93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ಎರಡನೇ ಸ್ಥಾನ, ಬೆಂಗಳೂರು ದಕ್ಷಿಣ ಮೂರನೇ ಸ್ಥಾನ ಮತ್ತು ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದಿತ್ತು.
Karnataka PUC result: 3 ಗಂಟೆಗೆ ವೆಬ್‌ಸೈಟ್ ನಲ್ಲಿ ಫಲಿತಾಂಶ ಲಭ್ಯ, ರಿಸ್ಟಲ್ ಹೀಗೆ ಚೆಕ್ ಮಾಡಿ

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿದ್ದ ದ್ವಿತೀಯ ಪಿಯುಸಿ (PUC II) ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯನಿರ್ಣಯ ಮಂಡಳಿ (KSEAB) ಈ ಮಹತ್ವದ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಸುಲಭವಾಗಿ ಪರಿಶೀಲಿಸಬಹುದು.
ಇದಕ್ಕಾಗಿ ವೆಬ್ಸೈಟ್ಗೆ ಭೇಟಿ ನೀಡಿ, ತಮ್ಮ ರಿಜಿಸ್ಟ್ರೇಶನ್ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆ ಮೇಲೆ ಪ್ರದರ್ಶವಾಗುತ್ತದೆ. ಇದಲ್ಲದೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿವಿಧ ಮಾರ್ಗಗಳಲ್ಲಿ ಫಲಿತಾಂಶ ಲಭ್ಯವಿರುತ್ತದೆ. ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜೊತೆಗೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕವೂ ಫಲಿತಾಂಶ ಮಾಹಿತಿ ರವಾನೆಯಾಗಲಿದೆ.
Karnataka 2nd PUC result 2026 Live:2025ರಲ್ಲಿ ಯಾರು ಫಸ್ಟ್? ಯಾರು ಲಾಸ್ಟ್?
Karnataka 2nd PUC result 2026 Live:2025ರಲ್ಲಿ ಸೆಕೆಂಡ್ ಪಿಯುಸಿ ಒಟ್ಟು ಫಲಿತಾಂಶ ಹೀಗೆ ಬಂದಿತ್ತು
ಕಲಾ ವಿಭಾಗ ಶೇ. 53.29
ವಾಣಿಜ್ಯ ವಿಭಾಗ ಶೇ. 76.07
ವಿಜ್ಞಾನ ವಿಭಾಗ ಶೇ. 82.54
Karnataka 2nd PUC result 2026 Live:2025ರಲ್ಲಿ ಕಾಲೇಜುವಾರು ಫಲಿತಾಂಶ ಹೀಗಿತ್ತು
ಸರ್ಕಾರಿ ಕಾಲೇಜು: 57 ಪರ್ಸೆಂಟ್, ಅನುದಾನ ರಹಿತ: 82.66, ಅನುದಾನಿತ ಪದವಿ ಪೂರ್ವ ಕಾಲೇಜು: 62.6, ಬಿಬಿಎಂಪಿ ಲಿಮಿಟ್: 68.88 ಪರ್ಸೆಂಟ್, ವಸತಿ ಶಾಲಾ ಕಾಲೇಜು: 86.18, ವಿಭಜಿತ ಕಾಲೇಜು: 78.58 ಪರ್ಸೆಂಟ್ ಫಲಿತಾಂಶ ಬಂದಿತ್ತು.
Karnataka 2nd PUC result 2026 Live: ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆ
ಈ ಬಾರಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯದಾದ್ಯಂತ ನಡೆದಿದ್ದವು. ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆದಿವೆ. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದರು.
Karnataka 2nd PUC result 2026 Live:ಈ ಬಾರಿ ಮೊದಲ ಬಾರಿಗೆ ಡಿಜಿಲಾಕರ್ ಸೌಲಭ್ಯ
ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಮತ್ತೊಂದು ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದೆ. ಡಿಜಿಲಾಕರ್ https://www.digilocker.govt.in ಮೂಲಕವೂ ಅಂಕಪಟ್ಟಿ ಪಡೆಯಲು ಅವಕಾಶ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಡಿಜಿಟಲ್ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಕೊಳ್ಳಲು ಸಾಧ್ಯವಾಗುತ್ತದೆ.
Karnataka 2nd PUC result 2026 Live:ಸಂಜೆ 6.15 ಗಂಟೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ
ಫಲಿತಾಂಶ ಪ್ರಕಟವಾದ ನಂತರ, ಇಂದು ಸಂಜೆ 6.15 ಗಂಟೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿ ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ನಡೆಯಲಿದ್ದು, ಫಲಿತಾಂಶದ ವಿವರಗಳು, ಪಾಸಿಂಗ್ ಪ್ರಮಾಣ ಹಾಗೂ ಇತರ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.