Asianet Suvarna News Asianet Suvarna News

Rain Effect ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳ, ಕೆರೆ,ಕಟ್ಟೆಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Heavy rain Effect Schools Holiday In Chamarajanagar And Mandya On August 5th rbj
Author
Bengaluru, First Published Aug 4, 2022, 11:06 PM IST

ಚಾಮರಾಜನಗರ/ಮಂಡ್ಯ,(ಆಗಸ್ಟ್ 04): ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇನ್ನು ಜನಜೀವನ ಅಸ್ತವ್ಯಸ್ಥವಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ.

ಆದರೂ ಮಳೆಕಾಟ ಇನ್ನೂ ತ್ಪಪಿಲ್ಲ. ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ರೆಡ್ ಅರ್ಲಟ್‌

ಚಾಮರಾಜನಗರದಲ್ಲಿ 2 ದಿನ ರಜೆ
ಜಿಲ್ಲಾದ್ಯಂತ ಭಾರಿ ಮಳೆ ಹಿನ್ನೆಲೆ ಎರಡು ದಿನ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್ 5 ಮತ್ತು 6ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಗೋಪಿನಾಥಂ-ಹೊಗನೇಕಲ್ ರಸ್ತೆ ಜಲಾವೃತ: ಚಾಮರಾಜನಗರ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಮಳೆಯ ನೀರಿನಿಂದ ರಸ್ತೆಗಳು ಜಲಾವೃತಗೊಂಡಿವೆ. ಹನೂರು ತಾಲೂಕಿನ ಗೋಪಿನಾಥಂ-ಹೊಗನೇಕಲ್ ರಸ್ತೆ ಜಲಾವೃತವಾಗಿದ್ದು, ವಾಹನ ಸಂಚಾರ ನಡೆಸುವುದು ಕಷ್ಟವಾಗಿದೆ.

ಸಕ್ಕರೆ ನಾಡಿಲ್ಲೂ ಶಾಲೆಗಳಿಗೆ ರಜೆ 
ಹೌದು,,ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲೂ ಸಹ ಭೀಕರ ಮಳೆಯಾಗುತ್ತಿರುವುದರಿಂದ  ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲೆಗಳಿಗೆ ಆ.5ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಎಲ್​​ಕೆಜಿ, ಯುಕೆಜಿ ಸೇರಿದಂತೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಸಕ್ಕರೆ ನಾಡಿನಲ್ಲಿ ಪ್ರವಾಹ: ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಬೆಂಗಳೂರು-ಮೈಸೂರು ನಡುವಿನ ಹತ್ತು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. 

ಮುಂದಿನ ಐದು ದಿನ ರಾಜ್ಯದಲ್ಲಿ ಮಳೆ
 ಮುಂದಿನ 5 ದಿನಗಳ ವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಇದೆ. ಈ ಬಗ್ಗೆ ಹವಾಮಾನ ಇಲಾಖೆಯಿಂದ  ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ  ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು(ಆ.04) ಆರೆಂಜ್ ಅಲರ್ಟ್, ನಾಳೆ(ಆ,05) ರೆಡ್ ಅಲರ್ಟ್, ಆ.6 ರಂದು ಆರೆಂಜ್ ಅಲರ್ಟ್, ಅ.7 ಮತ್ತು 8 ರಂದು ಯಲ್ಲೋ ಅಲರ್ಟ್ ಜಾರಿಯಾಗಿದೆ.

ಇನ್ನು ಇಂದು(ಗುರುವಾರ) ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ ವಿಜಯಪುರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿಲಾಗಿದೆ. ನಾಳೆಯೂ (ಶುಕ್ರವಾರ) ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಜಾರಿಯಾಗಿದ್ದರೆ, ಗುರುವಾರ ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಜಾರಿಯಾಗಿದೆ.

Follow Us:
Download App:
  • android
  • ios