ಕೊಡಗು: ಸೈನಿಕ ಶಾಲೆಯಲ್ಲಿ ನೂತನ ವಸತಿ ನಿಲಯ ಉದ್ಘಾಟನೆ

ಶಾಲೆಯು ಅಂತರಾಷ್ಟ್ರೀಯ ಮಟ್ಟದ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡಿಸಿಕೊಂಡು, ತಾವು ಉನ್ನತ ಮಟ್ಟಕ್ಕೆ ಬೆಳೆಯಬೇಕು. ಆ ಮೂಲಕ ದೇಶದ ನಿರ್ಮಾಣ ಕಾರ್ಯದಲ್ಲಿ ಮುಂದಾಗಬೇಕು. 

Inauguration of Hostel in Sainik School at Kodagu grg

ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು(ಏ.21):  ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯಲ್ಲಿ ಇರುವ ಸೈನಿಕ ಶಾಲೆಯಲ್ಲಿ ನೂತನ ರಾಣಿ ಚೆನ್ನಮ್ಮ ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮೈಸೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿಯಾದ ಡಾ. ಮಾಲತಿ ಪ್ರಿಯ ಎಂ ಅವರು ಆಗಮಿಸಿ ವಸತಿ ನಿಲಯ ಉದ್ಘಾಸಿದರು. ಗೌರವ ಅತಿಥಿಗಳಾಗಿ ಶ್ರೀ ಬಿ ಶ್ರೀನಿವಾಸ್, ಸೂಪರಿಡೆಂಟೆಂಡ್ ಇಂಜಿನಿಯರ್, ಸಿಪಿಡಬ್ಲ್ಯೂ ಡಿ, ಮೈಸೂರು ಇವರು ಆಗಮಿಸಿದ್ದರು. 

ಮೊದಲಿಗೆ ಮುಖ್ಯ ಅತಿಥಿಗಳು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ರಾಣಿ ಚೆನ್ನಮ್ಮ ವಿದ್ಯಾರ್ಥಿನಿಯರ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಸಾನಿಕ ವಿದ್ಯಾರ್ಥಿನಿಯರ ನಿಲಯದ ಕುರಿತು ಇರುವ ಸೌಲಭ್ಯಗಳನ್ನು ಮುಖ್ಯ ಅತಿಥಿಗಳಿಗೆ  ಸವಿವರವಾಗಿ ವಿವರಿಸಿದರು. ನಂತರ ಶಾಲೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ನಡೆಯಿತು. 

ಕೊಡಗು: ಕಾಂಗ್ರೆಸ್ ಅಭ್ಯರ್ಥಿ ಮಂತರ್‌ಗೆ ಜಿವಿಜಯ ಮುನಿಸಿನ ಬಿಸಿ, ಮತಗಳ ವಿಭಜನೆ ಆಗುವ ಆತಂಕ..!

ಕಾರ್ಯಕ್ರಮದ ಮೊದಲಿಗೆ ಶಾಲೆಯ ಶಿಕ್ಷಕರಾದ ಶ್ರೀ ರಾಜ್ ಗೋಲ್ಕರ್ ಮುಖ್ಯ ಅತಿಥಿಗಳು ಮತ್ತು ಗೌರವ ಅತಿಥಿಗಳ ಕಿರು ಪರಿಚಯವನ್ನು ಮಾಡಿಕೊಟ್ಟರು. ನಂತರ ಶಾಲೆಯ ವಿದ್ಯಾರ್ಥಿನಿಯರು ಭಕ್ತಿ ಗೀತೆಯೊಂದಕ್ಕೆ ನೃತ್ಯ ಮಾಡಿದರು. ನಂತರ ಸೈನಿಕ ಶಾಲೆಯ ಕೆಡೆಟ್ ಗಳಾದ ಕರ್ನಾಟಕ ಜನಪದ ನೃತ್ಯಗಳಾದ ಕೋಲಾಟ, ಕಂಸಾಳೆ ನೃತ್ಯಗಳನ್ನು ಪ್ರದರ್ಶಿಸಿ ಸಭಿಕರನ್ನು ಆಕರ್ಷಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳು, ಶಾಲೆಯು ಅಂತರಾಷ್ಟ್ರೀಯ ಮಟ್ಟದ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡಿಸಿಕೊಂಡು, ತಾವು ಉನ್ನತ ಮಟ್ಟಕ್ಕೆ ಬೆಳೆಯಬೇಕು. ಆ ಮೂಲಕ ದೇಶದ ನಿರ್ಮಾಣ ಕಾರ್ಯದಲ್ಲಿ ಮುಂದಾಗಬೇಕೆಂದು ಕರೆ ನೀಡಿದರು. ಹಾಗೆಯೇ, ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯೊಂದಿಗೆ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿ ಭವಿಷ್ಯದ ಸತ್ಪ್ರಜೆಗಳಾಗಬೇಕೆಂದು ಕರೆ ನೀಡಿದರು. ಹಾಗೆಯೇ ಈ ಸಂದರ್ಭದಲ್ಲಿ ನೃತ್ಯವನ್ನು ಪ್ರದರ್ಶಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅತಿಥಿಗಳು ಪ್ರಸಂಶಿಸಿದರು. ನಂತರ ಮಾತನಾಡಿದ ಗೌರವ ಅತಿಥಿಗಳು ಶಿಕ್ಷಣವೇ ಸಮಾಜದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ, ಶಿಕ್ಷಣವು ಮನುಷ್ಯನ ಬದುಕಿಗೆ ಸನ್ಮಾರ್ಗವನ್ನು ತೋರಿಸುವ ಸಾಧನವಾಗಿದ್ದು, ಇದು ಪ್ರತಿಯೊಬ್ಬ ನಾಗರಿಕನಿಗೂ ಅತಿ ಅವಶ್ಯಕವಾದ ಅಂಶವಾಗಿದೆ. ಈ ನಿಟ್ಟಿನಲ್ಲಿ ಸೈನಿಕ ಶಾಲೆ ಕೊಡಗಿನಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ತಾವುಗಳು ಅದೃಷ್ಟವಂತರೆಂದು ಮಕ್ಕಳಿಗೆ ತಿಳಿಸಿದರು. 

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಜಿ ಕಣ್ಣನ್, ಬೋಧಕ- ಬೋಧಕೇತರ ವರ್ಗ, ಸಿ ಪಿ ಡಬ್ಲ್ಯೂ ಡಿ ಮೈಸೂರಿನ ಅಭಿಯಂತರರು ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios