2nd PUC Result 2022; ವೆಬ್‌ಸೈಟ್ ನಲ್ಲಿ 12 ಗಂಟೆಗೆ ಫಲಿತಾಂಶ ಪ್ರಕಟ, ನೋಡುವುದು ಹೇಗೆ?

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇಂದು ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದ್ದು, 12 ಗಂಟೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Karnataka 2nd PUC Result 2022  How to check official-website  Roll no wise SMS  gow

ಬೆಂಗಳೂರು (ಜೂನ್.18): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಪ್ರಕಟಿಸಲಿದ್ದಾರೆ ಆ ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಮಲ್ಲೇಶ್ವರಂ ನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ (department of pre university education) ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.  ಬಳಿಕ  ಅಧಿಕೃತ ವೆಬ್‌ಸೈಟ್‌ www.karresults.nic.in  ಪಿಯುಸಿ ಫಲಿತಾಂಶವು 12 ಗಂಟೆಗೆ ದೊರೆಯಲಿದೆ. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್‌ ಸಂಖ್ಯೆಗೆ ಕೂಡ ಫಲಿತಾಂಶ ಕಳುಹಿಸಲಾಗುವುದು ಎಂದು ಇಲಾಖೆ ತಿಳಿಸಿದೆ. 

ಹಿಂದೂ ಎಂದು ಬರೆದಿದ್ದಕ್ಕೆ ಮೊರಾರ್ಜಿ ಶಾಲೆಯಲ್ಲಿ 71 ವಿದ್ಯಾರ್ಥಿಗಳಿಗಿಲ್ಲ ಪ್ರವೇಶ!

 

ಪಿಯುಸಿ ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ?

  • ಅಭ್ಯರ್ಥಿಗಳು ಮೊದಲಿಗೆ  www.karresults.nic.inಗೆ ಭೇಟಿ ನೀಡಿ
  • ಪರದೆಯಲ್ಲಿ ಕಾಣುವ  PUC Results to be announced ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಂತರ ನಿಮ್ಮ ನೊಂದಣಿ  ಸಂಖ್ಯೆಯನ್ನು  ಎಂಟ್ರಿ ಮಾಡಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿದರೇ  ಫಲಿತಾಂಶ ಲಭ್ಯವಾಗಲಿದೆ.
  • ಬಳಿಕ ನಿಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ
  • ಇದಲ್ಲದೆ ವಿದ್ಯಾರ್ಥಿಗಳು ನೋಂದಾಯಿಸಿರುವ  ಮೊಬೈಲ್‌ ಸಂಖ್ಯೆಗೆ ಕೂಡ ಫಲಿತಾಂಶ ಬರಲಿದೆ.

ದ್ವಿತೀಯ ಪಿಯುಸಿ ಫಲಿತಾಂಶದ ಕ್ಷಣಕ್ಷಣದ ಮಾಹಿತಿಯನ್ನು ಇಲ್ಲಿ ತಿಳಿಯಿರಿ: Karnataka 2nd PUC Result 2022 LIVE updates: ದ್ವಿತೀಯ ಪಿಯುಸಿ ಫಲಿತಾಂಶ 11.30ಕ್ಕೆ

ಈ ಬಾರಿ ಪಿಯುಸಿ ಪರೀಕ್ಷೆ ಸಮಯದಲ್ಲಿ ಹಿಜಾಬ್ ಗಲಾಟೆ ದೇಶಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ವಿದ್ಯಾರ್ಥಿಗಳು ಹಿಜಾಬ್‌ ಧರಿಸದೇ ಆಡಳಿತ ಮಂಡಳಿಗಳು ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗುವಂತೆ ಹೈಕೋರ್ಚ್‌ ನೀಡಿದ್ದ ಆದೇಶದ ನಡುವೆಯೇ ಏ.22 ರಿಂದ ಮೇ 18ರ ವರೆಗೆ ಪರೀಕ್ಷೆಗಳು ನಡೆದಿದ್ದವು. ಕೆಲ ವಿದ್ಯಾರ್ಥಿಗಳು ಹೈಕೋರ್ಚ್‌ ನೀಡಿದ್ದ ಆದೇಶವನ್ನು ದಿಕ್ಕರಿಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ.   1076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 6,84,255 ವಿದ್ಯಾರ್ಥಿಗಳು ಹಾಜರಾಗಿದ್ದರು. ಸರಳವಾಗಿ ಪ್ರಶ್ನೆ ಪತ್ರಿಕೆ ನಿಡಿದ್ದರಿಂದ ಒಟ್ಟಾರೆ ಉತ್ತಮ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.

ಇಂದು ಬೆಳಗ್ಗೆ 11.30ಕ್ಕೆ ಪಿಯುಸಿ ಫಲಿತಾಂಶ: ಮೊಬೈಲಲ್ಲೇ ರವಾನೆ

2021-22ನೇ ಸಾಲಿನಲ್ಲಿ, ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 

Latest Videos
Follow Us:
Download App:
  • android
  • ios