IGNOU Admission Extended:ಇಗ್ನೋ ಪದವಿ ಕೋರ್ಸ್‌ಗಳ ಪ್ರವೇಶಾತಿ ಮತ್ತೆ ವಿಸ್ತರಣೆ, ಡಿ.15 ಕೊನೆ ದಿನ
- ಮತ್ತೆ ಪ್ರವೇಶಾತಿ ವಿಸ್ತರಿಸಿದ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ
- ಪದವಿ ಕೋರ್ಸ್‌ಗಳ ಪ್ರವೇಶಾತಿ ಡಿ.15ರವರೆಗೆ ವಿಸ್ತರಿಸಿದ ಇಗ್ನೋ
- ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ
ಬೆಂಗಳೂರು(ಡಿ.13): ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (Indira Gandhi National Open University) 2021ರ ಜುಲೈ ಅವಧಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಡಿಸೆಂಬರ್ 15, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಇದಕ್ಕಿಂತ ಮೊದಲು ನವೆಂಬರ್ 22, 2021ರ ವರೆಗೆ ಕಾಲಾವಕಾಶ ನೀಡಲಾಗಿತ್ತು, ಬಳಿಕ ನವೆಂಬರ್ 30ರ ವರೆಗೆ ವಿಸ್ತರಿಸಲಾಗಿತ್ತು. ನಂತರ ಮತ್ತೊಮ್ಮೆ ಡಿಸೆಂಬರ್ 7, 2021ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಇಗ್ನೋ (IGNOU) ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 15, 2021ರ ವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://ignouadmission.samarth.edu.in/ ಗೆ ಭೇಟಿ ನೀಡಿ.
"ಜುಲೈ-2021 ಸೆಷನ್ ನಲ್ಲಿ ಯುಜಿ ಮತ್ತು ಪಿಜಿ ಕೋರ್ಸ್ ಗಳಿಗೆ ಮಾತ್ರ (ಸೆಮಿಸ್ಟರ್ ಆಧಾರಿತ ಕಾರ್ಯಕ್ರಮಗಳನ್ನು ಹೊರತುಪಡಿಸಿ) ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಡಿಸೆಂಬರ್ 15,2021 ರವರೆಗೆ ವಿಸ್ತರಿಸಿದೆ. ಪ್ರಮಾಣಪತ್ರ / ಡಿಪ್ಲೋಮಾ ಮತ್ತು ಪಿಜಿ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಮುಚ್ಚಲಾಗಿದೆ. " ಎಂದು ಇಗ್ನೋ ತನ್ನ ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.
Private Schools Association: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಖಾಸಗಿ ಶಾಲಾ
ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ. ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.
Malnutrition In Children : 7 ಜಿಲ್ಲೆಯ ಮಕ್ಕಳಿಗೆ ಬಾಳೆಹಣ್ಣು ಬೇಡವಾದರೆ ಮಿಠಾಯಿ-ರುಚಿಯಾದ ಊಟ
ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್‌ಸೈಟ್ ಗೆ ಭೇಟಿ ನೀಡಬಹುದು.
SSLC Examination Fee : ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕ ಏರಿಕೆ
ಕರ್ನಾಟಕದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ಇಗ್ನೋ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರವಿದ್ದು, ಸದರಿ ಕೇಂದ್ರದಡಿಯಲ್ಲಿ 18 ಸ್ನಾತಕೋತ್ತರ (Master's Degree Programmes) 10 ಸ್ನಾತಕೋತ್ತರ ಮತ್ತು ಉನ್ನತ ಡಿಪ್ಲೋಮಾ (PG & Advanced Diploma Programmes), 11 ಸ್ನಾತಕ (Bachelor's Degree Programmes), ), 05 ಡಿಪ್ಲೋಮಾ Diploma Programmes) ಮತ್ತು 10 ಸರ್ಟಿಫಿಕೇಟ್ (Certificate Programmes) ಕೋರ್ಸುಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಗಣಕಾನ್ವಯ (Computer Applications), ಗ್ರಾಮೀಣಾಭಿವೃದ್ಧಿ, ವಾಣಿಜ್ಯಶಾಸ್ತ್ರ, ಸಮಾಜ ಕಾರ್ಯ, ಅರ್ಥಶಾಸ್ತ್ರ, ಇತಿಹಾಸಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಪ್ರವಾಸಿ ಮತ್ತು ಯಾತ್ರಿಕ ವ್ಯವಸ್ಥಾಪನೆ (Tourism and Travel Management), ಇಂಗ್ಲೀಷ್ ಹಾಗೂ ಹಿಂದಿ ಮುಂತಾದ ಸ್ನಾತಕೋತ್ತರ ಕೋರ್ಸುಗಳಿಗೆ; ಬಿಸಿಎ, ಬಿಎ, ಬಿಕಾಂ, ಬಿಪಿಪಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಮುಂತಾದ ಸ್ನಾತಕ ಕೋರ್ಸುಗಳಿಗೆ ಹಾಗೂ ವಿವಿಧ ಡಿಪ್ಲೋಮಾ (Diploma) ಮತ್ತು ಸರ್ಟಿಫಿಕೇಟ್ Certificate) ಕೋರ್ಸುಗಳಿವೆ.