Revised textbooks ರೋಹಿತ್‌ ಚಕ್ರತೀರ್ಥ ವಿರುದ್ಧ ಕರವೇ ಪ್ರತಿಭಟನೆ, ಬಂಧನಕ್ಕೆ ಜೆಡಿಎಸ್‌ ಆಗ್ರಹ!

  • ರೋಹಿತ್‌ ಚಕ್ರತೀರ್ಥ ಬಂಧನಕ್ಕೆ ಜೆಡಿಎಸ್‌ ಆಗ್ರಹ
  • ಚಕ್ರತೀರ್ಥ ವಿರುದ್ಧ ಕರವೇ ಪ್ರತಿಭಟನೆ
  • ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯವನ್ನು ವಜಾಗೊಳಿಸಬೇಕೆಂದು ಆಗ್ರಹ
JDS and Karave protest against Rohith Chakratirtha to cancel the shool textbooks review ckm

ಬೆಂಗಳೂರು(ಜೂ.01): ರಾಷ್ಟ್ರಕವಿ ಕುವೆಂಪು ಬಗ್ಗೆ ಅವಹೇಳನಕಾರಿ ಹೇಳಿಕೆ ಮತ್ತು ಅವರು ರಚಿಸಿರುವ ನಾಡಗೀತೆಯನ್ನು ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯವನ್ನು ವಜಾಗೊಳಿಸಬೇಕು ಮತ್ತು ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿತು.

ಮಂಗಳವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನದ ಬಳಿಕ ಪ್ರತಿಭಟನೆ ನಡೆಸಿದ ಜೆಡಿಎಸ್‌ ನಾಯಕರು, ಕಾರ್ಯಕರ್ತರು ಸರ್ಕಾರ ಮತ್ತು ರೋಹಿತ್‌ ಚಕ್ರತೀರ್ಥ ವಿರುದ್ಧ ಘೋಷಣೆ ಕೂಗಿದರು. ವಿಧಾನಪರಿಷತ್ತಿನ ನೂತನ ಸದಸ್ಯ ಟಿ.ಎ.ಶರವಣ, ಜೆಡಿಎಸ್‌ನ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

22 ಬ್ರಾಹ್ಮಣರ ಬರಹ ಸೇರಿಸಿದ್ದು ಬರಗೂರು: ರೋಹಿತ್‌ ಚಕ್ರತೀರ್ಥ

ಈ ವೇಳೆ ಮಾತನಾಡಿದ ಶರವಣ, ರೋಹಿತ್‌ ಚಕ್ರತೀಥ್‌ ಮತ್ತವರ ಪಟಾಲಂ ನಡೆಸುತ್ತಿರುವ ಅಪಪ್ರಚಾರವನ್ನು ಕಂದಾಯ ಸಚಿವ ಆರ್‌.ಅಶೋಕ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೌನವಾಗಿರುವುದು ಸರಿಯಲ್ಲ. ಈ ಇಬ್ಬರಿಗೂ ರಾಜಕೀಯವಾಗಿ ಅಸ್ತಿತ್ವ ಉಳಿಸಿಕೊಳ್ಳಲು ಒಕ್ಕಲಿಗ ಜಾತಿ ಬೇಕು. ಆದರೆ, ಅವರದೇ ಪಕ್ಷದವರು ಕುವೆಂಪು ಅವರನ್ನು ನಿಂದಿಸುತ್ತಿದ್ದರೂ ಮೌನವೇಕೆ ಎಂಬುದು ಸಂದೇಹ ಮೂಡುತ್ತಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಚಕ್ರತೀರ್ಥ ವಿರುದ್ಧ ಕರವೇ ಪ್ರತಿಭಟನೆ
ಕುವೆಂಪು ರಚಿತ ರಾಜ್ಯ ಸರ್ಕಾರ ಅಂಗೀಕರಿಸಿರುವ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿರುವ ರೋಹಿತ್‌ ಚಕ್ರತೀರ್ಥ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿವರಾಮೇಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.

'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

ಸೋಮವಾರ ನಗರದ ಮಲ್ಲೇಶ್ವರದಲ್ಲಿರುವ ಕುವೆಂಪು ಪ್ರತಿಮೆ ಸಮೀಪ ವೇದಿಕೆ ರಾಜ್ಯಾಧ್ಯಕ್ಷ ಎಚ್‌.ಶಿವರಾಮೇಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಗೆ ಅವಮಾನ ಮಾಡಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸರ್ಕಾರದ ತೀರ್ಮಾನ ಮತ್ತು ಆರು ಕೋಟಿ ಕನ್ನಡಿಗರ ನಾಡಪ್ರೇಮವನ್ನು ಗೇಲಿ ಮಾಡಿರುವ ನಾಡದ್ರೋಹಿ ರೋಹಿತ್‌ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದು ಪ್ರಕಟಿಸಿರುವ ರೋಹಿತ್‌ ವಿರುದ್ಧ ಸೈಬರ್‌ ಕ್ರೈಮ್‌ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರ ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಕುವೆಂಪು ಅವರನ್ನು ಅವಮಾನಿಸಿ, ನಾಡಗೀತೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ರೋಹಿತ್‌ ಚಕ್ರತೀರ್ಥ ವಿರುದ್ಧ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಚಕ್ರತೀರ್ಥ ಸಮಿತಿ ವಜಾಗೊಳಿಸಿ: ಎಂಬಿಪಾ
ರಾಜ್ಯ ಸರ್ಕಾರ ಕೂಡಲೇ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿ ರದ್ದುಪಡಿಸಿ ಪರಿಣತರನ್ನು ಒಳಗೊಂಡ ಹೊಸ ಸಮಿತಿ ರಚಿಸಬೇಕೆಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಆಗ್ರಹಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿರುದ್ಧ ಅನೇಕ ಸಾಹಿತಿಗಳು, ಚಿಂತಕರು, ಸ್ವಾಮೀಜಿಗಳು ದನಿ ಎತ್ತಿದ್ದಾರೆ. ಮಹಾಪುರುಷರು, ಶರಣರು, ಬುದ್ಧ, ಬಸವ, ಅಂಬೇಡ್ಕರ್‌ ಅವರ ವಿಚಾರಗಳನ್ನು ತಿರುಚಬಾರದು. ಯಾವುದೇ ಸರ್ಕಾರ ಇರಲಿ ಪಠ್ಯದಲ್ಲಿ ತಮ್ಮ ಪಕ್ಷ, ಬೆಂಬಲಿತ ಸಂಸ್ಥೆಯ ಅಜೆಂಡಾ ತುರುಕುವ ಕೆಲಸ ಮಾಡಬಾರದು ಎಂದರು.

Latest Videos
Follow Us:
Download App:
  • android
  • ios