ಹಿಜಾಬ್‌ ವಿವಾದ, ಯಾವುದೇ ವಿದ್ಯಾರ್ಥಿಗಳನ್ನ ಸಸ್ಪೆಂಡ್ ಮಾಡಿಲ್ಲ, ಹೆದರಿಸಲು ಹೇಳಿದ್ದಷ್ಟೇ

* ಹಿಜಾಬ್‌ಗಾಗಿ ಪ್ರತಿಭಟನೆ ಮಾಡುತ್ತಿದ್ದ  58 ವಿದ್ಯಾರ್ಥಿನಿಯರು ಸಸ್ಪೆಂಡ್‌ ಸುದ್ದಿ
*  ಯಾವುದೇ ವಿದ್ಯಾರ್ಥಿಗಳನ್ನ ಸಸ್ಪೆಂಡ್ ಮಾಡಿಲ್ಲ
* ಸ್ಪಷ್ಟನೆ ಕೊಟ್ಟ ಕಾಲೇಜು ಹಾಗೂ ಜಿಲ್ಲಾಧಿಕಾರಿ

 

hijab Row 58 students not suspended Says shivamogga DC And College rbj

ಶಿವಮೊಗ್ಗ, (ಫೆ.19): ಹಿಜಾಬ್‌ಗೆ (Hijab Row) ಅವಕಾಶ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಸಸ್ಪೆಂಡ್ ಆಗಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ (Shivamogga DC) ಸೆಲ್ವಮಣಿ ಆರ್  ಸ್ಪಷ್ಟಪಡಿಸಿದ್ದಾರೆ.

ನಿರಂತರ ಪ್ರತಿಭಟನೆ ನಡೆಸುತ್ತಿದ್ದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್ ಶಾಲೆಯ 58 ವಿದ್ಯಾರ್ಥಿಗಳ ಅಮಾನತು ಆಗಿದ್ದಾರೇ ಎಂದು ವರದಿಯಾಗಿತ್ತು. ಈ ಬಗ್ಗೆ ಸ್ವತಃ ಪ್ರಿನ್ಸಿಪಾಲ್‌ ವಿದ್ಯಾರ್ಥಿಗಳ ಮುಂದೆಯೇ ಸಸ್ಪೆಂಡ್ ಮಾಡಿದ್ದೇವೆ ಎನ್ನುವ ವಿಡಿಯೋ ಸಹ ವೈರಲ್ ಆಗುತ್ತಿದೆ.

Hijab Protest: ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್‌, 58 ಮಂದಿ ಸಸ್ಪೆಂಡ್‌

ಕೋರ್ಟ್‌ ಆದೇಶವನ್ನು ಉಲ್ಲಂಘಟನೆ ಮಾಡಿದ್ದೀರಿ ಆದ್ದರಿಂದ ನಿಮ್ಮನ್ನು ತಾತ್ಕಾಲಿಕವಾಗಿ ಕಾಲೇಜಿನಿಂದ ಸಸ್ಪೆಂಡ್ ಮಾಡಿದ್ದೇವೆ. ಹಾಗಾಗಿ ನೀವು ಯಾರು ನಮ್ಮ ಕಾಲೇಜಿನ ಮುಂದೆ ಬರುವಂತಿಲ್ಲ ಎಂದು ಪ್ರಿನ್ಸಿಪಾಲ್‌ ವಿಡಿಯೋನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಶಾಲೆಯ ಪ್ರಾಂಶುಪಾಲರ ವಿಚಾರಿಸಿದರೆ ನಾವು ಯಾವುದೇ ವಿದ್ಯಾರ್ಥಿಗಳನ್ನು ಅಮಾನತು ಮಾಡಿಲ್ಲ. ವಿದ್ಯಾರ್ಥಿಗಳಿಗೆ ಹೆದರಿಸಲು ಈ ರೀತಿ ಹೇಳಿದ್ದೇವು ಅಷ್ಟೇ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಮಾನತು ವಿಚಾರದಿಂದ ಅಧಿಕಾರಿಗಳಲ್ಲೇ ಗೊಂದಲ ಉಂಟಾಗಿದ್ದು, ತಪ್ಪು ಮಾಹಿತಿ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.

