ಕುಸಿದ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಹೈಸ್ಕೂಲ್ ಶಿಕ್ಷಕರ ರಜೆ 15 ದಿನ ಕಟ್..!
ಸೇವಾ ನಿಯಮಗಳ ಪ್ರಕಾರ ಶಿಕ್ಷಕರಿಗೆ ಬೇಸಿಗೆ ರಜೆ ನೀಡಿರುವ ಸರ್ಕಾರವೇ ಈಗ ಬುಧವಾರದಿಂದಲೇ ವಿಶೇಷ ತರಗತಿ ನಡೆಸಲು ಶಾಲೆಗೆ ಬನ್ನಿ ಎಂದು ಆದೇಶಿಸಿರುವುದು ಯಾವ ನ್ಯಾಯ ಎಂದು ಶಿಕ್ಷಕ ವರ್ಗ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು(ಮೇ.15): ಜೂನ್-ಜುಲೈನಲ್ಲಿ ನಡೆವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ. 15ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತರಾತುರಿಯಲ್ಲಿ ನಿರ್ದೇಶನ ನೀಡಿದೆ.
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ 232 ಭಾರೀ ಕುಸಿದ ಕಾರಣ ಸರ್ಕಾರ ಈ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಆದರೆ, ಮೇ 29ರವರೆಗೆ ಬೇಸಿಗೆ ರಜೆ ಇದ್ದರೂ ಶಾಲೆಗೆ ಬನ್ನಿ ಎಂದಿರುವುದಕ್ಕೆ ಶಿಕ್ಷಕ ವರ್ಗದಿಂದ ತೀವ್ರ ವಿರೋಧ ಮತ್ತು ಆಕ್ರೋಶ ವ್ಯಕ್ತವಾಗತೊಡಗಿದೆ. ಕೆಲ ಜಿಲ್ಲೆಗಳಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಡಿಡಿಪಿಐಗಳಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ಶೇ. 68.78ರಷ್ಟು ಫಲಿತಾಂಶ
ಮಂಡಳಿ ಪರೀಕ್ಷಾ ನಿರ್ದೇಶಕರು ಮಂಗಳವಾರ ವಿಡಿಯೋ ಕಾನ್ಸರೆನ್ಸ್ ಮೂಲಕ ನೀಡಿದ ನಿರ್ದೇಶನದ ಆಧಾರದಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪನಿರ್ದೇ ಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ- 2 ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಬುಧವಾರದಿಂದಲೇ ವಿಶೇಷ ತರಗತಿಗಳನ್ನು ಆರಂಭಿಸುವಂತೆ ಮುಖ್ಯೋಪಾಧ್ಯಾಯರುಗಳಿಗೆ ಮಂಗಳವಾರ ಸಂಜೆಯೇ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆಯಾ ವಿಷಯದ ಶಿಕ್ಷಕ ರುಗಳೇ ಶಾಲೆಗಳಿಗೆ ಹಾಜರಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ 1ರಲ್ಲಿ ಫೇಲಾಗಿರುವ, ಫಲಿತಾಂತ ಇನ್ನಷ್ಟು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಬೇ ಕೆಂದು ಸೂಚಿಸಲಾಗಿದೆ. ಈ ಸಂಬಂಧ ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲಾ ಡಿಡಿಪಿಐಗಳು ಹೊರಡಿಸಿರುವ ಸುತ್ತೋ ಲೆಗಳು 'ಕನ್ನಡಪ್ರಭ'ಕ್ಕೆ ಲಭ್ಯವಾಗಿವೆ.
ಮುಂದಿನ ವರ್ಷದಿಂದ ಇಲ್ಲಿ 10ನೇ ಕ್ಲಾಸ್ ಪಾಸಾಗೋಕೆ ಕನಿಷ್ಠ ಶೇ. 40 ಮಾರ್ಕ್ಸ್ ಗಳಿಸೋದು ಕಂಪಲ್ಸರಿ
ಅಲ್ಲದೆ, ಶಾಲೆಗಳಲ್ಲಿ ವಿಶೇಷ ತರಗತಿಗ ಳನ್ನು ಆರಂಭಿಸಿರುವುದನ್ನು ಪರಿಶೀಲಿಸಲು ಪ್ರತಿ ಜಿಲ್ಲಾ ಹಂತದಲ್ಲಿ ವಿದ್ಯಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಬೇಕು. ಪ್ರತಿ ಶಾಲೆಗೆ ಈ ತಂಡ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕೆಂದು ಸೂಚಿಸಲಾಗಿದೆ.
ಶಿಕ್ಷಕರ ಆಕ್ರೋಶ
ಸೇವಾ ನಿಯಮಗಳ ಪ್ರಕಾರ ಶಿಕ್ಷಕರಿಗೆ ಬೇಸಿಗೆ ರಜೆ ನೀಡಿರುವ ಸರ್ಕಾರವೇ ಈಗ ಬುಧವಾರದಿಂದಲೇ ವಿಶೇಷ ತರಗತಿ ನಡೆಸಲು ಶಾಲೆಗೆ ಬನ್ನಿ ಎಂದು ಆದೇಶಿಸಿರುವುದು ಯಾವ ನ್ಯಾಯ ಎಂದು ಶಿಕ್ಷಕ ವರ್ಗ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದೆ.