ದೇಶದಲ್ಲಿ Government Schoolsಗೆ ಸೇರಲು ಹೆಚ್ಚು ಮಕ್ಕಳು ಉತ್ಸುಕ

ಕೇಂದ್ರ ಸರ್ಕಾರದ ಸಮೀಕ್ಷೆಯೊಂದರ ಪ್ರಕಾರ ದೇಶದಾದ್ಯಂತ  ಮೂರನೇ ತರಗತಿಯಿಂದ 10 ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಿಗೆ ಹೆಚ್ಚು ಮಕ್ಕಳು ಸೇರುತ್ತಿದ್ದಾರೆ  ಎಂದು ತಿಳಿದುಬಂದಿದೆ.

Government schools get  happy  feedback as more and more children get enrolled says survey gow

ನವದೆಹಲಿ (ಮೇ.27):  ಖಾಸಗಿ ಶಾಲೆಗಳು (private schools) ಮಾತ್ರ ಮಕ್ಕಳನ್ನು ಸೆಳೆಯಬಲ್ಲವು ಎಂದು ನೀವು ಭಾವಿಸಿದರೆ ಅದು ಶುದ್ಧ ತಪ್ಪು. ಈಗ ದೇಶದಾದ್ಯಂತ ಹೆಚ್ಚು ಹೆಚ್ಚು ಮಕ್ಕಳು ಮೂರನೇ ತರಗತಿಯಿಂದ 10 ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಿಗೆ (government schools ) ಹೆಚ್ಚು ಮಕ್ಕಳು ಸೇರುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ (Central government) ಸಮೀಕ್ಷೆಯೊಂದು (survey) ಹೇಳಿದೆ.

ಶಿಕ್ಷಣ (Education) ಸಚಿವಾಲಯದ ಅಡಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬಿಡುಗಡೆ ಮಾಡಿದ ಇತ್ತೀಚಿನ ರಾಷ್ಟ್ರೀಯ ಸಾಧನೆ ಸಮೀಕ್ಷೆ (National Achievement Survey - NAS) ಪ್ರಕಾರ, ಹೆಚ್ಚಿನ ಮಕ್ಕಳು, ಅಂದರೆ ಶೇ. 94 ರಷ್ಟು ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ತಾವು ಸುರಕ್ಷಿತ ಎಂದು ಭಾವಿಸಿದ್ದಾರೆ. 

ಗುರುವಾರ ಬಿಡುಗಡೆಯಾದ NAS ವರದಿಯು, ಗ್ರಾಮೀಣ ಮತ್ತು ನಗರ ಪ್ರದೇಶಗಳ 720 ಜಿಲ್ಲೆಗಳಲ್ಲಿ ಮೂರರಿಂದ ರಿಂದ 10ನೇ ತರಗತಿಗಳಲ್ಲಿ ಸುಮಾರು 34 ಲಕ್ಷ ಮಕ್ಕಳು ದಾಖಲಾಗಿದ್ದಾರೆ.

 ನಿವೃತ್ತಿಗೆ ಕೇವಲ 1 ದಿನ ಬಾಕಿ ಇರುವಾಗಲೇ ಎಸಿಬಿ ಬಲೆಗೆ ಬಿದ್ದ MUDA ಅಧಿಕಾರಿ

ಆದಾಗ್ಯೂ, ಈ ಮಕ್ಕಳಲ್ಲಿ ಶೇ.76 ರಷ್ಟು ಮಕ್ಕಳು ತಮ್ಮ ಮನೆಗಳಲ್ಲಿ ಕಲಿಕೆಯ ಉದ್ದೇಶಗಳಿಗಾಗಿ ಡಿಜಿಟಲ್ ಸಾಧನಗಳನ್ನು ಹೊಂದಿದ್ದಾರೆ. ವಿವಿಧ ರಾಜ್ಯಗಳಲ್ಲಿ, ಒಟ್ಟು 34,01,158 ಮಕ್ಕಳಲ್ಲಿ ಶೇ. 48 ರಷ್ಟು ಮಕ್ಕಳು ತಮ್ಮ ಮನೆಗಳಿಂದ ಶಾಲೆಗಳಿಗೆ ಹೋಗುತ್ತಿದ್ದಾರೆ.

ಈ ಪೈಕಿ ಶೇ. 89 ರಷ್ಟು ಮಕ್ಕಳು ತಮ್ಮ ಕುಟುಂಬ ಸದಸ್ಯರೊಂದಿಗೆ ಪಾಠಗಳನ್ನು ಹಂಚಿಕೊಳ್ಳುತ್ತಾರೆ ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಲ್ಲಿ 51% ಮಕ್ಕಳು ಮಾತ್ರ ತಮ್ಮ ಮನೆಗಳಲ್ಲಿ ನಿಯತಕಾಲಿಕೆಗಳು ಮತ್ತು ಇತರ ಓದುವ ಸಾಮಗ್ರಿಗಳಿಗೆ ಪ್ರವೇಶವನ್ನು ಹೊಂದಿದ್ದಾರೆ. 

