KCET 2022 Exam: ಜೂನ್ 16ರಿಂದ ಸಿಇಟಿ ಪರೀಕ್ಷೆ ಆರಂಭ
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರು(ಮಾ.28): ವೃತ್ತಿಶಿಕ್ಷಣಕ್ಕೆ (Vocational Education) ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (Common Entrance Test - CET) ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (C. N. Ashwath Narayan) ಹೇಳಿದ್ದಾರೆ.
ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಇದರಂತೆ ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
8.7 ಲಕ್ಷ ಮಕ್ಕಳಿಗೆ SSLC ಪರೀಕ್ಷೆ, ರಾಜ್ಯದ 3444 ಕೇಂದ್ರಗಳಲ್ಲಿ ಎಕ್ಸಾಂ
ಇದರಂತೆ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ.
ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂಥವರಿಗೇ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ.
ಹಿಜಾಬ್ ಧರಿಸದೇ SSLC ಪರೀಕ್ಷೆ ಬರೆಯುವಂತೆ ಮುಸ್ಲಿಂ ಮುಖಂಡನ ಮನವಿ
ಇಂದಿನಿಂದ SSLC ಪರೀಕ್ಷೆ : ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಹಿಜಾಬ್ ವಿವಾದದ ನಡುವೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸೋಮವಾರದಿಂದ ಆರಂಭವಾಗಿದೆ. ಒಟ್ಟು 3444 ಪರೀಕ್ಷಾ ಕೇಂದ್ರಗಳಲ್ಲಿ 8,73,846 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಕೋವಿಡ್ ಕಾರಣದಿಂದ 2020-21ನೇ ಸಾಲಿನ ಪರೀಕ್ಷೆ ನಡೆಸದೆ ಸಾಮೂಹಿಕವಾಗಿ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿತ್ತು. ಈ ವರ್ಷ ಯಾವುದೇ ಕೋವಿಡ್ ಭೀತಿ ಇಲ್ಲದೆ ಎಲ್ಲೆಡೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಎಲ್ಲ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಪರೀಕ್ಷಾ ಕೇಂದ್ರ ಸುತ್ತಲ 200 ಮೀಟರ್‌ವರೆಗೆ ಸ್ಥಳೀಯ ಜಿಲ್ಲಾಡಳಿತಗಳು ನಿಷೇಧಾಜ್ಞೆ ಜಾರಿಗೊಳಿಸಿವೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪರೀಕ್ಷೆಗೆ ವಿದ್ಯಾರ್ಥಿಗಳು ಆಯಾ ಶಾಲೆಯ ನಿಗದಿತ ಸಮವಸ್ತ್ರ ತೊಟ್ಟು ಮಾತ್ರವೇ ಪರೀಕ್ಷಾ ಕೇಂದ್ರಗಳಿಗೆ ಬರಬೇಕೆಂದು ಈಗಾಗಲೇ ಶಿಕ್ಷಣ ಇಲಾಖೆ ಸ್ಪಷ್ಟಆದೇಶ ಮಾಡಿದೆ.
ರಾಜ್ಯದ 5,717 ಸರ್ಕಾರಿ ಶಾಲೆಗಳು, 3,412 ಅನುದಾನಿತ ಹಾಗೂ 6,258 ಅನುದಾನರಹಿತ ಶಾಲೆಗಳ ಒಟ್ಟು 15,387 ಪ್ರೌಢಶಾಲೆಗಳಿಂದ ಈ ಬಾರಿ 4,52,732 ಗಂಡು ಮಕ್ಕಳು, 4,21,110 ಹೆಣ್ಣು ಮಕ್ಕಳು ಸೇರಿ ಒಟ್ಟು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಸರ್ಕಾರಿ ಶಾಲೆಯ 3,76,685, ಅನುದಾನಿತ ಶಾಲೆಯ 2,23,032, ಅನುದಾನರಹಿತ ಶಾಲೆಗಳ 2,74,129 ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ ನಾಲ್ವರು ತೃತೀಯ ಲಿಂಗಿಗಳು, 5,307 ವಿಶೇಷ ಚೇತನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
68 ಸಾವಿರಕ್ಕೂ ಹೆಚ್ಚು ಸಿಬ್ಬಂದಿ:ಪರೀಕ್ಷಾ ಕರ್ತವ್ಯ ನಿರ್ವಹಿಸಲು ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆಗಳ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ಕಾ$್ವಡ್, ಪೊಲೀಸ್ ವಿಭಾಗದಿಂದ ತಲಾ 3444 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೊಠಡಿ ಮೇಲ್ವಿಚಾರಣೆಗಾಗಿ 49,817 ಮಂದಿ, ಪ್ರಶ್ನೆ ಪತ್ರಿಕೆ ವಿತರಣೆಗೆ 1,266 ಮಂದಿ, 377 ಉಪ ಮುಖ್ಯ ಅಧೀಕ್ಷಕರನ್ನು ನಿಯೋಜನೆ ಮಾಡಲಾಗಿದೆ.