Asianet Suvarna News Asianet Suvarna News

ಸಿಬಿಎಸ್‌ಇ ಶಾಲೆಗಳಲ್ಲಿ ಕಲಿಯುವ ಮಕ್ಕಳ ಪೋಷಕರಿಗಿದು ಗುಡ್ ನ್ಯೂಸ್

CBSE ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್. ಇದು ಶುಲ್ಕದ ವಿಚಾರ. ಏನದು ..?

High Court Strict Order On Fee issue to CBSE Schools snr
Author
Bengaluru, First Published Mar 10, 2021, 7:22 AM IST

ಬೆಂಗಳೂರು (ಮಾ.10):  ಪ್ರಸಕ್ತ ಸಾಲಿನ ಬೋಧನಾ ಶುಲ್ಕ ಸಂಗ್ರಹ ವಿಚಾರ ಸಂಬಂಧ ರಾಜ್ಯದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿರುವ ಹೈಕೋರ್ಟ್‌, ಶುಲ್ಕ ಪಾವತಿ ವಿಚಾರವಾಗಿ ವಿದ್ಯಾರ್ಥಿಗಳು ಅಥವಾ ಪೋಷಕರ ವಿರುದ್ಧ ಶಾಲೆಗಳು ಸಹ ಬಲವಂತದ ಕ್ರಮ ಜರುಗಿಸಬಾರದು ಎಂದು ಇದೇ ವೇಳೆ ಸ್ಪಷ್ಟಪಡಿಸಿದೆ.

ಖಾಸಗಿ ಶಾಲೆಗಳು ಪ್ರಸಕ್ತ ಸಾಲಿನಲ್ಲಿ ಶೇ.70ಕ್ಕಿಂತ ಹೆಚ್ಚು ಬೋಧನಾ ಶುಲ್ಕ ಸಂಗ್ರಹಿಸುವಂತಿಲ್ಲ ಎಂದು ತಿಳಿಸಿ 2021ರ ಜ.29ರಂದು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಅಸೋಸಿಯೇಷನ್‌ ಆಫ್‌ ಇಂಡಿಯನ್‌ ಸ್ಕೂಲ್‌ ಹೈಕೋರ್ಟ್‌ಗೆ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರ ನ್ಯಾಯಪೀಠ, ಸರ್ಕಾರಕ್ಕೆ ಈ ನಿರ್ದೇಶನ ನೀಡಿತು. ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸದಲಗಾದಲ್ಲಿ ಹೊಸ ಕೇಂದ್ರೀಯ ವಿದ್ಯಾಲಯ ...

ಕರ್ನಾಟಕ ಶಿಕ್ಷಣ ಕಾಯ್ದೆ-1983ಕ್ಕೆ ರಾಜ್ಯ ಸರ್ಕಾರ 2017ರಲ್ಲಿ ತಿದ್ದುಪಡಿ ತಂದು ಸೆಕ್ಷನ್‌ 124(ಎ) ಸೇರಿಸಿದೆ. ಈ ತಿದ್ದುಪಡಿ ಪ್ರಶ್ನಿಸಿ 2019ರಲ್ಲಿ ಕೆಲ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳು ಹೈಕೋರ್ಟ್‌ಗೆ ತಕರಾರು ಸಲ್ಲಿಸಿದ್ದವು. ಅದರ ವಿಚಾರಣೆ ವೇಳೆ ಅರ್ಜಿದಾರ ಶಿಕ್ಷಣ ಸಂಸ್ಥೆಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಸರ್ಕಾರವು ಹೈಕೋರ್ಟ್‌ಗೆ ಭರವಸೆ ನೀಡಿತ್ತು. ಇದೀಗ ಶೇ.70ಕ್ಕೂ ಅಧಿಕ ಬೋಧನಾ ಶುಲ್ಕ ಸಂಗ್ರಹಿಸಬಾರದು ಎಂದು ಐಸಿಎಸ್‌ಇ ಮತ್ತು ಸಿಬಿಎಸ್‌ಇ ಸೇರಿ ಎಲ್ಲ ಖಾಸಗಿ ಶಾಲೆಗಳಿಗೆ ಸೂಚಿಸಿ 2021ರ ಜ.29ರಂದು ಸರ್ಕಾರ ಆದೇಶಿಸಿದೆ. ಆದ್ದರಿಂದ ಈ ವಿಚಾರವಾಗಿ ಸರ್ಕಾರ ತನ್ನ ವಾದ ಮಂಡಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ಸೂಚಿಸಿದೆ.

ಪ್ರಸಕ್ತ ಸಾಲಿನ ಬೋಧನಾ ಶುಲ್ಕವನ್ನು ಶೇ.30ರಷ್ಟುಕಡಿತಗೊಳಿಸಿ ಸರ್ಕಾರ 2021ರ ಜ.29ರಂದು ಆದೇಶ ಹೊರಡಿಸಿದೆ. ಅದರಂತೆ ಶೇ.70ರಷ್ಟುಬೋಧನಾ ಶುಲ್ಕ ಬಿಟ್ಟು ಇತರೆ ಯಾವುದೇ ಶುಲ್ಕ ಪಡೆಯುವಂತಿಲ್ಲ ಎಂದು ಸಿಬಿಎಸ್‌ಇ ಮತ್ತು ಐಸಿಎಸ್‌ಇ ಸೇರಿ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ಸೂಚಿಸಿದೆ. ಆದರೆ, ಕೋವಿಡ್‌-19 ಹಿನ್ನೆಲೆಯಲ್ಲಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳು ಸಾಕಷ್ಟುನಷ್ಟಅನುಭವಿಸಿವೆ. ಈ ಸಂದರ್ಭದಲ್ಲಿ ಬೋಧನಾ ಶುಲ್ಕವನ್ನು ಶೇ.30ರಷ್ಟುಕಡಿತಗೊಳಿಸಿದ ಪರಿಣಾಮ ಶುಲ್ಕ ಸಂಗ್ರಹ ಪ್ರಮಾಣ ಕಡಿಮೆಯಾಗಲಿದ್ದು, ಸಿಬ್ಬಂದಿಗೆ ವೇತನ ಪಾವತಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸರ್ಕಾರ ಜ.29ರಂದು ಹೊರಡಿಸಿದ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Follow Us:
Download App:
  • android
  • ios