ಆರ್ಥಿಕತೆಯ ಸುಸ್ಥಿರತೆಗೆ ಸುರಕ್ಷತೆ, ಭದ್ರತೆ ಮತ್ತು ವಿಶ್ವಸಾರ್ಹತೆಗಳು ಆಧಾರಸ್ತಂಭಗಳಾಗಿದ್ದು, ನಾವೀನ್ಯತೆ ಕೂಡ ವ್ಯಾಪಕ ಪ್ರಮಾಣದಲ್ಲಿ ನಡೆಯಬೇಕಾಗಿದೆ. ಸೈಬರ್ ವಂಚನೆಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸರಕಾರವು ಶೀಘ್ರದಲ್ಲೇ `ಸೈಬರ್ ಭದ್ರತಾ ನೀತಿ’ಯನ್ನು (Cyber Security Policy) ಜಾರಿಗೆ ತರಲಿದೆ ಎಂದು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

`ಅಸೋಚಂ’ ಸಂಘಟನೆಯು ವರ್ಚುಯಲ್ ರೂಪದಲ್ಲಿ ಏರ್ಪಡಿಸಿರುವ ಎರಡು ದಿನಗಳ ತನ್ನ 12ನೇ ಜಾಗತಿಕ ಸಮಾವೇಶದಲ್ಲಿ ಸೋಮವಾರ ಅವರು ಮಾತನಾಡಿದರು. ಸಮಾವೇಶದಲ್ಲಿ `ವಂಚನೆಗಳು ಮತ್ತು ವಿಧಿವಿಜ್ಞಾನ: ಮುನ್ನೆಲೆಗೆ ಬರುತ್ತಿರುವ ಪ್ರವೃತ್ತಿಗಳು ಹಾಗೂ ಸವಾಲುಗಳ ನಿಗ್ರಹ’ ಕುರಿತು ಪ್ರಧಾನವಾಗಿ ಚರ್ಚಿಸಲಾಗುತ್ತಿದೆ. ಉದ್ದೇಶಿತ ಸೈಬರ್ ಭದ್ರತಾ ನೀತಿಯು ಎಲ್ಲ ಆಯಾಮಗಳನ್ನೂ ಪರಿಗಣನೆಗೆ ತೆಗೆದುಕೊಂಡಿದೆ. ಈ ನೀತಿಯು ಜಾರಿಗೆ ಬಂದರೆ ಸರಕಾರದ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಪನ್ಮೂಲಗಳಾದ ರಾಜ್ಯ ದತ್ತಾಂಶ ಕೇಂದ್ರ, ವೈಡ್ ಏರಿಯಾ ನೆಟ್ವರ್ಕ್ ಮತ್ತು ಇ-ಆಡಳಿತ ಸೌಲಭ್ಯಗಳು ಸುರಕ್ಷಿತವಾಗಿರಲಿವೆ ಎಂದು ಅವರು ಹೇಳಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಇತ್ತೀಚಿನ ವರದಿಯಂತೆ 2021-22ರಲ್ಲಿ ದೇಶದ ವಾಣಿಜ್ಯ ಬ್ಯಾಂಕುಗಳಲ್ಲಿ 1.38 ಟ್ರಿಲಿಯನ್ ರೂಪಾಯಿಗಳಷ್ಟು ಅಗಾಧ ಮೊತ್ತವು ಸೈಬರ್ ವಂಚನೆಗೆ ಒಳಗಾಗಿದೆ. ಅದರಲ್ಲೂ ಖಾಸಗಿ ಬ್ಯಾಂಕುಗಳಲ್ಲಿ ಕಾರ್ಡುಗಳು ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ವಂಚನೆಗಳು ಅಗಾಧವಾಗಿ ನಡೆಯುತ್ತಿವೆ. ಇವುಗಳನ್ನು ನಿಗ್ರಹಿಸಬೇಕಾದ್ದು ಈಗಿನ ಜರೂರಾಗಿದೆ ಎಂದು ಅವರು ವಿವರಿಸಿದರು. ಭಾರತೀಯ ಡೇಟಾ ಸುರಕ್ಷತೆ ಮಂಡಲಿಯ ಪ್ರಕಾರ, ಸೈಬರ್ ಭದ್ರತಾ ಉದ್ಯಮವು ಸದ್ಯಕ್ಕೆ 80 ಶತಕೋಟಿ ಡಾಲರ್ ಮೌಲ್ಯವನ್ನು ಹೊಂದಿದ್ದು, ಮುಂದಿನ ಮೂರು ವರ್ಷಗಳಲ್ಲಿ ಇದು 190  ಶತಕೋಟಿ ಡಾಲರ್ ಗಾತ್ರಕ್ಕೆ ಬೆಳೆಯಲಿದೆ. ಇಂತಹ ಉದ್ಯಮವನ್ನು ಸುರಕ್ಷತೆಯೊಂದಿಗೆ ಬೆಳೆಸುವುದು ಸರಕಾರದ ಕರ್ತವ್ಯವಾಗಿದೆ ಎಂದು ಅವರು ನುಡಿದರು.

ರಾಜಕೀಯ ಉದ್ದೇಶದ ಪ್ರತಿಭಟನೆಗಳಿಗೆ ಅರ್ಥವಿಲ್ಲ, ರಸ್ತೆ ಅಗೆಯದೆ ಯಾವ ಕೆಲಸವೂ ಆಗಲ್ಲ

ಇಂಟರ್ನೆಟ್ ಬಳಕೆದಾರರ ಸಂಖ್ಯೆಯು ಕಳೆದ ಐದು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಳಗೊಂಡಿದ್ದು, ಡಿಜಿಟಲ್ ವಹಿವಾಟಿನ ಪ್ರಮಾಣವು ಕಳೆದ ಆರು ವರ್ಷಗಳಲ್ಲಿ 8 ಪಟ್ಟು ಹೆಚ್ಚಿದೆ. ಇದರ ಜತೆಗೆ ಬ್ರಾಡ್-ಬ್ಯಾಂಡ್ ಅಂತರ್ಜಾಲ ಬಳಕೆದಾರರ ಸಂಖ್ಯೆಯು 2016ರಿಂದ 2021ರ ನಡುವೆ ಶೇ.79ಕ್ಕಿಂತ ಹೆಚ್ಚು ಏರಿಕೆ ದಾಖಲಿಸಿದೆ. ಒಟ್ಟಿನಲ್ಲಿ ಸಾರ್ವಜನಿಕರು ವಂಚನೆಯ ಉದ್ದೇಶದ ಮೊಬೈಲ್  ಕರೆಗಳು, ಸಂದೇಶಗಳು, ಅಪರಿಚಿತ ಲಿಂಕ್ ಗಳು, ಅನಧಿಕೃತ ಕ್ಯೂಆರ್ ಕೋಡ್ ಇತ್ಯಾದಿಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಅಶ್ವತ್ಥನಾರಾಯಣ ಹೇಳಿದರು.

Latest Videos
Follow Us:
Download App:
  • android
  • ios