Asianet Suvarna News Asianet Suvarna News

ಹೈಸ್ಕೂಲ್ ಹುಡ್ಗೀರಿಗೆ ಹೆಡ್‌ ಮೇಷ್ಟ್ರಿಂದಲೇ ಲೈಂಗಿಕ ಕಿರುಕುಳ: ಸರ್ಕಾರದ ಶಿಕ್ಷೆಗೆ ಬೆಚ್ಚಿಬಿದ್ದ ಶಿಕ್ಷಕ!

ಯಾದಗಿರಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕನೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಸರ್ಕಾರ ಕೊಟ್ಟ ಶಿಕ್ಷಗೆ ಹೆಡ್‌ಮೇಷ್ಟ್ರು ಬೆಚ್ಚಿ ಬಿದ್ದಿದ್ದಾನೆ. 

Government was suspends head teacher for Sexually harassing high school girls sat
Author
First Published Jan 11, 2024, 6:01 PM IST | Last Updated Jan 11, 2024, 6:01 PM IST

ಯಾದಗಿರಿ (ಜ.11): ಕಲ್ಯಾಣ ಕರ್ನಾಟಕದ ಜಿಲ್ಲೆಯಾದ ಯಾದಗಿರಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್‌ಎಸ್‌ಎಲ್‌ಸಿಯಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಾ, ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ದೂರು ಸ್ವೀಕರಿಸಿದ ಶಿಕ್ಷಣ ಇಲಾಖೆ ತನಿಖಾ ವರದಿಯನ್ನು ಆಧರಿಸಿ ಮುಖ್ಯ ಶಿಕ್ಷಕ ಹಣಮೇಗೌಡ ಅವರನ್ನು ಅಮಾನತು ಮಾಡಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪೂರ ಗ್ರಾಮದ ಮುಖ್ಯ ಶಿಕ್ಷಕ ಹಣಮೇಗೌಡ ಅಮಾನತ್ತಾದ ಶಿಕ್ಷಕರಾಗಿದ್ದಾರೆ. ಪ್ರತಿನಿತ್ಯ ಶಾಲೆಗೆ ಹೋಗುವ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಮುಖ್ಯ ಶಿಕ್ಷಕರು ಮನಿಮಗೆ ಸ್ಪೆಷಲ್‌ ಕ್ಲಾಸ್‌ ಇದೆ ಎಂದು ಹೇಳಿ ಉಳಿಸಿಕೊಂಡು ಅವರೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಾ, ಲೈಂಗಿಕ ಕಿರುಕುಳ ನೀಡುತ್ತಿದ್ದರಂತೆ. ಈ ಬಗ್ಗೆ ಮಕ್ಕಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಮಕ್ಕಳ ಪೋಷಕರು ಶಿಕ್ಷಣ ಇಲಾಖೆಗೆ ಪತ್ರ ಬರೆದು ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಸಿದ್ದಾರೆ.

ಹಾಸ್ಟೆಲ್‌ನಲ್ಲಿ ಓದುತ್ತಲೇ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಮಕ್ಕಳ ಪಾಲಕರ ಮನವಿಯನನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆ ವಿಶೇಷ ತನಿಖಾ ತಂಡವನ್ನು ರಚಿಸಿ ಶಾಲೆಗೆ ಕಳಿಸುತ್ತಾರೆ. ಶಾಲೆಗೆ ಬಂದ ತನಿಖಾ ತಂಡ ಪ್ರತ್ಯಕ್ಷವಾಗಿ ಪರಿಶೀಲನೆ ಮಾಡಿದಾಗ ಮಕ್ಕಳು ಹೇಳಿಕೆಗಳು ಹಾಗೂ ಶಾಲಾ ಸಿಬ್ಬಂದಿಯ ಹೇಳಿಕೆಯನ್ನು ಪಡೆದು ವಿದ್ಯಾರ್ಥಿಗಳೊಂದೊಗೆ ಅನುಚಿತ ವರ್ತನೆ ತೋರುತ್ತಿರುವ ಬಗ್ಗೆ ಖಚಿತತೆ ಪಡೆದುಕೊಂಡಿದ್ದಾರೆ. ಇನ್ನು ಮಕ್ಕಳ ಪಾಲಕರ ದೂರಿನಲ್ಲಿ ಸತ್ಯಾಂಶವಿದೆ ಎಂದು ವರದಿ ಸಲ್ಲಿಕೆ ಮಾಡಲಾಗಿದೆ. ಈ ತನಿಖಾ ವರದಿಯನ್ನು ಆಧರಿಸಿ ಮುಖ್ಯ ಶಿಕ್ಷಕ ಹಣಮೇಗೌಡ ಅವರನ್ನು ಅಮಾನತ್ತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಗರೀಮಾ ಪನ್ವಾರ್ ಅವರು ಆದೇಶ ಹೊರಡಿಸಿದ್ದಾರೆ.

ಶಿಕ್ಷಕನಿಂದ ಅಶ್ಲೀಲ ಸಂದೇಶ ರವಾನೆ ಆರೋಪ : ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ

ಪ್ರೌಢಶಾಲಾ ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಶಿಕ್ಷಣದ ಮೊದಲ ಪ್ರಮುಖ ಹಂತವಾಗಿದೆ. ಈ ವೇಳೆ ಪಬ್ಲಿಕ್‌ ಪರೀಕ್ಷೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಆಯೋಜನೆ ಮಾಡಿ ಪಾಠ, ಪ್ರವಚನ ಮಾಡಲಾಗುತ್ತದೆ. ಆದರೆ, ಇದನ್ನು ದುರುಪಯೋಗ ಮಾಡಿಕೊಳ್ಳುವ ಕೆಲವು ಶಿಕ್ಷಕರು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಾರೆ. ಇನ್ನು ಕೆಲವರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಾರೆ. ಆದ್ದರಿಂದ ಪೋಷಕರು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ.

Government was suspends head teacher for Sexually harassing high school girls sat

Latest Videos
Follow Us:
Download App:
  • android
  • ios