ಶಿಕ್ಷಕರಿಗೆ ಗುಡ್‌ನ್ಯೂಸ್: ಸರ್ಕಾರಿ ನೌಕರರಂತೆ ಅನುದಾನಿತ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ?

ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ‘ಜ್ಯೋತಿ ಸಂಜೀವಿನಿ’ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಸಾಧಕ, ಬಾಧಕಗಳನ್ನು ಚರ್ಚಿಸಲು ಮುಂದಿನ ವಾರ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ಕರೆಯುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.

Jyoti Sanjeevini plan will extend for subsidized teachers too at benglauru rav

ಬೆಂಗಳೂರು (ಸೆ.10) :  ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ‘ಜ್ಯೋತಿ ಸಂಜೀವಿನಿ’ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಸಾಧಕ, ಬಾಧಕಗಳನ್ನು ಚರ್ಚಿಸಲು ಮುಂದಿನ ವಾರ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ಕರೆಯುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶನಿವಾರ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ‘ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಸಮಾವೇಶ’ದಲ್ಲಿ ಪಾಲ್ಗೊಂಡು ಮಾತನಾಡಿ ಅವರು ಈ ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ರಾಜಗೋಪಾಲ್‌ ಅವರು, ಜ್ಯೋತಿ ಸಂಜೀವಿನಿ, ಹಳೆ ಪಿಂಚಣಿ ಯೋಜನೆ, ಕಾಲ್ಪನಿಕ ವೇತನ ಜಾರಿ, ಶಾಲಾ ನೋಂದಣಿ ನವೀಕರಣಕ್ಕೆ ಇರುವ ಮಾನದಂಡಗಳನ್ನು ಸರಳೀಕರಿಸುವುದು ಸೇರಿದಂತೆ ಅನುದಾನಿತ ಶಿಕ್ಷಕರ 13 ಬೇಡಿಕೆಗಳನ್ನು ಈಡೇರಿಸಬೇಕೆಂದು ಉಪಸ್ಥಿತರಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ದಿನೇಶ್‌ ಗುಂಡೂರಾವ್‌ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

 

ಉಡುಪಿ: ಕೊನೆಗೂ ಕಣ್ತೆರೆದ ಇಲಾಖೆ: ಶಿಕ್ಷಕರಿಲ್ಲದ‌ ಶಾಲೆಗೆ ಖಾಯಂ ಶಿಕ್ಷಕರ ನೇಮಕ

ಈ ಬೇಡಿಕೆಗಳ ಕುರಿತು ತಮ್ಮ ಭಾಷಣದಲ್ಲಿ ಪ್ರತಿಕ್ರಿಯೆ ನೀಡಿದ ದಿನೇಶ್‌ ಗುಂಡೂರಾವ್‌, ‘ಜ್ಯೋತಿ ಸಂಜೀವಿನಿ ಇಲಾಖೆಯ ಮಟ್ಟದ ಯೋಜನೆಯಲ್ಲ. ಸರ್ಕಾರ ಇಡೀ ಸರ್ಕಾರಿ ನೌಕರರಿಗೆ ನರರೋಗ, ಕ್ಯಾನ್ಸರ್‌ ಸೇರಿದಂತೆ ವಿವಿಧ ಗಂಭೀರ ಕಾಯಿಲೆಗಳಿಗೆ ಆರೋಗ್ಯ ಸುರಕ್ಷಾ ಟ್ರಸ್ಟ್‌ಅಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕಲ್ಪಿಸುವ ಯೋಜನೆ. ಇದನ್ನು ಅನುದಾನಿತ ಶಿಕ್ಷಕರಿಗೂ ವಿಸ್ತರಿಸುವ ನಿರ್ಧಾರ ಸರ್ಕಾರದ ಮಟ್ಟದಲ್ಲೇ ಆಗಬೇಕು. ಹಾಗಾಗಿ ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಬೇಕಾಗುತ್ತದೆ’ ಎಂದರು.

‘ಅದಕ್ಕೂ ಮುನ್ನ ರಾಜ್ಯದಲ್ಲಿ ಎಷ್ಟುಜನ ಅನುದಾನಿತ ಶಿಕ್ಷಕರಿದ್ದಾರೆ? ಅವರೆಲ್ಲಾ ಸೇರಿ ಎಷ್ಟುಪ್ರೀಮಿಯಂ ಕಟ್ಟಬಹುದು? ಸರ್ಕಾರದಿಂದ ಎಷ್ಟುಹಣ ಒದಗಿಸಬೇಕಾಗಬಹುದು ಎಂಬೆಲ್ಲಾ ಸಾಧಕ, ಬಾಧಕಗಳ ಬಗ್ಗೆ ಅಂದಾಜು ಮಾಹಿತಿ ಸಿದ್ಧಪಡಿಸಿಕೊಂಡು ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾಗುತ್ತದೆ. ಹಾಗಾಗಿ ಮುಂದಿನ ವಾರ ಸಂಘದ ಪದಾಧಿಕಾರಿಗಳ ಸಭೆ ಕರೆದು ಈ ಬಗ್ಗೆ ಮಾಹಿತಿ ಪಡೆಯುತ್ತೇನೆ’ ಎಂದು ಹೇಳಿದರು.

ಶಿಕ್ಷಣ ಮಂತ್ರಿಗಳೇ ಇಲ್ನೋಡಿ.! 116 ವರ್ಷದ ಅ.ಹಿ.ಪ್ರಾ. ಶಾಲೆಗೆ ಶಿಕ್ಷಕರೇ ಇಲ್ಲ

ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಸಂಘದಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಹಲವು ಶಿಕ್ಷಕರನ್ನು ಸನ್ಮಾನಿಸಲಾಯಿತು. ವಿಧಾನ ಪರಿಷತ್‌ನ ಹಾಲಿ ಸದಸ್ಯ ಅ.ದೇವೇಗೌಡ, ಮಾಜಿ ಸದಸ್ಯ ಪುಟ್ಟಣ್ಣ, ರಾಜ್ಯ ಪದವೀಧರ ವೇದಿಕೆ ಅಧ್ಯಕ್ಷ ರಾಮೋಜಿಗೌಡ, ಸಮಾಜ ಸೇವಕ ಎಚ್‌.ಕೆ.ಶ್ರೀಕಂಠ, ಟೀಚ​ರ್‍ಸ್ ಮ್ಯಾನೇಜ್ಮೆಂಟ್‌ ಫೋರಂ ಅಧ್ಯಕ್ಷ ಎ.ಪಿ.ರಂಗನಾಥ್‌, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಚಿತ್ರಕಲಾ ಸಿ.ಎಂ.ನಾಗರಾಜ್‌ ಮತ್ತಿತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios