ISRO YUVIKA Programme: ಯುವ ವಿಜ್ಞಾನಿ ಕಾರ್ಯಕ್ರಮಕ್ಕೆ ಇಸ್ರೋದಿಂದ 150 ವಿದ್ಯಾರ್ಥಿಗಳ ಆಯ್ಕೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯುವ ವಿಜ್ಞಾನಿ ಕಾರ್ಯಕ್ರಮಕ್ಕೆ  ದೇಶಾದ್ಯಂತ 9ನೇ ತರಗತಿಯಿಂದ 150 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದೆ.

ISRO to choose 150 students for Young Scientist Programme gow

ಬೆಂಗಳೂರು(ಮಾ.12): ಯುವಜನಾಂಗವನ್ನು ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( Indian Space Research Organisation -ISRO) ಎರಡು ವಾರಗಳ ವಿಶೇಷ ಕಾರ್ಯಕ್ರಮಕ್ಕಾಗಿ ದೇಶಾದ್ಯಂತ 9ನೇ ತರಗತಿಯಿಂದ 150 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದೆ. ಬೆಂಗಳೂರು, ತಿರುವನಂತಪುರಂ, ಹೈದರಾಬಾದ್, ಅಹಮದಾಬಾದ್ ಮತ್ತು ಶಿಲ್ಲಾಂಗ್ ನಲ್ಲಿ ಇಸ್ರೋ ಯುವಿಕಾ (Young Scientist Programme - ಯುವ ವಿಜ್ಞಾನಿ ಕಾರ್ಯಕ್ರಮ) ಆಯೋಜಿಸಲಿದೆ. ಅಲ್ಲದೇ ಅವರನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸಕ್ಕೆ ಕರೆದೊಯ್ಯಲಾಗುತ್ತದೆ. 

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಪ್ರಸ್ತುತ ಮತ್ತು ಹೊರಹೊಮ್ಮುತ್ತಿರುವ ಪ್ರವೃತ್ತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ  ವಿದ್ಯಾರ್ಥಿಗಳು ಮತ್ತು ವಿಜ್ಞಾನಿಗಳ ನಡುವೆ ವಿವಿಧ ಚರ್ಚೆಗಳು ಮತ್ತು ಸಂವಾದವನ್ನು ಈ ಕಾರ್ಯಕ್ರಮ ಹೊಂದಿರುತ್ತದೆ.  ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಈಗಾಗಲೇ ಆಹ್ವಾನಿಸಲಾಗಿದ್ದು, ಏಪ್ರಿಲ್ 10 ಸಂಜೆ ಗಂಟೆ ಅರ್ಜಿ ಸಲ್ಲಿಕೆಗೆ ಕಡೇಯ ದಿನವಾಗಿದೆ. 

ಮೇ 16 ರಿಂದ ಮೇ 28ರವರೆಗೂ ಕಾರ್ಯಕ್ರಮ ನಡೆಯಲಿದೆ. 8ನೇ ತರಗತಿಯಲ್ಲಿ ಪಡೆದಿರುವ ಅಂಕಗಳು, ವಿಜ್ಞಾನ ಮೇಳ, ಒಲಿಂಪಿಯಡ್ ನಲ್ಲಿ ಬಹುಮಾನ, ವಿಜ್ಞಾನ ಸ್ಪರ್ಧೆ , ಎನ್ ಸಿಸಿ, ಅಥವಾ ಎನ್ ಎಸ್ ಎಸ್, ಸ್ಕೌಟ್ಸ್ ಮತ್ತು ಗೈಡ್ಸ್  ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆನ್ ಲೈನ್ ನೋಂದಣಿಗಾಗಿ https://yuvika.isro.gov.in/yuvika/register.jsp.ಸಂಪರ್ಕಿಸಬಹುದು.

VIJAYAPURA COOPERATIVE BANK RECRUITMENT 2022: ವಿಜಯಪುರ ಸಹಕಾರಿ ಬ್ಯಾಂಕ್ ನೇಮಕಾತಿ 

ಅತ್ಯಾಚಾರ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ರಾಜ್ಯ ಹೈಕೋರ್ಟ್ ಅನುಮತಿ : ಅಪ್ರಾಪ್ತೆ ಮೇಲೆ ಅತ್ಯಾಚಾರ (Pocso Case) ನಡೆಸಿದ ಆರೋಪಿಗೆ (Accuse) ಬಿಕಾಂ ಪರೀಕ್ಷೆ (Bcom Exam) ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ.15 ಮಾರ್ಚ್  2022 ರಿಂದ  ಬಿಕಾಂ ಪರೀಕ್ಷೆ ಆರಂಭವಾಗಲಿದ್ದು 19 ವರ್ಷದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ರಾಜ್ಯ ಉಚ್ಛ ನ್ಯಾಯಾಲಯ ಸಮ್ಮತಿ (Karnataka High Cout)  ಸೂಚಿಸಿದೆ.  ಪರೀಕ್ಷೆ ಬರೆಯಲು ಜಾಮೀನು ನೀಡುವಂತೆ ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ಮನವಿ ಆಲಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ಮಾಡಿದೆ.

ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠ, ''ಆರೋಪಿ ವಿದ್ಯಾರ್ಥಿಗೆ ಮಾ.15ರಿಂದ ಮಾ.31ರವರೆಗೆ ಬಿ.ಕಾಂ ಪದವಿಯ ಮೂರನೇ ಸೆಮಿಸ್ಟರ್‌ ಪರೀಕ್ಷೆ ನಿಗದಿಯಾಗಿದ್ದು, ಜಾಮೀನು ನೀಡುವಂತೆ ಕೋರಿದ್ದಾನೆ. ಆದರೆ, ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಜಾಮೀನು ನೀಡಿದರೆ ತನಿಖೆಗೆ ಅಡ್ಡಿಯಾಗುತ್ತದೆಂದು ಅಭಿಯೋಜಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆರೋಪಿಯ ಭವಿಷ್ಯ ಕತ್ತಲೆಗೆ ದೂಡಲು ಸಾಧ್ಯವಿಲ್ಲ. ಆದ್ದರಿಂದ ಪರೀಕ್ಷೆ ಬರೆಯಲು ಆರೋಪಿಗೆ ಸೂಕ್ತ ವ್ಯವಸ್ಥೆ ಮಾಡಬೇಕು'' ಎಂದು ನ್ಯಾಯಪೀಠ ಹೇಳಿದೆ.

ಬಾಲ್ಯವಿವಾಹಕ್ಕೆ ಒತ್ತಾಯಿಸಿ ಕೋಣೆಯಲ್ಲಿ ಕೂಡಿ ಹಾಕಿದ್ದ ಬಾಲಕಿ ಎಸ್ಕೇಪ್

ಷರತ್ತುಗಳನ್ನು ವಿಧಿಸಿ ಪರೀಕ್ಷೆ ಬರೆಯಲು ಆರೋಪಿಗೆ ಅವಕಾಶ ಕಲ್ಪಿಸಿ ಅರ್ಜಿ ಇತ್ಯರ್ಥಪಡಿಸಿರುವ ಹೈಕೋರ್ಟ್‌, ಈ ಆದೇಶವು ಆರೋಪಿ ಮುಂದೆ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅಡ್ಡಿಯಾಗುವುದಿಲ್ಲಎಂದು ಸ್ಪಷ್ಟಪಡಿಸಿದೆ.

ಆರೋಪಿಯನ್ನು ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಕರೆತರಬೇಕು. ಪರೀಕ್ಷೆ ಮುಗಿದ ನಂತರ ಜೈಲಿಗೆ ವಾಪಸ್‌ ಕರೆದೊಯ್ಯಬೇಕು. ಜೈಲು ಅಧಿಕಾರಿಗಳು ಆರೋಪಿ ಖರ್ಚಿನಲ್ಲಿಯೇ ಪರೀಕ್ಷಾ ಕೊಠಡಿಯಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು ಎಂದು ಹೈಕೋರ್ಟ್‌ ಷರತ್ತು ವಿಧಿಸಿದೆ. ಆರೋಪಿಯ ಪೋಷಕರು ಆತನಿಗೆ ಅಗತ್ಯ ಪುಸ್ತಕಗಳನ್ನು ತಂದು ಕೊಡಲು ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಕೋರ್ಟ್ ತಿಳಿಸಿದೆ.

ಅಲ್ಲದೆ, ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಜೈಲಿಗೆ ಹಿಂದಿರುವಾಗ ಆರೋಪಿ ಕೈಗೆ ಬೇಡಿ ಹಾಕಬಾರದು. ಆರೋಪಿಯ ಘನತೆ ಮತ್ತು ಗೌಪ್ಯತೆ ಕಾಪಾಡುವ ದೃಷ್ಟಿಯಿಂದ ಬೆಂಗಾವಲು ಪಡೆಯ ಭದ್ರತಾ ಸಿಬ್ಬಂದಿ ಸಮವಸ್ತ್ರ ಧರಿಸಬಾರದು. ಭದ್ರತಾ ಸಿಬ್ಬಂದಿ ನಿಯೋಜನೆಗೆ ಆಗುವ ಖರ್ಚನ್ನು ಅರ್ಜಿದಾರ ಮುಂಚಿತವಾಗಿಯೇ ಜೈಲು ಪ್ರಾಧಿಕಾರಕ್ಕೆ ಪಾವತಿಸಬೇಕು.

 ಪರೀಕ್ಷೆ ಮುಗಿದ ನಂತರ ಮುಂದಿನ ಪರೀಕ್ಷಾ ದಿನಾಂಕದವರೆಗೆ ಅರ್ಜಿದಾರ ಕೇಂದ್ರ ಕಾರಾಗೃಹದಲ್ಲಿಯೇ ಇರಬೇಕು ಎಂದು ನಿರ್ದೇಶನ ನೀಡಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿ 2022 ರ ಜನವರಿ 20 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

Latest Videos
Follow Us:
Download App:
  • android
  • ios