Karnataka Budget 2023: ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ, 10ನೇ ತರಗತಿವರೆಗೆ ವಿಸ್ತರಣೆ
ಕಾಂಗ್ರೆಸ್ ಸರಕಾರ 2023ನೇ ಸಾಲಿನ ಹೊಸ ಬಜೆಟ್ ಅನ್ನು ಮಂಡಿಸಿದ್ದು, ಹಲವು ಯೋಜನೆಗಳನ್ನು ಘೋಷಿಸಿದೆ. ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ ಬಾಳೆಹಣ್ಣನ್ನು ವಿತರಣೆ ಘೋಷಿಸಿದೆ.
ಬೆಂಗಳೂರು (ಜು.7): ಕಾಂಗ್ರೆಸ್ ಸರಕಾರ 2023ನೇ ಸಾಲಿನ ಹೊಸ ಬಜೆಟ್ ಅನ್ನು ಮಂಡಿಸಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಭರ್ಜರಿ ಸೌಲಭ್ಯ ಒದಿಸಿದೆ. ಸರಕಾರಿ ಶಾಲೆ ಮತ್ತು ಕಾಲೇಜುಗಳ ಉನ್ನತೀಕರಣಕ್ಕೆ ಭರ್ಜರಿ ಕೊಡುಗೆ ಘೋಷಿಸಿದೆ.
ಸರಕಾರಿ ಶಾಲಾ ಕೊಠಡಿಗಳಿಗೆ 310 ಕೋಟಿ ರೂ ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋ ವೆಚ್ಚದಲ್ಲಿ 8,311 ಕೊಠಡಿಗಳ ನಿರ್ಮಾಣ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವ ಗುರಿ.
ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ 5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ.
Karnataka Budget 2023: ಮೇಕೆದಾಟು, ಭದ್ರಾ ಮೇಲ್ದಂಡೆ, ಎತ್ತಿಹೊಳೆ.. ಜಲಸಂಪನ್ಮೂಲಕ್ಕೆ ಸರ್ಕಾರ ಇಟ್ಟಿದ್ದೆಷ್ಟು!
100 ಕೋಟಿ ರೂ.ಗಳ ವೆಚ್ಚದಲ್ಲಿ ಹಳೆಯ ಶಾಲಾ-ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 1,833 ಶಾಲೆಗಳು , 724 ಪದವಿ ಪೂರ್ವ ಕಾಲೇಜು ಕೊಠಡಿಗಳ ದುರಸ್ತಿ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನ ಕನಿಷ್ಠ 20,000 ರೂ. ದಿಂದ 45,000 ರೂ. ಗಳವರೆಗೆ ಹೆಚ್ಚಿಳ. 47,272 ಶಾಲೆಗಳು ಹಾಗೂ 1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ ಬಾಳೆಹಣ್ಣನ್ನು ವಿತರಣೆ ಪ್ರಸಕ್ತ ಸಾಲಿನಿಂದ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಣೆ. ಇದಕ್ಕಾಗಿ 280 ಕೋಟಿ ರೂ.ಗಳ ವೆಚ್ಚ. 60 ಲಕ್ಷ ಮಳು ಫಲಾನುಭವಿಗಳು.
ಮಕ್ಕಳ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮ. 'ಮರುಸಿಂಚನ' ಎಂಬ ಹೊಸ ಯೋಜನೆಯಡಿ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿ ಸಲು ವಿಶೇಷ ತರಬೇತಿ.
ಶಾಲಾ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸುವ ಸ್ಪಾಟ್ಸ್ ತಂತ್ರಾಂಶವನ್ನು SATS 2.0 ಎಂದು ಉನ್ನತೀಕರಣ.
Karnataka Budget 2023: ಬೆಂಗಳೂರಲ್ಲಿ ಹೊಸ ಟೆಕ್ನಾಲಜಿ- ಏರೋಸ್ಪೇಸ್ ಪಾರ್ಕ್, ಕೈಗಾರಿಕಾ ಟೌನ್‌ಷಿಪ್ ಸ್ಥಾಪನೆ
ಹೊಸ ಕಲ್ಪನೆಯನ್ನು ವಾಸ್ತವಕ್ಕೆ ತರಲು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್ ಲ್ಯಾಬ್‌ಗಳ ಸ್ಥಾಪನೆ. 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ 2 ಕೋಟಿ ರೂ.ಗಳ ವೆಚ್ಚದಲ್ಲಿ ನಾಲ್ಕು ಪ್ರಯೋಗಾಲಯಗಳ ಸ್ಥಾಪನೆ.
ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ಶೈಕ್ಷಣಿಕ ವರ್ಷದಲ್ಲಿ 5 ಲಕ್ಷ ಸಸಿ ನೆಡುವ ವಿನೂತನ ಸಸ್ಯ ಶ್ಯಾಮಲ ಕಾರ್ಯಕ್ರಮ.
ರಾಜ್ಯದ ಸಾಹಿತಿಗಳ ಹಾಗೂ ಪ್ರಕಾಶಕರ ಬೇಡಿಕೆಗಳಿಗೆ ಸ್ಪಂದಿಸಿ ಸಾರ್ವಜನಿಕ ಗ್ರಂಥಾಲಯಗಳಿಗೆ ಉತ್ತಮ ಮಸ್ತಕಗಳನ್ನು ಖರೀದಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ.