ಜುಲೈ 30ರಂದು ಸಿಇಟಿ ಫಲಿತಾಂಶ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮಾಹಿತಿ

ವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.

Karnataka CET exam result Announce On 30th july Says Ashwath Narayan rbj

ಬೆಂಗಳೂರು, (ಜುಲೈ.25): ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆದಿದ್ದ ಸಿಇಟಿ ಪರೀಕ್ಷೆಯ((Common Entrance Test - CET) ) ಫಲಿತಾಂಶ ಇದೇ ಜಲೈ 30 ಪ್ರಕಟವಾಗಲಿದೆ. 

ಈ ಬಗ್ಗೆ ಸ್ವತಃ  ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದು, https://cetonline.karnataka.gov.in/kea/ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2022ರ ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು. CET ಬರೆದಿದ್ದ CBSE, ICSE ವಿದ್ಯಾರ್ಥಿಗಳು KEA ವೆಬ್‌ಸೈಟ್ ನಲ್ಲಿ ತಮ್ಮ ಅಂಕಗಳನ್ನು ಜು.26ರೊಳಗೆ ಅಪ್ಲೋಡ್ ಮಾಡಲು ಸೂಚಿಸಲಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಟ್ವೀಟ್ ಮಾಡಿದ್ದಾರೆ.

2023ರಿಂದ ಕರ್ನಾಟಕದಲ್ಲಿ ಒಂದೇ ಸಿಇಟಿ: ಅಶ್ವತ್ಥನಾರಾಯಣ

ಇಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಇದೇ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆದಿದ್ದವು.ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿಗೆ ನೊಂದಣಿ ಮಾಡಿಕೊಂಡಿದ್ದರು.
 
2023ರಿಂದ ಕರ್ನಾಟಕದಲ್ಲಿ ಒಂದೇ ಸಿಇಟಿ
ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್‌-ಕೆ ಪರೀಕ್ಷೆಯನ್ನು ರದ್ದುಪಡಿಸಿ ಸಿಇಟಿ ವ್ಯವಸ್ಥೆಯಡಿ ತರಲು ಸರ್ಕಾರ ತೀರ್ಮಾನಿಸಿದೆ.  ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಒಕ್ಕೂಟ (ಕ್ಯುಪೇಕಾ) ಜತೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್‌-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರ್ಕಾರದ ಸಿಇಟಿ ವ್ಯವಸ್ಥೆಯಡಿ ತರಲಾಗುವುದು. ಇದಕ್ಕೆ ಕ್ಯುಪೇಕಾ ಆಸಕ್ತಿ ತೋರಿವೆ. ಈ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಖಾಸಗಿ ಕಾಲೇಜುಗಳು ದುಬಾರಿ ಶುಲ್ಕದ ಮ್ಯಾನೇಜ್ಮೆಂಟ್‌ ಸೀಟುಗಳಿಗಾಗಿ ತಾವೇ ನಡೆಸುತ್ತಿರುವ ಕಾಮೆಡ್‌-ಕೆ ಪರೀಕ್ಷೆಯನ್ನು ನಿಲ್ಲಿಸಲು ಮುಂದಾಗಿವೆ. ಇದರ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಸಮಿತಿ ರಚಿಸಲಾಗುವುದು. ಇದನ್ನು ಆಧರಿಸಿ ಕ್ಯುಪೇಕಾ ಜತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು. ಕಾಮೆಡ್‌-ಕೆ ಸ್ಥಗಿತಗೊಂಡರೆ ಸರ್ಕಾರವು ಸಿಇಟಿ ಪರೀಕ್ಷೆ ನಡೆಸಲಿದೆ. ಇದರಲ್ಲಿ ವಿದ್ಯಾರ್ಥಿಗಳು ಪಡೆಯುವ ರಾರ‍ಯಂಕಿಂಗ್‌ ಆಧರಿಸಿ ಈಗಿನಂತೆಯೇ ಸೀಟು ಹಂಚಿಕೆ ಮಾಡಲಾಗುವುದು. ಸಿಇಟಿ ಪರೀಕ್ಷೆ ಒಂದೇ ನಡೆಸುವುದರಿಂದ ಪ್ರಸ್ತುತ ಆಗುತ್ತಿರುವ ಗೊಂದಲ ಮತ್ತು ಅಪವ್ಯಯ ಎರಡೂ ನಿವಾರಣೆಯಾಗಲಿವೆ ಎಂದು ಎಂದಿದ್ದಾರೆ.

Latest Videos
Follow Us:
Download App:
  • android
  • ios