Asianet Suvarna News Asianet Suvarna News

ಮಕ್ಕಳಲ್ಲಿ ಗಣಿತದ ಆಸಕ್ತಿ ಮೂಡಿಸುವುದು ಅಗತ್ಯ; ಪ್ರಲ್ಹಾದ್ ಜೋಶಿ

ನಿತ್ಯ ಬದುಕಿನ ಭಾಗವಾಗಿರುವ ಗಣಿತದ ಕುರಿತು ಆಸಕ್ತಿ ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು.

It is necessary to make children interested in mathematics says Pralhad Joshi ravjkl
Author
First Published Sep 18, 2022, 8:13 AM IST

ಧಾರವಾಡ (ಸೆ.18) : ನಿತ್ಯ ಬದುಕಿನ ಭಾಗವಾಗಿರುವ ಗಣಿತದ ಕುರಿತು ಆಸಕ್ತಿ ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು. ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ನಗರದ ಕರ್ಷ ಜ್ಞಾನ ¶ೌಂಡೇಶನ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೆ.ಇ. ಬೋಡ್‌್ಸ ಸಂಸ್ಥೆ ಜಂಟಿಯಾಗಿ ಇಲ್ಲಿನ ಕರ್ನಾಟಕ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಮೋಜಿನೊಂದಿಗೆ ಗಣಿತ ಕಲಿಕೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ; ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಭಾರತೀಯ ವೇದ, ಪುರಾಣಗಳಲ್ಲಿ ಗಣಿತದ ಉಲ್ಲೇಖವಿದ್ದು, ಗಣಿತ ಶಾಸ್ತ್ರಕ್ಕೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಜಗತ್ತಿಗೆ ಸೊನ್ನೆ ಪರಿಚಯಿಸಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ. ಭಾಸ್ಕರಾಚಾರ್ಯರಿಂದ ಹಿಡಿದು ಇತ್ತೀಚಿಗಿನ ಶ್ರೀನಿವಾಸ ರಾಮಾನುಜನ್‌ ಸೇರಿದಂತೆ ಅನೇಕ ಗಣಿತ ಶಾಸ್ತ್ರಜ್ಞರು ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಆದರೆ ಬದಲಾದ ಸಂದರ್ಭದಲ್ಲಿ ಗಣಿತ ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳು ಭಾವಿಸುತ್ತಿದ್ದು, ಆ ಭಯ ತೊಡೆದು ಗಣಿತದಲ್ಲಿ ಆಸಕ್ತಿ ಮೂಡಿಸಲು ಈ ಮೇಳ ಆಯೋಜಿಸಿರುವುದು ಅಭಿನಂದನೀಯ ಕಾರ್ಯ ಎಂದರು.

ರಾಜಕೀಯ ಎಂದರೆ ತಿರಸ್ಕೃತ ಎನ್ನುವ ಭಾವನೆ ಬಲವಾಗುತ್ತಿರುವ ಸಂದರ್ಭದಲ್ಲಿ, ಆ ವ್ಯವಸ್ಥೆಯಲ್ಲಿ ಪುನರಪಿ ವಿಶ್ವಾಸ ಮೂಡುವಂತೆ ಮಾಡಿದ, ಪ್ರತಿಯೊಂದರಲ್ಲೂ ಭಾರತೀಯ ಭಾವನೆಯನ್ನು ಉದ್ದೀಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಹಲವು ರೀತಿಯ ಸಾಮಾಜಿಕ ಕಾರ್ಯಗಳ ಮೂಲಕ ದೇಶಾದ್ಯಂತ ಆಚರಿಸಲಾಗುತ್ತಿದೆ. ಆದರೆ ಇಲ್ಲಿ ಗಣಿತವನ್ನು ಮಕ್ಕಳಿಗೆ ಸುಲಭವಾಗಿಸುವ ಮತ್ತು ಅರ್ಥೈಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮೇಯರ್‌ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇದರೆ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ವಕೀಲ ಅರುಣ ಜೋಶಿ, ವಿನಾಯಕ ಜೋಶಿ, ಸಂಯೋಜಕಿ ಸುಮಂಗಲಾ ದಾಂಡೇವಾಲೆ, ಮಯೂರ ದಾಂಡೇವಾಲೆ ಸೇರಿದಂತೆ ಧಾರವಾಡ ಶಹರ ಮತ್ತು ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು.

ಸಚಿವರಿಂದ ಬಹುಮಾನ ಘೋಷಣೆ:

ಮಕ್ಕಳಲ್ಲಿ ಗಣಿತ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಗಣಿತ ಮೇಳ ವಿಭಿನ್ನ, ವಿಶಿಷ್ಠವಾದದ್ದು. ಆಯೋಜಿಸಿರುವ ಸಂಸ್ಥೆಗಳು ಇದನ್ನು ವಾರ್ಷಿಕ ಕಾರ್ಯಕ್ರಮವಾಗಿ ಮುಂದುವರಿಸಿಕೊಂಡು ಹೋಗಬೇಕು. ಜತೆಗೆ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆ ಕೂಡಾ ಆಯೋಜಿಸಬೇಕು. ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ . 25 ಸಾವಿರ, ದ್ವಿತೀಯ ಸ್ಥಾನ . 15 ಸಾವಿರ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವ ಪ್ರಹ್ಲಾದ ಜೋಶಿ ಘೋಷಿಸಿದರು.

ದೇಶಕ್ಕೆ 0.5ರಷ್ಟಿದ್ದ ವಿದ್ಯುತ್‌ ಕೊರತೆ ನಿವಾರಣೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮಕ್ಕಳ ಕಲರವ

ಗಣಿತ ಮೇಳದಲ್ಲಿ ಬಣ್ಣ, ಬಣ್ಣದ ಧಿರಿಸು ತೊಟ್ಟ, ಮೇಳದ ಕುರಿತು ಕುತೂಹಲ ಹೊಂದಿದ್ದ ಮಕ್ಕಳ ಕಲರವ ಅನುರಣಿಸಿತ್ತು. ಧಾರವಾಡ ಶಹರ ಮತ್ತು ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು ಸಂತಸದಿಂದ ಮೇಳದಲ್ಲಿ ಪಾಲ್ಗೊಂಡಿದ್ದರು. 20 ಕೊಠಡಿಗಳಲ್ಲಿ ಗಣಿತ ಸಂಬಂಧಿತ ಆಟಗಳನ್ನು ಆಯೋಜಿಸಲಾಗಿತ್ತು. ನಿಗದಿತ ಸಮಯದಲ್ಲಿ ಗಣಿತದ ಸಮಸ್ಯೆಗಳನ್ನು ಪರಿಹರಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

Follow Us:
Download App:
  • android
  • ios