Asianet Suvarna News Asianet Suvarna News

KSLUಯಲ್ಲಿನ ಐದು ವರ್ಷದ LLB ಕೋರ್ಸ್‌ನ ಪರೀಕ್ಷಾ ವರದಿ ಕೇಳಿದ ಹೈಕೋರ್ಟ್

  • ಐದು ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ಪರೀಕ್ಷೆ ನಡೆಸುವಂತೆ ಕೆಎಸ್‌ಎಲ್‌ಯು ಸುತ್ತೋಲೆ
  • ಕೆಎಸ್‌ಎಲ್‌ಯು ಸುತ್ತೋಲೆ ರದ್ದು ಕೋರಿ ವಿದ್ಯಾರ್ಥಿಗಳ ರಿಟ್‌ ಅರ್ಜಿ
  • ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಉಚ್ಚ ನ್ಯಾಯಾಲಯ
High Court of Karnataka  questions Karnataka State Law University  about 5-year LLB examination
Author
Bengaluru, First Published Dec 19, 2021, 6:01 PM IST
  • Facebook
  • Twitter
  • Whatsapp

ಬೆಂಗಳೂರು (ಡಿ.19): ಐದು ವರ್ಷದ ಎಲ್‌ಎಲ್‌ಬಿ ಕೋರ್ಸ್‌ನ ಎರಡು ಮತ್ತು ನಾಲ್ಕನೇ ಸೆಮಿಸ್ಟರ್‌ (4th semister) ಆಫ್‌ಲೈನ್‌ ಪರೀಕ್ಷೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂಬುದರ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (Karnataka State Law University -KSLU) ರಾಜ್ಯ ಉಚ್ಚ ನ್ಯಾಯಾಲಯ (High Court of Karnataka) ನಿರ್ದೇಶನ ನೀಡಿದೆ. 

ಐದು ವರ್ಷದ ಎಲ್‌ಎಲ್‌ಬಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ಪರೀಕ್ಷೆ (Offline exam) ನಡೆಸುವ ಸಂಬಂಧ ಕೆಎಸ್‌ಎಲ್‌ಯು ಡಿಸೆಂಬರ್‌ 1ರಂದು ಹೊರಡಿಸಿದ್ದ ಸುತ್ತೋಲೆ ವಜಾ ಮಾಡುವಂತೆ ಕೋರಿ ಕೋಲಾರದ ಕೆ.ಪಿ. ಪ್ರಭುದೇವ್ ಸೇರಿದಂತೆ ಒಟ್ಟು ಒಂಬತ್ತು ಮಂದಿ ವಿದ್ಯಾರ್ಥಿಗಳು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ವಿಶ್ವವಿದ್ಯಾಲಯಕ್ಕೆ (University) ಸೂಚನೆ ಹೊರಡಿಸಿದೆ.

Engineering Admission: ಡಿ.31ರವರೆಗೂ ಇಂಜಿನಿಯರಿಂಗ್ ಪ್ರವೇಶಾತಿಗೆ ಅನುಮತಿ ಕೊಟ್ಟ ಸುಪ್ರೀಂ

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಎಂ.ಪಿ.ಶ್ರೀಕಾಂತ್, 'ಮೂರು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿಶ್ವವಿದ್ಯಾಲಯ ಹೊರಡಿಸಿದ ಸುತ್ತೋಲೆಯನ್ನು ಇದೇ 14ರಂದು ಧಾರವಾಡ ಹೈಕೋರ್ಟ್ ಪೀಠ ರದ್ದುಪಡಿಸಿದೆ. ಇದೇ ಮಾದರಿಯಲ್ಲಿ ಐದು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನೂ ರದ್ದುಪಡಿಸಬೇಕು.

KPSC RE-EXAM: ಕೆಪಿಎಸ್‌ಸಿ ಮರು ಪರೀಕ್ಷೆ ದೃಢ, 200 ಅಭ್ಯರ್ಥಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆಯೇ ಇಲಾಖೆ?

