ಇಂದು ಪ್ರಕಟವಾಗಬೇಕಿದ್ದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ!
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ನಡೆಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಬೆಂಗಳೂರು (ಏ.8): ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಆಯಾ ಶಾಲೆಗಳಲ್ಲಿ ಸೋಮವಾರ (ಏ.8) ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿತ್ತು. ಆದರೆ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಆಚಾರ್ಯ ಕಾಲೇಜಿನಲ್ಲಿ ಹೈಟೆಕ್ ಸೌಲಭ್ಯಗಳು, ಭವಿಷ್ಯದ ನಾಯಕರಾಗಲು ಇಲ್ಲಿ ಶಿಕ್ಷಣ ಉತ್ತಮ ಆಯ್ಕೆ
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆಯ ಮೌಲ್ಯಮಾಪನ ಕಾರ್ಯದಲ್ಲಿ ಅನೇಕ ಲೋಪದೋಷಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ರುಪ್ಸಾ ಇದನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಲೇರಿತ್ತು. ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ತನ್ನ ದೂರಿನಲ್ಲಿ ಮೌಲ್ಯಾಂಕನದ ಫಲಿತಾಂಶವನ್ನು ಆಯಾ ಶಾಲೆಗಳಿಗೆ ಕಳುಹಿಸಿದ್ದು ಇದರಲ್ಲಿ ಅನೇಕ ಲೋಪದೋಷಗಳು ಕಂಡುಬಂದಿವೆ. ವಿವಿಧ ಶಾಲಾ ಆಡಳಿತ ಮಂಡಳಿಗಳು ವಾಟ್ಸ್‌ಅಪ್, ಇಮೇಲ್ ಮೂಲಕ ಮಾಹಿತಿ ನೀಡಿವೆ. ವಿದ್ಯಾರ್ಥಿಗಳು ಸರಿಯಾದ ಉತ್ತರ ಬರೆದಿದ್ದರೂ ಸೂಕ್ತ ಅಂಕ ನೀಡಿಲ್ಲ ಎಂಬುದು ತಿಳಿದುಬಂದಿದೆ. ಉತ್ತಮವಾಗಿ ಓದುವ ಮಕ್ಕಳಿಗೆ ಕಡಿಮೆ ಅಂಕ ನೀಡಿರುವುದು. ಫಲಿತಾಂಶದ ಅಂಕಿ, ಅಂಶಗಳ ಲೆಕ್ಕವನ್ನೇ ತಪ್ಪಾಗಿ ಮಾಡಿರುವುದು. ಕೆಲ ವಿಷಯಗಳಲ್ಲಿ ಗರಿಷ್ಠ ಅಂಕಗಳಿಗಿಂತ ಹೆಚ್ಚು ಅಂಕ ನೀಡಿರುವಂತಹ ಪ್ರಕರಣಗಳು ಬೆಳಕಿಗೆ ಅಂತ ಕಿಡಿ ಕಾರಿದೆ.
2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿತ್ತು. ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳ ಸಹಿತ ಶಾಲಾವಾರು ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸಿರುವ ಪ್ರತಿಯನ್ನು ಆಯಾ ಶಾಲೆಗಳಿಗೆ ರವಾನಿಸಲಾಗಿತ್ತು.
UPSC NEET JEE ಲೋಕಸಭೆ ಚುನಾವಣೆ ಕಾರಣದಿಂದ ದೇಶದ ಪ್ರಮುಖ ಪರೀಕ್ಷೆಗಳ ದಿನಾಂಕ ಬದಲು!
ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಸೋಮವಾರ ಶಾಲಾ ಹಂತದಲ್ಲಿ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶ ಪ್ರಕಟಿಸಿರುವ ಬಗ್ಗೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಡಳಿಗೆ ಹಾಗೂ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಗಳು ತಮ್ಮ ಕಚೇರಿಗೆ ಮಾಹಿತಿ ನೀಡಬೇಕೆಂದು ಮಂಡಳಿಯ ಅಧ್ಯಕ್ಷರು ಸೂಚಿಸಿದ್ದರು. ಆದರೆ ಇದಕ್ಕೆ ಈಗ ತಡೆ ನೀಡಲಾಗಿದೆ.