ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ  ಜೆಇಇ ಮುಖ್ಯ ಪರೀಕ್ಷೆ 2022ರ   ದಿನಾಂಕಗಳನ್ನು ಮುಂದೂಡಿದ್ದು, ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ನವದೆಹಲಿ(ಮಾ.14): ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (National Testing Agency) ಜೆಇಇ ಮೇನ್ ಎಕ್ಸಾಮ್ 2022ರ (JEE Main Exam 2022) ದಿನಾಂಕಗಳನ್ನು ಮುಂದೂಡುವುದಾಗಿ ಘೋಷಿಸಿದ್ದು ಹೊಸ ವೇಳಾಪಟ್ಟಿಯನ್ನು ಬಿಡಗಡೆಗೊಳಿಸಿದೆ. ಹೀಗಾಗಿ ಎಪ್ರಿಲ್ 16 ರಿಂದ ಆರಂಭವಾಗಬೇಕಿದ್ದ ಜೆಇಇ ಮುಖ್ಯ ಪರೀಕ್ಷೆ ಈಗ ಪರಿಷ್ಕರಣೆಗೊಂಡು ಎಪ್ರಿಲ್ 21 ರಿಂದ ಆರಂಭವಾಗಲಿದೆ. ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿಯನ್ನು NTAಯ ಅಧಿಕೃತ ವೆಬ್‌ತಾಣ nta.ac.in ನಲ್ಲಿ ಪರಿಶೀಲನೆ ನಡೆಸಲು ಕೋರಲಾಗಿದೆ.

2022-23 ರ ಶೈಕ್ಷಣಿಕ ವರ್ಷಕ್ಕೆ JEE (ಮುಖ್ಯ) - 2021 ಸೆಷನ್ - 1ರ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಮಧ್ಯೆ ಬೋರ್ಡ್​ ಪರೀಕ್ಷೆಯ ದಿನಾಂಕ ಮತ್ತು ಜೆಇಇ ಮುಖ್ಯ ಪರೀಕ್ಷೆಯ ದಿನಾಂಕಗಳು ಒಂದೇ ಸಮಯದಲ್ಲಿ ಬರುವುದರಿಂದ ಪರೀಕ್ಷೆಯನ್ನು ಮುಂದೂಡುವಂತೆ ವಿದ್ಯಾರ್ಥಿ ಸಮುದಾಯ ನಿರಂತರ ಬೇಡಿಕೆ ಇಟ್ಟಿತ್ತು. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು JEE Main 2022 ಪರೀಕ್ಷೆಯನ್ನು ಮುಂದೂಡಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ JEE ಮುಖ್ಯ ಪರೀಕ್ಷೆಯು ಏಪ್ರಿಲ್ 21, 24, 25, 29 ಮತ್ತು ಮೇ 1, 4 ರಂದು ನಡೆಯಲಿದೆ.

ಅಭ್ಯರ್ಥಿಗಳು ಏಪ್ರಿಲ್ 2022 ರ ಎರಡನೇ ವಾರದಿಂದ ಪ್ರವೇಶಪತ್ರವನ್ನು (admit card) ಡೌನ್‌ಲೋಡ್ ಮಾಡಲು ಪ್ರಾರಂಭಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ www.nta.ac.in ಅಥವಾ jeemain.nta.nic.in ನ ಅಧಿಕೃತ ವೆಬ್‌ಸೈಟ್‌ಗಳಿಗೆ ನಿಯಮಿತವಾಗಿ ಭೇಟಿ ನೀಡುವಂತೆ ಸೂಚನೆ ನೀಡಲಾಗಿದೆ. JEE ಮುಖ್ಯ ಪರೀಕ್ಷೆ - 2022ಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು 011- 40759000/011-69227700 ಗೆ ಸಂಪರ್ಕಿಸಬಹುದು ಅಥವಾ jeemain@nta.ac.in ಗೆ ಈ ಮೇಲ್ ಮಾಡಿ ವಿಚಾರಿಸಬಹುದು.

ಶುಲ್ಕ ಕಿರುಕುಳ, ಖಾಸಗಿ ಶಾಲೆಗಳಿಗೆ ಬಿಸಿ ಮುಟ್ಟಿಸಲು ಮುಂದಾದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ: 2021-22ನೇ ಸಾಲಿನ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ (PUC Exmas) ಅಂತಿಮ ವೇಳಾಪಟ್ಟಿ (2nd PUC Final Time Table) ಪ್ರಕಟವಾಗಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಇದು ಅಂತಿಮ ವೇಳಾಪಟ್ಟಿಯಾಗಿದ್ದು, ಇನ್ನೂ ಮುಂದೆ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಪಿಯು ಬೋರ್ಡ್ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 18ರಂದು ಹಿಂದಿ ಪರೀಕ್ಷೆ

PhD Not Mandatory: ಪ್ರಾಧ್ಯಾಪಕರಾಗಲು ಪಿಎಚ್‌ಡಿ ಕಡ್ಡಾಯವಲ್ಲ, UGC ಸುತ್ತೋಲೆ!