2,28,286 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ: ಸಚಿವ ಶಿವರಾಜ ತಂಗಡಗಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ 1281 ಮೆಟ್ರಿಕ್‌ ಪೂರ್ವ ಹಾಗೂ 1161 ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಂತೆ ಒಟ್ಟು 2442 ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು ಇವುಗಳಲ್ಲಿ 2,28,286 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿರುತ್ತದೆ ಎಂದು ಲಿಖಿತ ರೂಪದಲ್ಲಿ ಉತ್ತರ ನೀಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ. 

Hostel Facility for 228286 Students in Kalaburagi says Minister Shivaraj Tangadagi grg

ಚಿತ್ತಾಪುರ(ಜು.20): ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳ ಸಂಖ್ಯೆಯನ್ನು ಹೆಚ್ಚಿಸುವುದು ಸೇರಿದಂತೆ ವಸತಿ ನಿಲಯಗಳ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ದೊರಕಿಸಿಕೊಡಬೇಕು ಎಂದು ವಿಧಾನ ಪರಿಷತ್‌ ಕಲಾಪದಲ್ಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ನಿಯಮ 72ರಡಿ ಗಮನ ಸೆಳೆಯುವ ಪ್ರಶ್ನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ 1281 ಮೆಟ್ರಿಕ್‌ ಪೂರ್ವ ಹಾಗೂ 1161 ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಂತೆ ಒಟ್ಟು 2442 ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು ಇವುಗಳಲ್ಲಿ 2,28,286 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

ಉತ್ತಮ ಶಿಕ್ಷಣ, ಆರೋಗ್ಯದಿಂದ ದೇಶದ ಅಭಿವೃದ್ಧಿ: ಎಚ್‌.ಡಿ.ಕುಮಾರಸ್ವಾಮಿ

ಇಲಾಖೆಯ ಒಟ್ಟು 2442 ವಿದ್ಯಾರ್ಥಿ ನಿಲಯಗಳ ಪೈಕಿ 1611 ವಿದ್ಯಾರ್ಥಿ ನಿಲಯಗಳು ಸ್ವಂತ ಕಟ್ಟಡಗಳಲ್ಲಿ 680 ವಿದ್ಯಾರ್ಥಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಹಾಗೂ 151 ವಿದ್ಯಾರ್ಥಿ ನಿಲಯಗಳು ಉಚಿತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ 485 ನಿವೇಶನಗಳು ಲಭ್ಯವಿದ್ದು, 170 ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿವೆ. ನಿವೇಶನ ಲಭ್ಯತೆ ಹಾಗೂ ಆಯವ್ಯಯದ ಲಭ್ಯತೆಯನುಗುಣವಾಗಿ ಹಂತ ಹಂತವಾಗಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾದ ಆದೇಶ ಸಂಖ್ಯೆ ಹಿಂವಕ 417 ಬಿಎಂಎಸ್‌ 2022 16 ಸೆಪ್ಟಂಬರ್‌ 2022ರಲ್ಲಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸ್ಥಳವಕಾಶ ಲಭ್ಯವಿರುವ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳ ಸಂಖ್ಯಾಬಲವನ್ನು

ಶೇ.25ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿರುತ್ತದೆ ಅದರಂತೆ 30ಸಾವಿರ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಪ್ರವೇಶಾತಿ ಕಲ್ಪಿಸಲಾಗಿರುತ್ತದೆ. ಪ್ರತಿವರ್ಷ ವಿದ್ಯಾರ್ಥಿ ನಿಲಯಗಳ ಪ್ರವೇಶ ಪ್ರಕ್ರಿಯೆ ನಂತರ ಜಿಲ್ಲೆಯಲ್ಲಿನ ಆಯಾ ತಾಲೂಕಿನ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನ ಅರ್ಜಿಗಳ ಸ್ವೀಕೃತಿಗೆ ಪರ್ಯಾಯವಾಗಿ ಆಯಾ ಸಾಲಿಗೆ ಅನ್ವಯಿಸುವಂತೆ ಬೇಡಿಕೆ ಇರುವ ವಿದ್ಯಾರ್ಥಿ ನಿಲಯಗಳಿಗೆ ತಾತ್ಕಾಲಿಕವಾಗಿ ಸ್ಥಾನಗಳನ್ನು ಆಂತರಿಕ ವರ್ಗಾವಣೆ ಮಾಡಿಕೊಂಡು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲಾಗುತ್ತದೆ.

ಮಕ್ಕಳ ಓದಿಗೆ ದುಡ್ಡಿಲ್ಲದೇ ಹೆತ್ತವಳ ಪರದಾಟ: ಪರಿಹಾರದ ಹಣಕ್ಕಾಗಿ ಬಸ್‌ಗೆ ಸಿಕ್ಕಿ ಜೀವ ಬಿಟ್ಟ ತಾಯಿ..!!

ಅಲ್ಲದೇ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ದೊರಕದ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಅನುದಾನದ ಲಭ್ಯತೆಯನುಸಾರ ವಿದ್ಯಾಸಿರಿ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆ ರು.1500ರಂತೆ ಗರಿಷ್ಠ 10 ತಿಂಗಳಿಗೆ ರು.15000 ಮಂಜೂರು ಮಾಡಲಾಗುತ್ತದೆ ಎಂದು ಉತ್ತರಿಸಿದ್ದಾರೆ.

ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಯು ರಾಜ್ಯದ ಒಟ್ಟಾರೆ ಬೇಡಿಕೆ ಹಾಗೂ ಅನುದಾನದ ಲಭ್ಯತೆಯನ್ನು ಅವಲಂಬಿಸಿದ್ದು ಅನುದಾನದ ಲಭ್ಯತೆ ಹಾಗೂ ಬೇಡಿಕೆಯನುಸಾರ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

Latest Videos
Follow Us:
Download App:
  • android
  • ios