1 ವರ್ಷ ಅನಧಿಕೃತ ಗೈರಾದ ನೌಕರಗೆ ಬಡ್ಡಿ ಸಹಿತ ವೇತನಕ್ಕೆ ಹೈಕೋರ್ಟ್ ಆದೇಶ!

ಶಾಲೆಯೊಂದರ ದ್ವಿತೀಯ ದರ್ಜೆ ನೌಕರ (ಎಸ್‌ಡಿಎ) ಒಂದು ವರ್ಷ ಕಾಲ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದರೂ ಸಹ ಆತನ ವಿರುದ್ಧ ಯಾವುದೇ ರೀತಿ ಶಿಸ್ತುಕ್ರಮ ಕೈಗೊಳ್ಳದೇ ಇರುವುದನ್ನು ಪರಿಣಿಸಿರುವ ಹೈಕೋರ್ಟ್, ನೌಕರ ಗೈರಾಗಿದ್ದ ಅವಧಿಗೆ ವೇತನ ಪಾವತಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಆದೇಶಿಸಿದೆ.

High Court order to pay salary with interest to employee absent for one year at bengaluru rav

ಬೆಂಗಳೂರು (ಮಾ.29) : ಶಾಲೆಯೊಂದರ ದ್ವಿತೀಯ ದರ್ಜೆ ನೌಕರ (ಎಸ್‌ಡಿಎ) ಒಂದು ವರ್ಷ ಕಾಲ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದರೂ ಸಹ ಆತನ ವಿರುದ್ಧ ಯಾವುದೇ ರೀತಿ ಶಿಸ್ತುಕ್ರಮ ಕೈಗೊಳ್ಳದೇ ಇರುವುದನ್ನು ಪರಿಣಿಸಿರುವ ಹೈಕೋರ್ಟ್, ನೌಕರ ಗೈರಾಗಿದ್ದ ಅವಧಿಗೆ ವೇತನ ಪಾವತಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಆದೇಶಿಸಿದೆ.

ಎಸ್‌ಡಿಎ ಉದ್ಯೊಗಿ ಎನ್‌.ಎಸ್‌. ಕಾಂತರಾಜು(NS Kantaraju) ಅನಧಿಕೃತವಾಗಿ ರಜೆ ಹಾಕಿದ್ದ ಅವಧಿಗೆ ವೇತನ ಪಾವತಿಸಲು ಹೈಕೋರ್ಟ್(Karnataka Highcourt) ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ನಗರದ ದೊಡ್ಡಬೊಮ್ಮಸಂದ್ರದ ಶ್ರೀರಾಘವೇಂದ್ರ ಆಶ್ರಮ ಶಾಲೆ(Shri raghavendra ashrama school)ಯ ಮುಖ್ಯೋಪಾಧ್ಯಾಯರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ನ್ಯಾಯಮೂರ್ತಿ ಅಲೋಕ್‌ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

5, 8ನೇ ಕ್ಲಾಸ್‌ ಪರೀಕ್ಷೆ ಮುಂದೂಡಿಕೆ: ಮತ್ತೊಮ್ಮೆ ಹೈಕೋರ್ಟ್‌ ನಕಾರ

ಪ್ರಕರಣದ ವಿವರ:

ಬೆಂಗಳೂರಿನ ಭಗಿನಿ ನಿವೇದಿತಾ ಹೈಸ್ಕೂಲ್‌(Bhagini Nivedita High School)ನಲ್ಲಿ ಎಸ್‌ಡಿಎ ನೌಕರನಾಗಿದ್ದ ಕಾಂತರಾಜು ಅವರನ್ನು ಶಿಕ್ಷಣ ಇಲಾಖೆ(Education depertment)ಯು 2009ರಲ್ಲಿ ಶ್ರೀ ರಾಘವೇಂದ್ರ ಆಶ್ರಮ ಶಾಲೆಗೆ ವರ್ಗಾಯಿಸಿತ್ತು. ಆ ಶಾಲೆಯಲ್ಲಿ 2009ರ ಫೆ.2ರಂದು ಕರ್ತವ್ಯಕ್ಕೆ ಹಾಜರಾಗಿದ್ದ ಕಾಂತರಾಜು, ನಂತರದ ಒಂದು ವರ್ಷ ಕಾಲ (2009ರ ಫೆ.2ರಿಂದ 2010ರ ಫೆ.15ರವರೆಗೆ) ಗೈರಾಗಿದ್ದ. ಬಳಿಕ ಉದ್ಯೋಗಕ್ಕೆ ಮರಳಿದ್ದ.

