Ganeshotsav 2022: ಹಿಜಾಬ್ ಬಳಿಕ ಶಾಲೆಗಳಲ್ಲಿ ಶುರುವಾಗುತ್ತಾ ಗಣೇಶನ ದಂಗಲ್?
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವರು ಅನುಮತಿ ನೀಡುವ ಮುಖಾಂತರ ಶಿಕ್ಷಣ ಕ್ಷೇತ್ರದಲ್ಲಿ ಅಶಾಂತಿ ಸೃಷ್ಠಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರ: ಅಥಾವುಲ್ಲಾ ಪುಂಜಲಾಕಟ್ಟೆ
ಬೆಂಗಳೂರು(ಆ.18): ಹಿಜಾಬ್ ದಂಗಲ್ ಬಳಿಕ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುರುವಾಗುತ್ತಾ ಗೌರಿ ಗಣೇಶ್ ದಂಗಲ್. ಹೌದು, ಶಿಕ್ಷಣ ಇಲಾಖೆಯಿಂದ ಸರ್ಕಾರಿ ಶಾಲೆಗಳಲ್ಲಿ ಗಣೇಶನ ಕೂಡಿಸಲು ಮೌಖಿಕ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೊರೋನಾದಿಂದ ಕಳೆದ ಎರಡು ವರ್ಷಗಳಿಂದ ಶಾಲಾ ಕಾಲೇಜುಗಳಲ್ಲಿ ಗೌರಿ ಗಣೇಶ ಹಬ್ಬ ಆಚರಣೆ ಮಾಡಿರಲಿಲ್ಲ. ಈ ಬಾರಿ ಕೊರೋನಾ ಇಳಿಮುಖವಾದ ಹಿನ್ನೆಲೆಯಲ್ಲಿ ಗೌರಿ ಗಣೇಶ ಕೂರಿಸಲು ಅನುಮತಿ ನೀಡಲಾಗಿದೆ ಅನ್ನೋ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸಿಕ್ಕಿದೆ.
ಅಲ್ಲದೆ ಈ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ಪ್ರಾರಂಭಿಸಿರುವ ಶಾಲೆಗಳಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಲು ಮುಕ್ತ ಅವಕಾಶ ಕೊಡಲಾಗಿದೆ. ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಂಪ್ಲೀಟ್ ಸ್ವಾತಂತ್ರ್ಯ ನೀಡಲಾಗಿದ್ದು, ಶಾಲೆಗಳಲ್ಲಿ ಗಣೇಶ ಕುಡಿಸಲು ಇಲ್ಲ ಯಾವುದೇ ನಿರ್ಬಂಧವನ್ನ ಶಿಕ್ಷಣ ಇಲಾಖೆ ಹಾಕಿಲ್ಲ ಎಂದು ತಿಳಿದು ಬಂದಿದೆ. ಶಾಲೆಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಶಿಕ್ಷಣ ಇಲಾಖೆಯಿಂದ ಮೌಖಿಕ ಆದೇಶ ಬಂದಿದ್ದು ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗಣೇಶ ಮೂರ್ತಿ ಕೂಡಿಸಲು ಗ್ರೀನ್ ಸಿಗ್ನಲ್ ಕೊಡಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.
ಗಣೇಶನ ಹಬ್ಬಕ್ಕೆ ಇನ್ನೂ ಬಾರದ ಮಾರ್ಗಸೂಚಿ..!
ಶಿಕ್ಷಣ ಸಚಿವರ ನಡೆಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಸಮಧಾನ
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗಣೇಶೋತ್ಸವ ಆಚರಿಸಲು ಶಿಕ್ಷಣ ಸಚಿವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಆದ್ರೆ ಶಿಕ್ಷಣ ಸಚಿವರ ಈ ದ್ವಂದ್ವ ನಿಲುವಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಸಮಾಧಾನ ಹೊರಹಾಕಿದೆ.
ಹಿಜಾಬ್ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವ್ಯತಿರಿಕ್ತ ಹೇಳಿಕೆ ನೀಡಿದ್ರು. ಅಂದು ಶಾಲಾ ಕಾಲೇಜು ಆವರಣದಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ಇಲ್ಲ ಎಂದಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದು ಗಣೇಶ ಹಬ್ಬ ಆಚರಣೆ ವಿಚಾರದಲ್ಲಿ ಸಚಿವರ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿರೋದು ಸರಿಯಲ್ಲ ಅಂತ ಸಚಿವರ ನಿರ್ಧಾರಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವರು ಅನುಮತಿ ನೀಡುವ ಮುಖಾಂತರ ಶಿಕ್ಷಣ ಕ್ಷೇತ್ರದಲ್ಲಿ ಅಶಾಂತಿ ಸೃಷ್ಠಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರವಾಗಿದೆ. ಅಂದು ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶವಿಲ್ಲವೆಂದ ಇದೇ ಸಚಿವರ ಇಂದಿನ ಹೇಳಿಕೆಯು ಏಕಪಕ್ಷೀಯ ವಾದ ತಾರತಮ್ಯ ಮತ್ತು ಸಂವಿಧಾನ ವಿರೋಧಿಯಾಗಿದೆ ಇದು ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಧ್ಯಕ್ಷ ಅಥಾವುಲ್ಲಾ ಪುಂಜಲಾಕಟ್ಟೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.