ಐದು ಮತ್ತು ಮೂರು ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳು ನಡುವೆ ತಾರತಮ್ಯ ಮಾಡಬಾರದು' ಎಂದು ನ್ಯಾಯಪೀಠದ ಮುಂದೆ  ಮನವಿ ಮಾಡಿಕೊಂಡರು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಧಾರವಾಡ ಪೀಠವು ಅಧಿಸೂಚನೆಯನ್ನು ವಜಾ ಮಾಡಿದೆ. ಐದು ಮತ್ತು ಮೂರು ವರ್ಷದ ಎಲ್‌ಎಲ್‌ಬಿ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪೀಠವು ಯಾವುದೇ ವ್ಯತ್ಯಾಸ ಗುರುತಿಸಿಲ್ಲ. ಇದು ಎಲ್ಲರಿಗೂ ಅನ್ವಯಿಸುತ್ತದೆ`

UGC NET 2021: ಯುಜಿಸಿ-ನೆಟ್ 2ನೇ ಹಂತದ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಇದಕ್ಕೆ ಕೆಎಸ್‌ಎಲ್‌ಯು (KSLU) ವಿನ ಪರ ವಕೀಲ ವಿ.ಶೇಷು, 'ಈಗಾಗಲೇ ಇದೇ 15ರಿಂದ ಎರಡು (2nd semister) ಮತ್ತು ನಾಲ್ಕನೇ ಸೆಮಿಸ್ಟರ್ (4t semister) ಪರೀಕ್ಷೆ ಆರಂಭವಾಗಿದ್ದು, ಶೇ 90ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆ ವಿಚಾರದಲ್ಲಿ ನ್ಯಾಯಾಲಯ (court) ಮಧ್ಯಪ್ರವೇಶ ಮಾಡಬಾರದು. ಐದು ವರ್ಷದ ಎಲ್‌ಎಲ್‌ಬಿ (LLB) ವಿದ್ಯಾರ್ಥಿಗಳು ಸಲ್ಲಿಸಿರುವ ತಿದ್ದುಪಡಿ ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿಕೊಂಡರು. ಇತ್ತಂಡಗಳ ವಾದ ಆಲಿಸಿದ ನ್ಯಾಯಲಯ ವಿಚಾರಣೆಯನ್ನು ಡಿಸೆಂಬರ್ 20 ಕ್ಕೆ ಮುಂದೂಡಿದೆ.

IGNOU Admission 2022: ಇಗ್ನೋ ಜನವರಿ ಸೆಶನ್ ಪ್ರವೇಶಾತಿಗೆ ಡಿ.31ರವರೆಗೆ ಅವಧಿ ವಿಸ್ತರಣೆ

ಹೀಗಾಗಿ ಮುಂದಿನ ವಿಚಾರಣೆ ಸೋಮವಾರವಾದ ನಾಳೆ ನಡೆಯಲಿದೆ. ಅಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಎರಡು ಸೆಮಿಸ್ಟರ್‌ ಮತ್ತು ನಾಲ್ಕನೇ ಸೆಮಿಸ್ಟರ್‌ ಆಫ್‌ಲೈನ್‌ ಪರೀಕ್ಷೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂಬುದರ ಕುರಿತು  ಸಂಪೂರ್ಣ ಮಾಹಿತಿ ನೀಡಬೇಕಿದೆ. ಪರಿಶೀಲನೆ ನಡೆಸಿದ ಬಳಿಕ ಕರ್ನಾಟಕ ಹೈಕೋರ್ಟ್ನ ಪೀಠ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. 

IISc Suicide Prevention: ಆತ್ಮಹತ್ಯೆ ತಡೆಗೆ ಸೀಲಿಂಗ್​ ಫ್ಯಾನ್​ ತೆರವುಗೊಳಿಸುತ್ತಿದೆ ಭಾರತೀಯ

Follow Us:
Download App:
  • android
  • ios