ಹಿಜಬ್ ಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಭಟನೆ, ಘೋಷಣೆ ಕೂಗುತ್ತಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಟನೆ ನಡೆಸದೇ ತರಗತಿಗೆ ಹಾಜರಾಗುವಂತೆ ಶಿಕ್ಷಕರು ಮನವಿ ಮಾಡಿದ್ದರು. ಶಿಕ್ಷಕರ ಮಾತು ಧಿಕ್ಕರಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಮುಂದುವರಿಸಿದ್ದರು.

ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಸೋಮವಾರದಿಂದಲೂ ಕಾಲೇಜು ವಿಭಾಗದ ವಿದ್ಯಾರ್ಥಿನಿಯರು ಹಿಜಾಬ್‌ ತೆಗೆಯದೇ ತಮ್ಮನ್ನು ಒಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ನಿತ್ಯವೂ ಕಾಲೇಜಿನ ಆವರಣದಲ್ಲಿಯೇ ಈ ರೀತಿ ಪ್ರತಿಭಟನೆ(Protest) ನಡೆಸಿ, ಘೋಷಣೆ ಕೂಗುವುದರಿಂದ ನಮಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಇತರ ವಿದ್ಯಾರ್ಥಿಗಳು ದೂರಿದ್ದರು. 

ಸಿಎಂಗೆ ಪತ್ರ ಬರೆದ ಸುರೇಶ್ ಕುಮಾರ್‌
ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ (S Sureshkumar) ಹೇಳಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಶಿಕ್ಷಣ‌ ಮಂತ್ರಿಗಳಾದ ಶ್ರೀ ಬಿ ಸಿ. ನಾಗೇಶ್ (BC Nagesh) ಅವರುಗಳಿಗೆ  ಸುದೀರ್ಘ ಪತ್ರ ಬರೆದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಲೆ ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ‌ ಆರೋಪ ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ‌ (Education) ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ. 

ಶಿಕ್ಷಣ ಇಲಾಖೆ (Education Department) ಹೊಸ ನಾಯಕತ್ವದೊಂದಿಗೆ ಕೆಲಸ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರದ ಬಗ್ಗೆ ಹೆಮ್ಮೆ ಪಡಬೇಕು. ಭವಿಷ್ಯದಲ್ಲಿ ನಮ್ಮ ವಿದ್ಯಾರ್ಥಿಗಳು ಬೆಳೆಯಬೇಕಾದರೆ ಶಿಕ್ಷಣ ಇಲಾಖೆಯ ಕಾರ್ಯವು ಮಹತ್ವದ್ದಾಗಿರಬೇಕು ಎಂದು ಶಾಸಕ ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನ್ಯಾಯಾಲಯವು ಸಾಂವಿಧಾನಿಕ ಅವಕಾಶಗಳನ್ನು ನೋಡುತ್ತಿದೆ. ಆದರೆ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದ ಸರ್ಕಾರದ ಪರ ವಕೀಲ

ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿರುವ ಹಿಜಾಬ್ ಪ್ರಕರಣದಲ್ಲಿ (Hijab Issue) ಶುಕ್ರವಾರ ಸರ್ಕಾರದ ಪರ ವಕೀಲ ಪ್ರಭುಲಿಂಗ ನಾವದಗಿ (Advocate General Prabhu Navadgi) ವಾದ ಮಂಡಿಸಿದರು. ಹಿಜಾಬ್ ಎನ್ನುವುದು ಎಂದಿಗೂ ಇಸ್ಲಾಂ ನ ಅವಿಭಾಜ್ಯ ಅಂಗವಾಗಿರಲಿಲ್ಲ. ವಿದ್ಯಾರ್ಥಿಗಳಿಗೆ ಏನೇ ತೊಂದರೆ ಆದರೂ ಶಿಕ್ಷಕರ ಸಮಿತಿಯ ಮುಂದೆ ಹೋಗಬಹುದು. ಶಿಕ್ಷಣ ಇಲಾಖೆಯ 12ನೇ ಕಲಂ ನ ಅಡಿ ರಚನೆ ಮಾಡಿರುವ ಸಮಿತಿ ಇದಾಗಿದೆ ಎಂದು ನಾವದಗಿ ವಾದ ಮಂಡನೆ ಮಾಡಿದ್ದಾರೆ.

Latest Videos
Follow Us:
Download App:
  • android
  • ios