ಪಠ್ಯಪುಸ್ತಕದಲ್ಲಿ ಉದ್ದೇಶಪೂರ್ವಕ ತಪ್ಪು ಮಾಡಲಾಗಿದೆ; Siddaramaiah ಆರೋಪ
ಪಠ್ಯಪುಸ್ತಕದಲ್ಲಿ ಉದ್ದೇಶ ಪೂರ್ವಕವಾಗಿ ಅನೇಕ ತಪ್ಪು ಮಾಡಿದ್ದಾರೆ. ಅಂಬೇಡ್ಕರ್ ಅವರ ಹೆಸರಿನ ಮುಂದೆ ‘ಸಂವಿಧಾನ ಶಿಲ್ಪಿ’ ಎಂಬುದನ್ನೇ ತೆಗೆದು ಹಾಕಿದ್ದಾರೆ, ಕುವೆಂಪು ಫೋಟೋ ತೆಗೆದು ಹಾಕಿದ್ದು ಅವಮಾನ ಅಲ್ವೇ ? ಎಂದಿದ್ದಾರೆ.
ಬೆಳಗಾವಿ (ಜೂ.8): ಪಠ್ಯಪುಸ್ತಕ ಪರಿಷ್ಕರಣೆಗೆ (textbook revision) ಸಂಬಂಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಕಿಡಿಕಾರಿದ್ದಾರೆ. ಪಠ್ಯಪುಸ್ತಕದಲ್ಲಿ (textbook) ಉದ್ದೇಶ ಪೂರ್ವಕವಾಗಿ ಅನೇಕ ತಪ್ಪು ಮಾಡಿದ್ದಾರೆ. ಅಂಬೇಡ್ಕರ್ ಅವರ ಹೆಸರಿನ ಮುಂದೆ ‘ಸಂವಿಧಾನ ಶಿಲ್ಪಿ’ ಎಂಬುದನ್ನೇ ತೆಗೆದು ಹಾಕಿದ್ದಾರೆ, ಕುವೆಂಪು ಫೋಟೋ ತೆಗೆದು ಹಾಕಿದ್ದು ಅವಮಾನ ಅಲ್ವೇ ? ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ವೈಚಾರಿಕ ಶಿಕ್ಷಣ (education) ಸಿಗಬೇಕು. ಇತಿಹಾಸ ತಿರುಚುವ ಕೆಲಸ ಮಾಡಬಾರದು. ಮುಖ್ಯಮಂತ್ರಿ, ಶಿಕ್ಷಣ ಸಚಿವರು ತಪ್ಪು ತಿದ್ದುತ್ತೇವೆ ಎಂದಿದ್ದಾರೆ. ಅಂದ ಮೇಲೆ ನಾವೆಲ್ಲಿ ರಾಜಕೀಯ ಮಾಡುತ್ತಿದ್ದೇವೆ? ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿದ್ದವರು. ಆ ವಿಚಾರವನ್ನೇ ಹೇಳದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನಷ್ಟೇ (textbook revision committee) ವಿಸರ್ಜನೆ ಮಾಡಿ, ಪಠ್ಯ ಮುಂದುವರಿಸಿದರೆ ಹೇಗೆ ಎಂದು ಪ್ರಶ್ನಿಸಿದರು. ಜತೆಗೆ, ವೈಚಾರಿಕ, ವೈಜ್ಞಾನಿಕ ಮನೋಭಾವ ಇರುವ ವ್ಯಕ್ತಿಯನ್ನು ಪಠ್ಯಪರಿಷ್ಕರಣಾ ಸಮಿತಿಗೆ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಬ್ಲೂಬಾಕ್ಸ್ ಆದೇಶ ಪಾಲಿಸಲು ಸಮಯ ಇರಲಿಲ್ಲವೇ?: BDA COMMISSIONERಗೆ ಹೈಕೋರ್ಟ್ ಕ್ಲಾಸ್
ಸಾಲು ಸಾಲು ಟ್ವೀಟ್ ಮಾಡಿದ್ದ ಸಿದ್ದು: ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದೆರಡು ದನಗಳ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿ , ಈ ಹಿಂದೂಗಳು ಯಾರು? ಎನ್ನುವುದನ್ನು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದರು.
ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ? ಎಂದು ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು.
ಪಠ್ಯಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲ ಎಂದು ಟ್ಟ್ವೀಟ್ ಮಾಡಿದ್ದ ಅವರು, ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದರು. ಜೊತೆಗೆ ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಕೇಳಿದ್ದರು.
ದೆಹಲಿ, ಮುಂಬೈ, ಯುಪಿ, ಗುಜರಾತ್ ಸೇರಿ ಹಲವೆಡೆ Al-Qaeda ಆತ್ಮಹತ್ಯಾ ದಾಳಿ
ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತಾ? ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತಾ ಎಂದು ಟ್ವೀಟ್ ಮಾಡಿದ್ದರು. ಮಾತ್ರವಲ್ಲ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆಗೆ ಕೂಡ ಆಗ್ರಹಿಸಿದ್ದರು.