ಈ ಹಿಂದೆ NAS ಸಮೀಕ್ಷೆಯನ್ನು 2017 ರಲ್ಲಿ ನಡೆಸಲಾಯಿತು. NAS 2021 ವರದಿಗಾಗಿ, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲೆಗಳನ್ನು ಒಳಗೊಂಡ ಪ್ರಶ್ನಾವಳಿಗಳನ್ನು 22 ಭಾಷೆಗಳಲ್ಲಿ ಸಿದ್ಧಪಡಿಸಲಾಗಿತ್ತು.

Devegowdaರ ತೃತೀಯ ರಂಗಕ್ಕೆ ಜಗದೀಶ್ ಶೆಟ್ಟರ್ ಲೇವಡಿ  

SSLCಯಲ್ಲಿ ಶೂನ್ಯ ಸಾಧನೆಗೈದ BBMP ಶಾಲೆಗಳ ಶಿಕ್ಷಕರ ವಜಾ!: 2021 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ (SSLC Exam) ಶೇ.99.94 ರಷ್ಟು ಫಲಿತಾಂಶ ದಾಖಲಿಸಿದ ಬಳಿಕ ಈ ಸಾಲಿನಲ್ಲಿ ಬಿಬಿಎಂಪಿಯ ಶಿಕ್ಷಣ ಇಲಾಖೆಗೆ ದೊಡ್ಡ ಶಾಕ್ ಎದುರಾಗಿದ್ದು, ಪುರಸಭೆಯಿಂದ ನಿರ್ವಹಣೆಯಾಗುತ್ತಿರುವ ಶಾಲೆಗಳಲ್ಲಿ (School) ಫಲಿತಾಂಶ ತೀವ್ರ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಶೂನ್ಯ ಸಾಧನೆ ಮಾಡಿರುವ ಎರಡು ಶಾಲೆಗೆ ನೋಟಿಸ್ ನೀಡಲಾಗಿದ್ದು, ಶಿಕ್ಷಕರನ್ನು ವಜಾ ಮಾಡಲಾಗಿದೆ.

ಬಿಬಿಎಂಪಿ (BBMP) ಶಾಲೆಗಳು 2022ನೇ ಸಾಲಿನ ಎಸ್ಎಸ್  ಶೇ.71.27 ರಷ್ಟು ತೇರ್ಗಡೆ ಫಲಿತಾಂಶವನ್ನು ಹೊಂದಿದ್ದು, ತೀವ್ರ ಕುಸಿತ ಕಂಡಿದೆ.  ಜೊತೆಗೆ ಎರಡು ಶಿಕ್ಷಣ ಸಂಸ್ಥೆಗಳು  ಶೂನ್ಯ ಸಾಧನೆ ಮಾಡಿದ್ದು,  ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ಮರ್ಫಿ ಟೌನ್‌ನ 19 ವಿದ್ಯಾರ್ಥಿಗಳು ಮತ್ತು ಕೆ.ಜಿ.ನಗರದ  ಶಾಲೆಯ ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. 

 2020 ರಲ್ಲಿ ಶೇ.50.16   2019ರಲ್ಲಿ ಶೇ.52  ಮತ್ತು 2018 ರಲ್ಲಿ ಶೇ. 51 ಫಲಿತಾಂಶವಿತ್ತು. ಆ ವರ್ಷಗಳಿಗೆ ಹೋಲಿಸಿದರೆ 2022 ರ ಉತ್ತೀರ್ಣ ಶೇಕಡಾವಾರು ಶೇಕಡಾ 71.27 ರಷ್ಟಿದೆ. ವಾಸ್ತವವಾಗಿ, ಕೆ ಜಿ ನಗರ ಶಾಲೆಯು 2020 ರ ನಂತರ ಎರಡನೇ ಬಾರಿಗೆ ಶೂನ್ಯ ಶೇಕಡಾವನ್ನು ಪಡೆದುಕೊಂಡಿದೆ. 

ಬಿಬಿಎಂಪಿ ಎರಡೂ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಶಿಕ್ಷಕರನ್ನೂ ವಜಾ ಮಾಡಿದೆ. ಕಳಪೆ ಶೈಕ್ಷಣಿಕ ಸಾಧನೆಗೆ ವಿವರಣೆ ನೀಡುವಂತೆ ನಾವು ಶೋಕಾಸ್ ನೋಟಿಸ್ ನೀಡಿದ್ದೇವೆ. ಶೇ.50ಕ್ಕಿಂತ ಕಡಿಮೆ ಉತ್ತೀರ್ಣತೆ ಪಡೆದಿರುವ ಬಿಬಿಎಂಪಿ ಶಾಲೆಗಳಿಗೂ ಗುರುತು ಹಾಕಿದ್ದು, ಸುಧಾರಿಸಿಕೊಳ್ಳುವಂತೆ ಎಚ್ಚರಿಸಿದ್ದೇವೆ.

Latest Videos
Follow Us:
Download App:
  • android
  • ios