2014ರ ಮಾ.14 ಮತ್ತು ಸೆ.30ರಂದು ಬೆಂಗಳೂರು ಉತ್ತರ ತಾಲೂಕಿನ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದ ಕಾಂತರಾಜು, 2009ರ ಫೆ.2ರಿಂದ 2010ರ ಫೆ.15ರವರೆಗೆ ನಾನು ರಜೆಯ ಮೇಲೆ ತೆರಳಿದ್ದೆ. ಆದರೆ, ನಾನು ಅನಧಿಕೃತವಾಗಿ ಹಾಜರಾಗಿದ್ದೇನೆ ಎಂದು ತಿಳಿಸಿ ಶಾಲೆ ನನಗೆ ವೇತನ ನೀಡಿಲ್ಲ. ಆದ್ದರಿಂದ ವೇತನ ಮತ್ತು ಭತ್ಯೆ ಪಾವತಿಸಲು ಆದೇಶಿಸುವಂತೆ ಕೋರಿದ್ದರು. ಈ ಮನವಿ ಪತ್ರವನ್ನು ಪರಿಗಣಿಸದಕ್ಕೆ 2015ರಲ್ಲಿ ಹೈಕೋರ್ಚ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದ.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ, ಕಾಂತರಾಜು ನಿರ್ದಿಷ್ಟಸಮಯದಲ್ಲಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರಾಗಿದ್ದರೆ ರಾಘವೇಂದ್ರ ಆಶ್ರಮದ ಶಾಲಾ ಮುಖ್ಯೋಪಾಧ್ಯಾಯರು ಶಿಸ್ತು ಕ್ರಮ ಜರುಗಿಸಬೇಕಿತ್ತು. ಆದರೆ, ಈವರೆಗೂ ಅದನ್ನು ನಿರ್ವಹಿಸಿಲ್ಲ. ಮುಖ್ಯಪಾಧ್ಯಾಯರು ಕಾಂತರಾಜು ಗೈರಾಗಿದ್ದ ದಿನಗಳ ಸಂಬಂಧ ಕೇವಲ ಎರಡು ತಿಂಗಳಿಗಷ್ಟೇ ಬಿಲ್‌ ನೀಡಿದ್ದಾರೆ. ಉಳಿದ ದಿನಗಳಿಗೆ ಬಿಲ್‌ ಸೃಜನೆ ಮತ್ತು ರಜೆ ಮಂಜೂರಾತಿ ವಿಚಾರದಲ್ಲಿ ಏನು ಮಾಡಬೇಕೆಂದು ಶಿಕ್ಷಣಾಧಿಕಾರಿ ಬಳಿ ಕೇಳಿಲ್ಲ. ಇದರಿಂದ ಮುಖ್ಯೋಪಾಧ್ಯಾಯರ ಕಡೆಯಿಂದ ಲೋಪ ಉಂಟಾಗಿದೆ. ಆದ್ದರಿಂದ ಶೇ.8ರಷ್ಟುಬಡ್ಡಿದರಲ್ಲಿ ಕಾಂತರಾಜುಗೆ ವೇತನ ಪಾವತಿಸುವಂತೆ ಮುಖ್ಯಪಾಧ್ಯಾಯರಿಗೆ 2020ರ ಡಿ.2ರಂದು ಆದೇಶಿಸಿತ್ತು.

ಸರ್ಕಾರಿ ಕೋಟಾದಡಿ ಓದಿ ವೈದ್ಯೆಯಾದ ಅಮೆರಿಕ ಪ್ರಜೆಗೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಇದನ್ನು ಪ್ರಶ್ನಿಸಿ ಮುಖ್ಯೋಪಾಧ್ಯಾಯರು ಮೇಲ್ಮನವಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿರುವ ವಿಭಾಗೀಯ ಪೀಠ, ಕಾಂತರಾಜು ಅನಧಿಕೃತವಾಗಿ ಗೈರಾಗಿದ್ದ ಅವಧಿಗೆ ಶಿಸ್ತುಕ್ರಮ ಜರುಗಿಸಬೇಕಿತ್ತು. ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಗೈರಾಗಿದ್ದಾನೆ ಎಂದು ತೀರ್ಮಾನಿಸಲಾಗದು. ಉದ್ಯೋಗಿಯು ಸೇವೆಯಲ್ಲಿ ಮುಂದುವರಿಯುವವರೆಗೆ, ವೇತನ ಪಡೆಯಲು ಆತ ಅರ್ಹರಾಗಿರುತ್ತಾನೆ. ಆದ್ದರಿಂದ ಕಾಂತರಾಜುಗೆ ವೇತನ ಪಾವತಿಸಬೇಕು ಎಂದು ನಿರ್ದೇಶಿಸಿದೆ.

Latest Videos
Follow Us:
Download App:
  • android
  • ios