Asianet Suvarna News Asianet Suvarna News

Ramanagara: ಸರ್ಕಾರಿ ಶಾಲೆಗಳಲ್ಲಿ ಪಾಠ ಮಾಡುವುದಕ್ಕೆ ಶಿಕ್ಷಕರೇ ಇಲ್ಲ: ಜಿಲ್ಲೆಯ 40 ಶಾಲೆಗಳಲ್ಲಿ ಶಿಕ್ಷಕರ ಕೊರತೆ

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೆ ಹೆಚ್ಚು. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರಕಾರ ಎಲ್ಲವನ್ನು ಉಚಿತವಾಗಿ ನೀಡುತ್ತದೆ. ಆದ್ರೆ ಎಲ್ಲವನ್ನ ಕೊಟ್ಟು ಪಾಠ ಪ್ರವಚನ ಮಾಡುವ ಶಿಕ್ಷಕರನ್ನ ಮಾತ್ರ ನೀಡುತ್ತಿಲ್ಲ. ಇದ್ರಿಂದ ವಿದ್ಯಾರ್ಥಿಗಳು ಹಿಂದೆ ಬಿದ್ದಿದ್ದಾರೆ.

govt schools face acute shortage of teachers in ramanagara gvd
Author
Bangalore, First Published Jun 2, 2022, 12:15 AM IST

ವರದಿ: ಜಗದೀಶ್, ಏಷ್ಯಾನೆಟ್ ಸುವರ್ಣನ್ಯೂಸ್, ರಾಮನಗರ

ರಾಮನಗರ (ಜೂ.02): ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೆ ಹೆಚ್ಚು. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರಕಾರ ಎಲ್ಲವನ್ನು ಉಚಿತವಾಗಿ ನೀಡುತ್ತದೆ. ಆದ್ರೆ ಎಲ್ಲವನ್ನ ಕೊಟ್ಟು ಪಾಠ ಪ್ರವಚನ ಮಾಡುವ ಶಿಕ್ಷಕರನ್ನ ಮಾತ್ರ ನೀಡುತ್ತಿಲ್ಲ. ಇದ್ರಿಂದ ವಿದ್ಯಾರ್ಥಿಗಳು ಹಿಂದೆ ಬಿದ್ದಿದ್ದಾರೆ. ಹೌದು!‌ ರಾಮನಗರ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಜಿಲ್ಲೆಯ ಹಲವು ಶಾಲೆಗಳಲ್ಲಿ ಶಿಕ್ಷಕರೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಒಟ್ಟು 1718 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿದ್ದು 142143   ವಿದ್ಯಾರ್ಥಿಗಳು ಇದ್ದಾರೆ. 

ಕನಕಪುರ ತಾಲೂಕುವೊಂದರಲ್ಲೆ 40 ಶಾಲೆಗಳಲ್ಲಿ ಒಬ್ಬೆ ಒಬ್ಬ ಶಿಕ್ಷಕನು ಇಲ್ಲಾ ಇಂತಹ ಶಾಲೆಗಳಿಗೆ ಬೇರೆ ಶಾಲೆಯ ಶಿಕ್ಷಕಕರನ್ನ ನಿಯೋಜನೆ ಮಾಡಲಾಗಿದೆ. ಇನ್ನೂ ಜಿಲ್ಲೆಯಲ್ಲಿ 686 ಪ್ರಾಥಮಿಕ ಶಾಲೆ ಶಿಕ್ಷಕರ ಹಾಗೂ ಪ್ರೌಢಶಾಲೆಯಲ್ಲಿ 217 ಶಿಕ್ಷಕರ ಕೊರತೆ ಇದೆ. ಶಿಕ್ಷಕರ ಕೊರತೆ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷರನ್ನ ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲೆಯ ವಿಭಾಗದಲ್ಲಿ ಭಾಷಾವಾರು ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಈ ವರ್ಷದ ಪಠ್ಯ ಪುಸ್ತಕಗಳನ್ನ ವಿತರಣೆ ಮಾಡಲಾಗಿದೆ‌. 

Ramanagara: ಸರ್ಕಾರದ ನಿರ್ಲಕ್ಷದಿಂದ ಕುಂಬಾರಿಕೆ ಸಂಕೀರ್ಣ ಬಂದ್!

ಸಮವಸ್ತ್ರಗಳು ಬರಬೇಕಿದ್ದು ಬಂದ ತಕ್ಷಣ ವಿತರಣೆ ಮಾಡಲಾಗುತ್ತದೆ. ಎಲ್ಲಾ ಶಾಲೆಗಳಲ್ಲಿ ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಹಾಲು ಹಾಗೂ ಮಧ್ಯಾಹ್ನ ಬಿಸಿಯೂಟವನ್ನ ಅಚ್ಚುಕಟ್ಟಾಗಿ ನೀಡಲಾಗುತ್ತಿದೆ. ಅಂದಹಾಗೆ ಕಳೆದ ಎರಡು ವರ್ಷಗಳಿಂದ ಕೊರೋನಾದಿಂದ ಮಧ್ಯಮ ವರ್ಗದ ಜನರಿಗೆ ಸಾಕಷ್ಟು ಆರ್ಥಿಕ ಪರಿಸ್ಥಿತಿಯನ್ನು ಅನುಭವಿಸುತ್ತಿರುವ  ಜನರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಯ ಕಡೆಗೆ ಮುಖ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. 

Ramanagaraದಲ್ಲಿ ಬಾಣಂತಿ-ಋತುಮತಿಯರಿಗೆ 30ದಿನ ಊರ ಹೊರಗೆ ವಾಸ್ತವ್ಯ!

ಜೊತೆಗೆ ಸರ್ಕಾರಿ ಶಾಲೆಗಳಿಗೆ ಅತಿಥಿ ಶಿಕ್ಷಕರು ನೇಮಕ ಮಾಡಿಕೊಳ್ಳಲು ಮುಂದಾಗಿದೆ ಆದರೆ ಅವರು ಯಾವ ರೀತಿ ಪಾಠ ಮಾಡುತ್ತಾರೆ ಎಂಬುದು ಪೋಷಕರಿಗೆ ಚಿಂತೆಯಾಗಿದೆ. ಇತ್ತ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಓದಿಸಲು ಹಣವಿಲ್ಲ, ಸರ್ಕಾರಿ ಶಾಲೆಗಳಲ್ಲಿ ಪಾಠ ಮಾಡುವುದಕ್ಕೆ ಶಿಕ್ಷಕರೇ ಇಲ್ಲ ಇಂತಹ ಪರಿಸ್ಥಿತಿಯಲ್ಲಿ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಟ್ಟಾರೆ ಇತ್ತೀಚಿನ ದಿನಗಳಲ್ಲಿ ಸರಕಾರಿ ಶಾಲೆ ಅಂದ್ರೆ ದೂರ ಹೋಗುವವರ ಸಂಖ್ಯೆ ಹೆಚ್ಚಿದೆ. ಇಂತಹ ಸನ್ನಿವೇಶದಲ್ಲಿ ಶಿಕ್ಷಕರ ಕೊರತೆ ಅಂದ್ರೆ ಯಾರ್ ತಾನೆ ತಮ್ಮ ಮಕ್ಕಳನ್ನ ಸರಕಾರಿ ಶಾಲೆಗೆ ಸೇರಿಸುತ್ತಾರೆ ನೀವೆ ಹೇಳಿ.

Follow Us:
Download App:
  • android
  • ios